alex Certify ಕೊರೊನಾ ಮಧ್ಯೆ ಮತ್ತೆ ಸಹಾಯಕ್ಕೆ ನಿಂತ ವಿರುಷ್ಕಾ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಕೊರೊನಾ ಮಧ್ಯೆ ಮತ್ತೆ ಸಹಾಯಕ್ಕೆ ನಿಂತ ವಿರುಷ್ಕಾ

Virat Kohli and Anushka Sharma have contributed Rs 5 lakh each for police welfare (Twitter)

ಕೊರೊನಾ ಸೋಂಕಿನ ಮಧ್ಯೆ ಟೀಮ್ ಇಂಡಿಯಾ ನಾಯಕ ವಿರಾಟ್ ಕೊಹ್ಲಿ ಮತ್ತೊಮ್ಮೆ ಸಹಾಯ ಮಾಡಲು ಮುಂದಾಗಿದ್ದಾರೆ. ಈ ಬಾರಿ ಅವರು ಪತ್ನಿ ಅನುಷ್ಕಾ ಶರ್ಮಾ ಅವರೊಂದಿಗೆ ಮುಂಬೈ ಪೊಲೀಸರ ಕಲ್ಯಾಣಕ್ಕಾಗಿ ಕೊಡುಗೆ ನೀಡಿದ್ದಾರೆ.

ಭಾರತೀಯ ಕ್ರಿಕೆಟ್ ತಂಡದ ನಾಯಕ ವಿರಾಟ್ ಕೊಹ್ಲಿ ಮತ್ತು ಅವರ ಪತ್ನಿ ನಟಿ ಅನುಷ್ಕಾ ಶರ್ಮಾ ತಲಾ ಐದು ಲಕ್ಷ ರೂಪಾಯಿಯನ್ನು ಮುಂಬೈ ಪೊಲೀಸರಿಗೆ ನೀಡಿದ್ದಾರೆ. ಪೊಲೀಸ್ ಕಮಿಷನರ್ ಈ ಬಗ್ಗೆ  ಟ್ವೀಟ್ ಮಾಡಿದ್ದಾರೆ.

ವಿರಾಟ್ ಕೊಹ್ಲಿ ಮತ್ತು ಅನುಷ್ಕಾ ಶರ್ಮಾ ಮುಂಬೈ ಪೊಲೀಸರ ಕಲ್ಯಾಣಕ್ಕಾಗಿ ತಲಾ 5 ಲಕ್ಷ ರೂಪಾಯಿ ನೀಡಿದ್ದಾರೆ. ಕೊರೊನಾ ವೈರಸ್ ವಿರುದ್ಧದ ಹೋರಾಟದಲ್ಲಿ ನಿಮ್ಮ ಕೊಡುಗೆ ಮುಂಬೈ ಪೊಲೀಸರಿಗೆ ಸಹಾಯ ಮಾಡುತ್ತದೆ ಎಂದು ಟ್ವೀಟ್ ಮಾಡಿದ್ದಾರೆ.

ಈ ಹಿಂದೆ ಕೋಹ್ಲಿ ಮತ್ತು ಅನುಷ್ಕಾ ಕೋವಿಡ್ -19 ವಿರುದ್ಧದ ಹೋರಾಟಕ್ಕೆ ಸಹಾಯ ಮಾಡಲು ಪ್ರಧಾನ ಮಂತ್ರಿಗಳ ಕಾಳಜಿ ನಿಧಿ ಮತ್ತು ಮಹಾರಾಷ್ಟ್ರ ಮುಖ್ಯಮಂತ್ರಿಯ ಪರಿಹಾರ ನಿಧಿಗೆ ದೇಣಿಗೆ ನೀಡಿದ್ದರು.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...