ದೇಶದಲ್ಲಿ ಕೊರೊನಾ ಲಸಿಕೆ ಅಭಿಯಾನ ನಡೆಯುತ್ತಿದೆ. ಅನೇಕ ರಾಜ್ಯಗಳಲ್ಲಿ ಲಸಿಕೆಗೆ ಬೇಡಿಕೆ ಹೆಚ್ಚಿದೆ. ಆದ್ರೆ ಲಸಿಕೆ ಪೂರೈಕೆಯಾಗ್ತಿಲ್ಲ. ಮೇ 1ರಿಂದ 18 ವರ್ಷ ಮೇಲ್ಪಟ್ಟವರಿಗೂ ಕೊರೊನಾ ಲಸಿಕೆ ಹಾಕಲಾಗ್ತಿದೆ. ಕೆಲವು ಲಸಿಕಾ ಕೇಂದ್ರಗಳಲ್ಲಿ ಲಸಿಕೆ ಪಡೆಯಲು ಜನಜಂಗುಳಿಯಿದೆ. ಟೀಂ ಇಂಡಿಯಾ ನಾಯಕ ವಿರಾಟ್ ಕೊಹ್ಲಿ ಕೂಡ ಕೊರೊನಾ ಲಸಿಕೆ ಹಾಕಿಸಿಕೊಂಡಿದ್ದಾರೆ.
ವಿರಾಟ್ ಕೊಹ್ಲಿ ಸೋಮವಾರ ಕೊರೊನಾ ಲಸಿಕೆ ಹಾಕಿಸಿಕೊಂಡಿದ್ದಾರೆ. ಮುಂಬೈನಲ್ಲಿ ಕೊರೊನಾ ಲಸಿಕೆ ಹಾಕಿಸಿಕೊಂಡ ಕೊಹ್ಲಿ, ಇನ್ಸ್ಟ್ರಾಗ್ರಾಮ್ ನಲ್ಲಿ ಫೋಟೋ ಹಂಚಿಕೊಂಡಿದ್ದಾರೆ. ಮಾಸ್ಕ್ ಧರಿಸಿರುವ ಕೊಹ್ಲಿ, ಲಸಿಕೆ ಪಡೆಯುತ್ತಿದ್ದಾರೆ. ದಯವಿಟ್ಟು ಎಷ್ಟು ಬೇಗ ಸಾಧ್ಯವೋ ಅಷ್ಟು ಬೇಗ ಲಸಿಕೆ ಹಾಕಿಸಿಕೊಳ್ಳಿ ಎಂದು ಕೊಹ್ಲಿ ಶೀರ್ಷಿಕೆ ಹಾಕಿದ್ದಾರೆ.
ಕೊಹ್ಲಿ ಮಾತ್ರವಲ್ಲ ವೇಗದ ಬೌಲರ್ ಇಶಾಂತ್ ಕೂಡ ಕೊರೊನಾ ಲಸಿಕೆ ಮೊದಲ ಡೋಸ್ ಹಾಕಿಸಿಕೊಂಡಿದ್ದಾರೆ. ಲಸಿಕಾ ಕೇಂದ್ರದ ಫೋಟೋವನ್ನು ಟ್ವಿಟರ್‌ನಲ್ಲಿ ಹಂಚಿಕೊಂಡಿದ್ದಾರೆ. ಜೂನ್ 2 ರಂದು ಭಾರತ ತಂಡ ಮೂರೂವರೆ ತಿಂಗಳ ಇಂಗ್ಲೆಂಡ್ ಪ್ರವಾಸಕ್ಕೆ ತೆರಳಲಿದೆ. ಈ ಸಮಯದಲ್ಲಿ ಟೀಮ್ ಇಂಡಿಯಾ, ನ್ಯೂಜಿಲೆಂಡ್ ವಿರುದ್ಧ ವಿಶ್ವ ಟೆಸ್ಟ್ ಚಾಂಪಿಯನ್‌ಶಿಪ್‌ನ ಫೈನಲ್ ಪಂದ್ಯವನ್ನಾಡಲಿದೆ. ನಂತರ ಇಂಗ್ಲೆಂಡ್ ವಿರುದ್ಧ ಐದು ಟೆಸ್ಟ್ ಸರಣಿಯನ್ನು ಆಡಲಿದೆ.