alex Certify ಕೃಷಿ ಕಾಯ್ದೆ ಹಿಂಪಡೆಯದಿದ್ದರೆ ಖೇಲ್ ರತ್ನ ವಾಪಸ್; ಕೇಂದ್ರಕ್ಕೆ ಬಾಕ್ಸರ್ ಎಚ್ಚರಿಕೆ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಕೃಷಿ ಕಾಯ್ದೆ ಹಿಂಪಡೆಯದಿದ್ದರೆ ಖೇಲ್ ರತ್ನ ವಾಪಸ್; ಕೇಂದ್ರಕ್ಕೆ ಬಾಕ್ಸರ್ ಎಚ್ಚರಿಕೆ

ನವದೆಹಲಿ: ಕೇಂದ್ರ ಸರ್ಕಾರ ಜಾರಿ ಮಾಡಿರುವ ನೂತನ ಕೃಷಿ ಕಾಯ್ದೆ ವಿರೋಧಿಸಿ ಕಳೆದ 11 ದಿನಗಳಿಂದ ರೈತರು ನಡೆಸುತ್ತಿರುವ ಹೋರಾಟ ತೀವ್ರ ಸ್ವರೂಪ ಪಡೆದುಕೊಂಡಿದೆ.

ದೆಹಲಿ-ಹರಿಯಾಣ ಗಡಿಯಲ್ಲಿ ರೈತರು ನಡೆಸುತ್ತಿರುವ ಪ್ರತಿಭಟನೆಯಲ್ಲಿ ಪಾಲ್ಗೊಂಡಿರುವ ಬಾಕ್ಸರ್ ವಿಜೇಂದರ್ ಸಿಂಗ್, ಕೇಂದ್ರ ಸರ್ಕಾರ ಕೃಷಿ ಕಾನೂನನ್ನು ಹಿಂಪಡೆಯದಿದ್ದರೆ ರಾಷ್ಟ್ರದ ಅತ್ಯುನ್ನತ ಕ್ರೀಡಾ ಪ್ರಶಸ್ತಿ ಖೇಲ್ ರತ್ನ ವಾಪಸ್ ನೀಡುವುದಾಗಿ ಘೋಷಿಸಿದ್ದಾರೆ.

ಈ ನಡುವೆ ರೈತರ ಹೋರಾಟಕ್ಕೆ ಬೆಂಬಲ ನೀಡಿರುವ ಮಾಜಿ ಬಾಕ್ಸಿಂಗ್ ತರಬೇತುದಾರ ಗುರ್ಭಕ್ಷ ಸಿಂಗ್ ಸಂಧು, ದ್ರೋಣಾಚಾರ್ಯ ಪ್ರಶಸ್ತಿ ಹಿಂದಿರುಗಿಸುವುದಾಗಿ ಹೇಳಿದ್ದಾರೆ.

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...