alex Certify ಎಲ್ಲಿ ಮತ್ತು ಯಾವಾಗ ನಡೆಯಲಿದೆ ಐಪಿಎಲ್ ನ ಮೊದಲ ಪಂದ್ಯ….? ಇಲ್ಲಿದೆ ಡೀಟೆಲ್ಸ್ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಎಲ್ಲಿ ಮತ್ತು ಯಾವಾಗ ನಡೆಯಲಿದೆ ಐಪಿಎಲ್ ನ ಮೊದಲ ಪಂದ್ಯ….? ಇಲ್ಲಿದೆ ಡೀಟೆಲ್ಸ್

ಐಪಿಎಲ್ 2021ರ ಮೊದಲ ಪಂದ್ಯ ಏಪ್ರಿಲ್ 9ರಂದು ನಡೆಯಲಿದೆ. ಮೊದಲ ಪಂದ್ಯದಲ್ಲಿ ಟೀಂ ಇಂಡಿಯಾ ನಾಯಕ ವಿರಾಟ್ ಕೊಹ್ಲಿ ಹಾಗೂ ಉಪನಾಯಕ ರೋಹಿತ್ ಶರ್ಮಾ ಮುಖಾಮುಖಿಯಾಗಲಿದ್ದಾರೆ. ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡವನ್ನು ವಿರಾಟ್ ಕೊಹ್ಲಿ ಮುನ್ನಡೆಸಲಿದ್ದು, ರೋಹಿತ್ ನಾಲ್ಕು ಬಾರಿ ಚಾಂಪಿಯನ್ ಆದ ಮುಂಬೈ ಇಂಡಿಯನ್ಸ್ ತಂಡವನ್ನು ಮುನ್ನಡೆಸಲಿದ್ದಾರೆ.

ಕೊರೊನಾ ಹಿನ್ನಲೆಯಲ್ಲಿ ಐಪಿಎಲ್ 13ನೇ ಋತು ಯುಎಇ‌ ನಡೆದಿತ್ತು. ಆದ್ರೆ ಕೊರೊನಾ ಮಧ್ಯೆಯೇ ಈ ಬಾರಿ ಭಾರತದಲ್ಲಿಯೇ ಪಂದ್ಯಗಳು ನಡೆಯುತ್ತಿವೆ. ಕೊರೊನಾ, ಮೈದಾನದಲ್ಲಿ ಪಂದ್ಯ ವೀಕ್ಷಿಸುವ ಅವಕಾಶವನ್ನು ಕಸಿದುಕೊಂಡಿದೆ. ಟಿವಿ ಮತ್ತು ಮೊಬೈಲ್‌ನಲ್ಲಿ ಮನೆಯಲ್ಲಿ ಕುಳಿತು ಈ ಪಂದ್ಯಾವಳಿಯನ್ನು ವೀಕ್ಷಿಸಬಹುದು.

ಶುಕ್ರವಾರ ರಾತ್ರಿ 7.30ಕ್ಕೆ ಆರ್ಸಿಬಿ ಹಾಗೂ ಮುಂಬೈ ಇಂಡಿಯನ್ಸ್ ಮಧ್ಯೆ ಐಪಿಎಲ್ ಋತು 14ರ ಮೊದಲ ಪಂದ್ಯ ನಡೆಯಲಿದೆ. ಚೆನ್ನೈನ ಎಂ.ಎ. ಚಿದಂಬರಂ ಕ್ರೀಡಾಂಗಣದಲ್ಲಿ ಪಂದ್ಯ ನಡೆಯಲಿದೆ. ಮೊದಲ ಪಂದ್ಯವನ್ನು ಕ್ರಿಕೆಟ್ ಅಭಿಮಾನಿಗಳು ಸ್ಟಾರ್ ಸ್ಪೋರ್ಟ್ಸ್ ನೆಟ್‌ವರ್ಕ್‌ನ ಚಾನೆಲ್‌ಗಳಲ್ಲಿ ವೀಕ್ಷಿಸಬಹುದು. ಸ್ಟಾರ್ ಸ್ಪೋರ್ಟ್ಸ್ ನೆಟ್‌ವರ್ಕ್‌ನ ಡಿಜಿಟಲ್ ಪ್ಲಾಟ್‌ಫಾರ್ಮ್‌ನಲ್ಲಿ ಐಪಿಎಲ್ 2021 ರ ಮೊದಲ ಪಂದ್ಯವನ್ನು ವೀಕ್ಷಿಸಬಹುದು.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...