ಮುಂಬೈ: ಮುಂಬೈನ ವಾಂಖೆಡೆ ಕ್ರೀಡಾಂಗಣದಲ್ಲಿ ಇಂದು ಐಪಿಎಲ್ 15 ನೇ ಆವೃತ್ತಿಯ 13 ನೇ ಪಂದ್ಯದಲ್ಲಿ ರಾಜಸ್ಥಾನ ರಾಯಲ್ಸ್ ಮತ್ತು ರಾಯಲ್ ಚಾಲೆಂಜರ್ಸ್ ಬೆಂಗಳೂರು ಮುಖಾಮುಖಿಯಾಗಲಿವೆ.
ಹೈದರಾಬಾದ್ ವಿರುದ್ಧ 61 ರನ್ ಗಳ ಜಯದೊಂದಿಗೆ ಶುಭಾರಂಭ ಮಾಡಿದ್ದ ರಾಜಸ್ಥಾನ ರಾಯಲ್ಸ್ ಎರಡನೇ ಪಂದ್ಯದಲ್ಲಿ ಮುಂಬೈ ಇಂಡಿಯನ್ಸ್ ತಂಡವನ್ನು 23 ರನ್ ಗಳಿಂದ ಮಣಿಸಿತ್ತು. ಮೂರನೇ ಪಂದ್ಯದಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡವನ್ನು ಮಣಿಸಲು ಕಾರ್ಯತಂತ್ರ ರೂಪಿಸಿದೆ.
ಇನ್ನು ಮೊದಲ ಪಂದ್ಯದಲ್ಲಿ ಪಂಜಾಬ್ ಕಿಂಗ್ಸ್ ವಿರುದ್ಧ ಪರಾಭವಗೊಂಡಿದ್ದ ರಾಯಲ್ ಚಾಲೆಂಜರ್ಸ್ ಬೆಂಗಳೂರು, ಎರಡನೇ ಪಂದ್ಯದಲ್ಲಿ ಕೊಲ್ಕತ್ತಾ ನೈಟ್ ರೈಡರ್ಸ್ ವಿರುದ್ಧ ಮೂರು ವಿಕೆಟ್ ಗಳ ಜಯಗಳಿಸಿದೆ.
ಫಾಫ್ ಡುಪ್ಲೆಸಿಸ್ ನೇತೃತ್ವದ ರಾಯಲ್ ಚಾಲೆಂಜರ್ಸ್ ಬೆಂಗಳೂರು ಇಂದು ನಡೆಯಲಿರುವ ಪಂದ್ಯದಲ್ಲಿ ರಾಜಸ್ಥಾನ ರಾಯಲ್ಸ್ ಬಗ್ಗುಬಡಿಯಲು ಕಾರ್ಯತಂತ್ರ ರೂಪಿಸಿದೆ.
ಉಭಯ ತಂಡಗಳು 24 ಸಲ ಮುಖಾಮುಖಿಯಾಗಿದ್ದು, ಬೆಂಗಳೂರು-10, ರಾಜಸ್ಥಾನ -12 ಪಂದ್ಯ ಜಯಿಸಿವೆ. 2 ಪಂದ್ಯಗಳ ಫಲಿತಾಂಶ ಬಂದಿಲ್ಲ. ಇಂದು ರಾತ್ರಿ 7.30 ಕ್ಕೆ ಮುಂಬೈನ ವಾಂಖೆಡೆ ಕ್ರೀಡಾಂಗಣದಲ್ಲಿ ನಡೆಯಲಿರುವ ಪಂದ್ಯ ಭಾರಿ ಕುತೂಹಲ ಮೂಡಿಸಿದೆ.