alex Certify ಟೀಂ ಇಂಡಿಯಾದಲ್ಲಿ ಅನಿರೀಕ್ಷಿತ ಬೆಳವಣಿಗೆ: ವಿರಾಟ್ ಕೊಹ್ಲಿ, ರೋಹಿತ್ ಶರ್ಮಾ ನಡುವೆ ಬಿಗ್ ಫೈಟ್…? | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಟೀಂ ಇಂಡಿಯಾದಲ್ಲಿ ಅನಿರೀಕ್ಷಿತ ಬೆಳವಣಿಗೆ: ವಿರಾಟ್ ಕೊಹ್ಲಿ, ರೋಹಿತ್ ಶರ್ಮಾ ನಡುವೆ ಬಿಗ್ ಫೈಟ್…?

ಮುಂಬೈ: ಟೀಂ ಇಂಡಿಯಾದಲ್ಲಿ ನಾಯಕತ್ವ ಪೈಪೋಟಿ ತಾರಕಕ್ಕೇರಿದೆ. ವಿರಾಟ್ ಕೊಹ್ಲಿ ಮತ್ತು ರೋಹಿತ್ ಶರ್ಮಾ ನಡುವೆ ಮನಸ್ತಾಪ ಸ್ಪೋಟವಾಗಿದೆ. ಏಕದಿನ ತಂಡದ ನಾಯಕತ್ವ ಕೈ ತಪ್ಪಿದ ಬಳಿಕ ವಿರಾಟ್ ಕೊಹ್ಲಿ ಸಿಟ್ಟಾಗಿದ್ದಾರೆ. ರೋಹಿತ್ ಶರ್ಮ ಜೊತೆಗೆ ಆಟವಾಡಲು ನಿರಾಕರಿಸಿದ್ದಾರೆ ಎಂದು ಹೇಳಲಾಗುತ್ತಿದೆ.

ಗಾಯಗೊಂಡು ಟೆಸ್ಟ್ ಸರಣಿಯಿಂದ ಹೊರಬಿದ್ದ ರೋಹಿತ್ ಶರ್ಮಾ ಏಕದಿನ ಪಂದ್ಯಗಳಲ್ಲಿ ಕಣಕ್ಕಿಳಿಯುವ ಸಾಧ್ಯತೆಯಿದೆ. ಏಕದಿನ ಸರಣಿಯಿಂದ ಹೊರಗುಳಿಯಲು ಕೊಹ್ಲಿ ನಿರ್ಧರಿಸಿದ್ದಾರೆ. ಇವರಿಬ್ಬರೂ ಒಟ್ಟಿಗೆ ಆಡಲು ಒಪ್ಪುತ್ತಿಲ್ಲ ಎಂಬ ಮಾತುಗಳು ಕೇಳಿಬಂದಿವೆ.

ಭಾರತೀಯ ಕ್ರಿಕೆಟ್ ನಿಯಂತ್ರಣ ಮಂಡಳಿಗೆ ತಾವು ಏಕದಿನ ಸರಣಿಯಲ್ಲಿ ಆಡುವುದಿಲ್ಲವೆಂದು ವಿರಾಟ್ ಕೊಹ್ಲಿ ತಿಳಿಸಿದ್ದಾರೆ. ರೋಹಿತ್ ಶರ್ಮಾ ಟೆಸ್ಟ್ ಸರಣಿಯಿಂದ ಹೊರಗುಳಿದಿದ್ದಾರೆ. ಇದು ಇವರಿಬ್ಬರ ನಡುವೆ ಮನಸ್ತಾಪ ಇದೆ ಎನ್ನುವ ವದಂತಿಗಳಿಗೆ ಪುಷ್ಟಿ ನೀಡುವಂತಿದೆ ಎಂದು ಮೊಹಮ್ಮದ್ ಅಜರುದ್ದೀನ್ ಹೇಳಿದ್ದಾರೆ.

ನಾಯಕತ್ವ ಕಳೆದುಕೊಂಡ ನಂತರ ಕೊಹ್ಲಿ ಬಿಸಿಸಿಐ ಮತ್ತು ರೋಹಿತ್ ಶರ್ಮಾ ಅವರ ಮೇಲೆ ಅಸಮಾಧಾನಗೊಂಡಿದ್ದಾರೆ. ಬಿಸಿಸಿಐ ಅಧ್ಯಕ್ಷ ಸೌರವ್ ಗಂಗೂಲಿ ಮನವಿ ಮಾಡಿದ್ದರು ಕೂಡ ಟಿ20 ನಾಯಕನಾಗಿ ಮುಂದುವರಿಯಲು ವಿರಾಟ್ ಕೊಹ್ಲಿ ಒಪ್ಪಿರಲಿಲ್ಲ. ಸೀಮಿತ ಓವರ್ ತಂಡಗಳಿಗೆ ಇಬ್ಬರು ನಾಯಕರು ಬೇಡವೆಂಬ ಕಾರಣಕ್ಕೆ ಕೊಹ್ಲಿಗೆ ಏಕದಿನ ನಾಯಕತ್ವ ಬಿಡುವಂತೆ ಬಿಸಿಸಿಎ ಸೂಚನೆ ನೀಡಿದ್ದು, ಅವರು ಒಪ್ಪದಿದ್ದಾಗ ನಾಯಕತ್ವದಿಂದ ತೆಗೆದುಹಾಕಲಾಗಿತ್ತು ಎಂಬ ವದಂತಿ ಹರಡಿತ್ತು. ಈ ಬೆಳವಣಿಗೆಯಿಂದ ಬೇಸರಗೊಂಡ ಕೊಹ್ಲಿ ಯಾರ ಸಂಪರ್ಕಕ್ಕೂ ಸಿಗುತ್ತಿಲ್ಲ. ಬಯೋ ಬಬಲ್ ಪ್ರವೇಶಿಸಲು ಕೂಡ ವಿಳಂಬ ಮಾಡಿದ್ದರು. ದಕ್ಷಿಣ ಆಫ್ರಿಕಾ ವಿರುದ್ಧದ ಏಕದಿನ ಸರಣಿಯಿಂದ ಹಿಂದೆ ಸರಿಯಲು ನಿರ್ಧರಿಸಿದ್ದಾರೆ. ಟೆಸ್ಟ್ ಸರಣಿಯ ನಂತರ ಅವರು ಏಕದಿನ ಸರಣಿಗೆ ಗೈರುಹಾಜರಾಗುವ ಸಾಧ್ಯತೆಯಿದೆ. ಈ ಬೆಳವಣಿಗೆಗಳ ನಡುವೆ ಇಬ್ಬರ ನಡುವೆ ಸಂಧಾನ ನಡೆಸಲು ಬಿಸಿಸಿಐ ಚಿಂತನೆ ನಡೆಸಿದೆ ಎನ್ನಲಾಗಿದೆ.

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...