alex Certify ಕೊರೊನಾ ನಡುವೆಯೂ ಐಪಿಎಲ್ ಪಂದ್ಯಾವಳಿಗಳಿಗೆ ಕೊನೆಗೂ ಸ್ಥಳ ನಿಗದಿ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಕೊರೊನಾ ನಡುವೆಯೂ ಐಪಿಎಲ್ ಪಂದ್ಯಾವಳಿಗಳಿಗೆ ಕೊನೆಗೂ ಸ್ಥಳ ನಿಗದಿ

ಏಷ್ಯಾ ಕಪ್ ಮತ್ತು ಟಿ 20 ವಿಶ್ವಕಪ್ 2020 ರದ್ದಾದ ನಂತರ ಐಪಿಎಲ್ 2020ರ ದಾರಿ ಸುಗಮವಾಗಿದೆ. ಆದ್ರೆ ಪಂದ್ಯಾವಳಿ ಎಲ್ಲಿ ನಡೆಯಲಿದೆ ಎಂಬ ಪ್ರಶ್ನೆಗೆ ಈಗ ಉತ್ತರ ಸಿಕ್ಕಿದೆ. ಐಪಿಎಲ್ ಆಡಳಿತ ಮಂಡಳಿ ಅಧ್ಯಕ್ಷ ಬ್ರಿಜೇಶ್ ಪಟೇಲ್ ಐಪಿಎಲ್ ನಡೆಯುವ ಸ್ಥಳದ ಬಗ್ಗೆ ಮಾಹಿತಿ ನೀಡಿದ್ದಾರೆ.

2020 ರ ಐಪಿಎಲ್ ಯುಎಇಯಲ್ಲಿ ನಡೆಯಲಿದೆ ಎಂದು ಬ್ರಿಜೇಶ್ ಪಟೇಲ್ ಸಂದರ್ಶನವೊಂದರಲ್ಲಿ ಸ್ಪಷ್ಟಪಡಿಸಿದ್ದಾರೆ. ಐಪಿಎಲ್ ದಿನಾಂಕಗಳನ್ನು ಇನ್ನೂ ನಿರ್ಧರಿಸಲಾಗಿಲ್ಲ ಎಂದು ಬ್ರಿಜೇಶ್ ಪಟೇಲ್ ಹೇಳಿದ್ದಾರೆ.

ಮುಂದಿನ ವಾರ ಐಪಿಎಲ್ ಆಡಳಿತ ಮಂಡಳಿಯ ವಿಡಿಯೋ ಕಾನ್ಫರೆನ್ಸ್ ನಡೆಯಲಿದೆ. ಈ ವೇಳೆ ಪಂದ್ಯಾವಳಿಯ ದಿನಾಂಕಗಳು ಮತ್ತು ಕಾರ್ಯವಿಧಾನಗಳ ಬಗ್ಗೆ ಚರ್ಚೆ ನಡೆಯಲಿದೆ. ಐಪಿಎಲ್ 2020ರ ವೇಳಾಪಟ್ಟಿ ಭಾರತ ಸರ್ಕಾರದಿಂದ ಅನುಮೋದನೆ ಪಡೆದ ನಂತ್ರ ಸಿದ್ಧವಾಗಲಿದೆ.

 

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...