ಪುಣೆ: ಪುಣೆಯ ಮಹಾರಾಷ್ಟ್ರ ಕ್ರಿಕೆಟ್ ಸಂಸ್ಥೆ ಕ್ರೀಡಾಂಗಣದಲ್ಲಿ ಇಂದು ನಡೆಯಲಿರುವ ಐಪಿಎಲ್ ಪಂದ್ಯದಲ್ಲಿ ಮುಂಬೈ ಇಂಡಿಯನ್ಸ್ ಮತ್ತು ರಾಯಲ್ ಚಾಲೆಂಜರ್ಸ್ ಬೆಂಗಳೂರು ಮುಖಾಮುಖಿಯಾಗಲಿವೆ.
ಸಾಲು ಸಾಲು ಮೂರು ಸೋಲುಗಳಿಂದ ಕಂಗೆಟ್ಟಿರುವ ಮುಂಬೈ ಇಂಡಿಯನ್ಸ್ ಹಾಗೂ ಮೊದಲ ಸೋಲಿನ ಬಳಿಕ ಸತತ ಎರಡು ಗೆಲುವುಗಳಿಂದ ಆತ್ಮವಿಶ್ವಾಸ ಹೆಚ್ಚಿಸಿಕೊಂಡಿರುವ ರಾಯಲ್ ಚಾಲೆಂಜರ್ಸ್ ಬೆಂಗಳೂರು ಮುಖಾಮುಖಿಯಾಗಲಿವೆ.
ಇದುವರೆಗೆ ಆಡಿರುವ ಮೂರು ಪಂದ್ಯಗಳಿಂದ ಬೆಂಗಳೂರು ತಂಡ 6 ಅಂಕಗಳನ್ನು ಕಲೆ ಹಾಕಿದೆ. ಇಂದಿನ ಪಂದ್ಯವನ್ನು ಗೆಲ್ಲುವ ಮೂಲಕ ಸೋಲಿನ ಸುಳಿಯಿಂದ ಹೊರ ಬರಲು ರೋಹಿತ್ ಶರ್ಮಾ ನೇತೃತ್ವದ ಮುಂಬೈ ತಂಡ ಕಾರ್ಯತಂತ್ರ ರೂಪಿಸಿದೆ. 29 ಪಂದ್ಯಗಳಲ್ಲಿ ಉಭಯ ತಂಡಗಳು ಮುಖಾಮುಖಿಯಾಗಿದ್ದು, ಬೆಂಗಳೂರು 12 ಸಲ ಹಾಗೂ ಮುಂಬೈ 17 ಸಲ ಜಯಗಳಿಸಿವೆ. ಇಂದಿನ ಪಂದ್ಯದಲ್ಲಿ ಯಾವ ತಂಡ ಗೆಲ್ಲಲಿದೆ ಎನ್ನುವುದು ಕುತೂಹಲ ಮೂಡಿಸಿದೆ.