alex Certify ಭರ್ಜರಿ ಬ್ಯಾಟಿಂಗ್ ಪ್ರದರ್ಶಿಸಿದ ವಿರಾಟ್ ಕೊಹ್ಲಿ ಮತ್ತೊಂದು ದಾಖಲೆ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಭರ್ಜರಿ ಬ್ಯಾಟಿಂಗ್ ಪ್ರದರ್ಶಿಸಿದ ವಿರಾಟ್ ಕೊಹ್ಲಿ ಮತ್ತೊಂದು ದಾಖಲೆ

ಬೆಂಗಳೂರು: ಬೆಂಗಳೂರಿನ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಶನಿವಾರ ನಡೆದ ಡೆಲ್ಲಿ ಕ್ಯಾಪಿಟಲ್ಸ್ ವಿರುದ್ಧದ ಪಂದ್ಯದಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು 23 ರನ್ ಗಳಿಂದ ಜಯಗಳಿಸಿದೆ. ವಿರಾಟ್ ಕೊಹ್ಲಿ(50 ರನ್) ಆಕರ್ಷಕ ಅರ್ಧಶತಕ ಸಿಡಿಸಿದ್ದಾರೆ.

ಐಪಿಎಲ್ ನಲ್ಲಿ ಅತ್ಯಧಿಕ ರನ್ ಕಲೆ ಹಾಕಿದ ದಾಖಲೆ ವಿರಾಟ್ ಕೊಹ್ಲಿ ಅವರ ಹೆಸರಿನಲ್ಲಿದೆ. 219 ಇನಿಂಗ್ಸ್ ಗಳಲ್ಲಿ 6838 ರನ್ ಗಳಿಸಿದ್ದಾರೆ. ಶನಿವಾರದ ಪಂದ್ಯದಲ್ಲಿ 34 ಎಸೆತಗಳಲ್ಲಿ ಆರು ಬೌಂಡರಿ ಒಂದು ಸಿಕ್ಸರ್ ಸಹಿತ ಆಕರ್ಷಕ ಆದರ್ಶತಕ ಸಿಡಿಸಿ ಮಿಂಚಿದ ವಿರಾಟ್ ಕೊಹ್ಲಿ ಐಪಿಎಲ್ ನಲ್ಲಿ ಅತಿ ಹೆಚ್ಚು ಬಾರಿ 50+ ಸ್ಕೋರ್ ಕಲೆ ಹಾಕಿದ ಭಾರತೀಯ ಆಟಗಾರ ಎಂಬ ದಾಖಲೆಗೆ ಪಾತ್ರರಾಗಿದ್ದಾರೆ.

ಈ ದಾಖಲೆ ಶಿಖರ್ ಧವನ್ ಹೆಸರಿನಲ್ಲಿತ್ತು. 209 ಐಪಿಎಲ್ ಇನಿಂಗ್ಸ್ ಗಳಲ್ಲಿ ಎರಡು ಶತಕದೊಂದಿಗೆ 51 ಬಾರಿ 50+ ಸ್ಕೋರ್ ಕಲೆ ಹಾಕಿದ್ದಾರೆ. ಈ ದಾಖಲೆಯನ್ನು ಹಿಂದಕ್ಕಿದ ಕೊಹ್ಲಿ ಭಾರತೀಯರ ಪಟ್ಟಿಯಲ್ಲಿ ಅಗ್ರಸ್ಥಾನದಲ್ಲಿದ್ದಾರೆ. ವಿರಾಟ್ ಕೊಹ್ಲಿ 219 ಐಪಿಎಲ್ ಇನಿಂಗ್ಸ್ ಗಳಲ್ಲಿ 52 ಬಾರಿ 50+ ಸ್ಕೋರ್ ಗಳಿಸಿದ್ದಾರೆ. ಇದರಲ್ಲಿ 5 ಶತಕ 47 ಅರ್ಧಶತಕ ಸೇರಿವೆ.

ಡೆಲ್ಲಿ ಕ್ಯಾಪಿಟಲ್ ತಂಡದ ನಾಯಕ ಡೇವಿಡ್ ವಾರ್ನರ್ 165 ಐಪಿಎಲ್ ಇನಿಂಗ್ಸ್ ಗಳಲ್ಲಿ ನಾಲ್ಕು ಶತಕ ಹಾಗೂ 58 ಅರ್ಧ ಶತಕಗಳ ಸಹಿತ 62 ಬಾರಿ 50 + ಸ್ಕೋರ್ ಗಳಿಸಿ ದಾಖಲೆ ನಿರ್ಮಿಸಿದ್ದಾರೆ. ಈಗಾಗಲೇ ಐಪಿಎಲ್ ನಲ್ಲಿ 6838 ರನ್ ಗಳಿಸಿರುವ ಕೊಹ್ಲಿ ಅತ್ಯಧಿಕ ರನ್ ಕಲೆ ಹಾಕಿದವರ ಪಟ್ಟಿಯಲ್ಲಿ ಮೊದಲ ಸ್ಥಾನದಲ್ಲಿದ್ದಾರೆ. ಇನ್ನು 162 ರನ್ ಗಳಿಸಿದರೆ ಐಪಿಎಲ್ ಇತಿಹಾಸದಲ್ಲಿ 7000 ರನ್ ಪೂರ್ಣಗೊಳಿಸಿದ ಮೊದಲ ಆಟಗಾರ ಎಂಬ ಹೆಗ್ಗಳಿಕೆಗೂ ಪಾತ್ರರಾಗಲಿದ್ದಾರೆ.

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...