alex Certify RCB ಅಭಿಮಾನಿಗಳಿಗೆ ಭರ್ಜರಿ ‘ಸಿಹಿ ಸುದ್ದಿ’ ನೀಡಿದ ವಿರಾಟ್ ಕೊಹ್ಲಿ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

RCB ಅಭಿಮಾನಿಗಳಿಗೆ ಭರ್ಜರಿ ‘ಸಿಹಿ ಸುದ್ದಿ’ ನೀಡಿದ ವಿರಾಟ್ ಕೊಹ್ಲಿ

ನವದೆಹಲಿ: ಐಪಿಎಲ್ ನಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡವನ್ನು ಪ್ರತಿನಿಧಿಸುತ್ತಿರುವ ಟೀಮ್ ಇಂಡಿಯಾ ನಾಯಕ ವಿರಾಟ್ ಕೊಹ್ಲಿ ಆರ್ಸಿಬಿ ತಂಡವನ್ನು ಎಂದಿಗೂ ಬಿಡಲಾರೆ ಎಂದು ಹೇಳಿದ್ದಾರೆ.

ಐಪಿಎಲ್ ನಿಂದ ಹೊರ ಬರುವವರೆಗೆ ಆರ್ಸಿಬಿ ಜೊತೆಗಿನ ನಂಟು ಮುಂದುವರೆಸುವೆ ಎಂದು ಅವರು ತಿಳಿಸಿದ್ದಾರೆ. ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡದ ಸಹ ಆಟಗಾರ ಎಬಿಡಿ ವಿಲಿಯರ್ಸ್ ಅವರೊಂದಿಗೆ ಇನ್ಸ್ಟಾಗ್ರಾಮ್ ನಲ್ಲಿ ಚಾಟ್ ಮಾಡಿರುವ ವಿರಾಟ್ ಕೊಹ್ಲಿ, ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡದ ಜೊತೆಗಿನ ಸಂಬಂಧ ಅದ್ಭುತವಾಗಿದ್ದು ತಂಡದೊಂದಿಗೆ ಗುರಿಯನ್ನು ಸಾಧಿಸಬೇಕಿದೆ. ಎಲ್ಲದಕ್ಕಿಂತ ಮುಖ್ಯವಾಗಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡದ ಅಭಿಮಾನಿಗಳನ್ನು ಯಾವುದೇ ಕಾರಣಕ್ಕೂ ನಾನು ಕಳೆದುಕೊಳ್ಳಲು ಸಿದ್ಧವಾಗಿಲ್ಲ ಎಂದು ಹೇಳಿದ್ದಾರೆ.

ವಿರಾಟ್ ಕೊಹ್ಲಿ ಅವರ ಹೇಳಿಕೆಯನ್ನು ಬೆಂಬಲಿಸಿದ ಎಬಿ ಡಿವಿಲಿಯರ್ಸ್, ಆರ್ಸಿಬಿ ಜೊತೆಗೆ ಭಾವನಾತ್ಮಕ ನಂಟು ಹೊಂದಿದ್ದೇನೆ. ಆ ತಂಡ ತೊರೆಯಲು ನನಗೆ ಸಾಧ್ಯವೇ ಇಲ್ಲವೆಂದು ತಿಳಿಸಿದ್ದಾರೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...