
ಐಪಿಎಲ್ ನಲ್ಲಿ ಪ್ಲೇಆಫ್ ಹಾದಿಯನ್ನು ಕಠಿಣ ಮಾಡಿಕೊಂಡಿರುವ ವಿರಾಟ್ ಕೊಹ್ಲಿ ನೇತೃತ್ವದ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡ ಕನ್ನಡ ರಾಜ್ಯೋತ್ಸವ ಶುಭಾಶಯ ಕೋರಿದೆ.
ಚಾಲೆಂಜರ್ಸ್ ಬೆಂಗಳೂರು ತಂಡದ ಆಟಗಾರರು ಶುಭಾಶಯ ಹೇಳಿದ್ದಾರೆ. ದೇವದತ್ ಪಡಿಕಲ್, ವಿರಾಟ್ ಕೊಹ್ಲಿ, ಎಬಿ ಡಿ ವಿಲಿಯರ್ಸ್ ಮೊದಲಾದ ಆಟಗಾರರು ‘ಎಲ್ಲರಿಗೂ ಕನ್ನಡ ರಾಜ್ಯೋತ್ಸವದ ಶುಭಾಶಯಗಳು’ ಎಂದು ಹೇಳಿದ್ದಾರೆ.
ಆರ್.ಸಿ.ಬಿ. ಟ್ವಿಟರ್ ಖಾತೆಯಲ್ಲಿ ಪೋಸ್ಟ್ ಮಾಡಿರುವ ಕನ್ನಡ ರಾಜ್ಯೋತ್ಸವ ಶುಭಾಶಯಗಳು ವಿಡಿಯೋ ವೈರಲ್ ಆಗಿದೆ.