ಬಾರ್ಬಡೋಸ್: ವೆಸ್ಟ್ ಇಂಡೀಸ್ ವಿರುದ್ಧದ ಮೊದಲ ಏಕದಿನ ಪಂದ್ಯ ಜಯಿಸಿದ ಭಾರತ ಇಂದು ಎರಡನೇ ಪಂದ್ಯ ಎದುರು ನೋಡುತ್ತಿದೆ.
ವೆಸ್ಟ್ ಇಂಡೀಸ್ ವಿರುದ್ಧ ಸತತ 12 ಏಕದಿನ ಸರಣಿ ಗೆದ್ದಿರುವ ಭಾರತ ಈ ಸರಣಿಯನ್ನು ಜಯಿಸಿ ಸತತ 13ನೇ ಸರಣಿ ಗೆಲ್ಲುವ ಗುರಿ ಹೊಂದಿದೆ. ಸುಧಾರಿತ ಬ್ಯಾಟಿಂಗ್ ಪ್ರದರ್ಶನದೊಂದಿಗೆ ವಿಶ್ವಕಪ್ ಸಿದ್ಧತೆ ನಿರೀಕ್ಷೆಯಲ್ಲಿ ಟೀಂ ಇಂಡಿಯಾ ಉತ್ತಮ ಪ್ರದರ್ಶನ ನೀಡಲು ಸಜ್ಜಾಗಿದೆ.
ವೆಸ್ಟ್ ಇಂಡೀಸ್ ತವರಿನಲ್ಲಿ ಸತತ 5 ಸರಣಿ ಸೋತಿದ್ದು, ವಿಶ್ವಕಪ್ ಗೆ ಅರ್ಹತೆ ಸಿಗದೇ ಆಘಾತಕ್ಕೆ ಒಳಗಾಗಿದೆ. ಸಂಜೆ 7 ಗಂಟೆಗೆ ಪಂದ್ಯ ಆರಂಭವಾಗಲಿದ್ದು, ಉತ್ತಮ ಪ್ರದರ್ಶನದೊಂದಿಗೆ ಗೆಲುವಿಗೆ ಭಾರತ ಕಾರ್ಯತಂತ್ರ ರೂಪಿಸಿದೆ.
ಮೊದಲ ODIನಲ್ಲಿ ಆತಿಥೇಯರನ್ನು ಸೋಲಿಸಿದ ನಂತರ, ಬ್ರಿಡ್ಜ್ ಟೌನ್‌ನ ಕೆನ್ಸಿಂಗ್ಟನ್ ಓವಲ್‌ನಲ್ಲಿ ಶನಿವಾರ ನಡೆಯಲಿರುವ ಎರಡನೇ ODI ನಲ್ಲಿ ರೋಹಿತ್ ಶರ್ಮಾ ನೇತೃತ್ವದ ಭಾರತ ತಂಡ ಮೂರು ಪಂದ್ಯಗಳ ಸರಣಿಯಲ್ಲಿ 2-0 ಮುನ್ನಡೆ ಸಾಧಿಸುವ ತವಕದಲ್ಲಿದೆ.
ಪಿಚ್ ಸ್ಪಿನ್ನರ್‌ಗಳಿಗೆ ಸಹಾಯ ಮಾಡುವ ನಿರೀಕ್ಷೆಯಲ್ಲಿ ಭಾರತ ಹೆಚ್ಚುವರಿ ಸ್ಪಿನ್ನರ್ ಆಯ್ಕೆ ಮಾಡಬಹುದು. ಭಾರತದ ಪರ ಆಡುವ 11 ಆಟಗಾರರಲ್ಲಿ ಶಾರ್ದೂಲ್ ಠಾಕೂರ್ ಬದಲಿಗೆ ಅಕ್ಷರ್ ಪಟೇಲ್ ಕಣಕ್ಕಿಳಿಯಬಹುದು.