ಆಂಟಿಗುವಾ: ಅಂಡರ್ -19 ವಿಶ್ವಕಪ್ ಸೆಮಿಫೈನಲ್ ಪಂದ್ಯದಲ್ಲಿ ಆಸ್ಟ್ರೇಲಿಯಾ ವಿರುದ್ಧ ಭಾರತ ತಂಡ ಭರ್ಜರಿ ಜಯ ಗಳಿಸುವುದರೊಂದಿಗೆ ಸತತ 4ನೇ ಬಾರಿಗೆ ಫೈನಲ್ ಪ್ರವೇಶಿಸಿದೆ. 14 ಆವೃತ್ತಿಗಳಲ್ಲಿ ದಾಖಲೆಯ 8ನೇ ಬಾರಿಗೆ ಭಾರತ ತಂಡ ಫೈನಲ್ ತಲುಪಿದ್ದು, 5 ನೇ ಬಾರಿ ಚಾಂಪಿಯನ್ ಆಗುವ ವಿಶ್ವಾಸದಲ್ಲಿದೆ.
ಸೆಮಿಐನಲ್ ಪಂದ್ಯದಲ್ಲಿ ಮೊದಲು ಬ್ಯಾಟ್ ಮಾಡಿದ ಭಾರತ ತಂಡದ ಪರವಾಗಿ ನಾಯಕ ಯಶ್ ಧುಳ್ ಭರ್ಜರಿ ಶತಕ ಸಿಡಿಸಿದರು. ಭಾರತ ತಂಡ 50 ಓವರ್ ಗಳಲ್ಲಿ 5 ವಿಕೆಟ್ ಕಳೆದುಕೊಂಡು 290 ರನ್ ಗಳಿಸಿತು. ಗೆಲುವಿನ ಗುರಿ ಬೆನ್ನತ್ತಿದ ಆಸ್ಟ್ರೇಲಿಯಾ 41.5 ಓವರ್ ಗಳಲ್ಲಿ 194 ರನ್ ಗೆ ಎಲ್ಲಾ ವಿಕೆಟ್ ಕಳೆದುಕೊಂಡು ಸೋಲು ಕಂಡಿದೆ.
ಫೆಬ್ರವರಿ 5 ರಂದು ಭಾರತ ಮತ್ತು ಇಂಗ್ಲೆಂಡ್ ತಂಡಗಳ ನಡುವೆ ಫೈನಲ್ ಪಂದ್ಯ ನಡೆಯಲಿದೆ. ಭಾರತ ತಂಡ 5 ನೇ ಬಾರಿಗೆ ಚಾಂಪಿಯನ್ ಆಗುವ ಹುಮ್ಮಸ್ಸಿನಲ್ಲಿದೆ.