ರಾಜಸ್ತಾನ ರಾಯಲ್ಸ್ ತಂಡ ಚೇತನ್ ಸರ್ಕಾರಿಯಾ ಅವರ ಬಗೆಗಿನ ಮಾಹಿತಿಯನ್ನು ವೀರೇಂದ್ರ ಸೆಹ್ವಾಗ್ ಹಂಚಿಕೊಂಡಿದ್ದಾರೆ.
ಚೇತನ್ ಅವರನ್ನು ರಾಜಸ್ಥಾನ ತಂಡ 1.20 ಕೋಟಿ ರೂಪಾಯಿ ಖರೀದಿ ಮಾಡಿದೆ. ವಾಂಖೇಡೆ ಕ್ರೀಡಾಂಗಣದಲ್ಲಿ ಪಂಜಾಬ್ ಕಿಂಗ್ಸ್ ವಿರುದ್ಧದ ಪಂದ್ಯದಲ್ಲಿ ರಾಜಸ್ತಾನ ರಾಯಲ್ಸ್ ತಂಡದ ಚೇತನ್ ಸರ್ಕಾರಿಯಾ ಉತ್ತಮ ಪ್ರದರ್ಶನ ನೀಡಿದ್ದಾರೆ. ಪಾದಾರ್ಪಣೆ ಪಂದ್ಯದಲ್ಲಿ 4 ಓವರ್ ಬೌಲಿಂಗ್ ಮಾಡಿದ ಚೇತನ್ ಸರ್ಕಾರಿಯಾ ಮೂರು ವಿಕೆಟ್ ಪಡೆದು ಅತ್ಯುತ್ತಮ ಪ್ರದರ್ಶನ ತೋರಿದ್ದಾರೆ. ಅವರ ಪ್ರದರ್ಶನಕ್ಕೆ ಮೆಚ್ಚುಗೆ ವ್ಯಕ್ತಪಡಿಸಿರುವ ವೀರೇಂದ್ರ ಸೆಹ್ವಾಗ್ ಮಾಹಿತಿಯೊಂದನ್ನು ಬಹಿರಂಗಪಡಿಸಿದ್ದಾರೆ.
ಚೇತನ್ ಸರ್ಕಾರಿಯಾ ಅವರ ಸಹೋದರ ಕೆಲವು ದಿನಗಳ ಹಿಂದೆ ಆತ್ಮಹತ್ಯೆ ಮಾಡಿಕೊಂಡಿದ್ದರು. ಈ ಸಂದರ್ಭದಲ್ಲಿ SMA ಟ್ರೋಫಿಯಲ್ಲಿ ಆಡುತ್ತಿದ್ದ ಕಾರಣ ಆತನ ಪೋಷಕರು ಸಾವಿನ ಸುದ್ದಿ ತಿಳಿಸಿರಲಿಲ್ಲ. ಇದು ಕುಟುಂಬದವರಿಗೆ ಕ್ರಿಕೆಟ್ ಗೆ ಎಷ್ಟು ಪ್ರಾಮುಖ್ಯತೆ ಕೊಡ್ತಾರೆ ಎನ್ನುವುದನ್ನು ತಿಳಿಸುತ್ತದೆ. ಆತ ಟೀಂ ಇಂಡಿಯಾ ಪರವಾಗಿ ಆಡಲು ಐಪಿಎಲ್ ಒಂದು ಅವಕಾಶವಾಗಿದೆ ಎಂದು ಅಭಿಪ್ರಾಯಪಟ್ಟಿದ್ದಾರೆ.
ಲಾರಿ ಚಾಲಕರಾಗಿರುವ ಚೇತನ್ ಅವರ ತಂದೆ ಅಪಘಾತದಲ್ಲಿ ಗಾಯಗೊಂಡು ಹಾಸಿಗೆ ಹಿಡಿದಿದ್ದಾರೆ. ದಿನಸಿ ಅಂಗಡಿಯೊಂದರಲ್ಲಿ ಕೆಲಸ ಮಾಡುತ್ತಿದ್ದ ಚೇತನ್ ಕುಟುಂಬಕ್ಕೆ ಆರ್ಥಿಕವಾಗಿ ನೆರವಾಗ್ತಿದ್ದರು. ಸಹೋದರ ಆತ್ಮಹತ್ಯೆ ಮಾಡಿಕೊಂಡ ಒಂದು ವಾರದ ನಂತರ ಆತನಿಗೆ ವಿಷಯ ಗೊತ್ತಾಗಿ ಯಾರೊಂದಿಗೂ ಮಾತನಾಡಿರಲಿಲ್ಲ. ಊಟವನ್ನು ಮಾಡಿರಲಿಲ್ಲ ಎಂದು ಆತನ ತಾಯಿ ಹೇಳಿಕೊಂಡಿದ್ದಾರೆ.