ಮುಂಬೈ: ಮುಂಬೈನ ಬ್ರಬೋರ್ನ್ ಕ್ರೀಡಾಂಗಣದಲ್ಲಿ ನಡೆಯಲಿರುವ ಐಪಿಎಲ್ ಪಂದ್ಯದಲ್ಲಿ ಪಂಜಾಬ್ ಕಿಂಗ್ಸ್ ಹಾಗೂ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡಗಳು ಮುಖಾಮುಖಿಯಾಗಲಿವೆ.
ಕಳೆದ ಎರಡು ಪಂದ್ಯಗಳಲ್ಲಿ ಉತ್ತಮ ಪ್ರದರ್ಶನ ನೀಡಿರುವ ಆರ್ಸಿಬಿ ಪಂಜಾಬ್ ತಂಡದ ವಿರುದ್ಧ ಸಂಘಟಿತ ಪ್ರಯತ್ನದೊಂದಿಗೆ ಗೆಲ್ಲುವ ವಿಶ್ವಾಸದಲ್ಲಿದೆ. ವಿರಾಟ್ ಕೊಹ್ಲಿ ಹೊರತುಪಡಿಸಿ ಉಳಿದ ಬ್ಯಾಟರ್ ಗಳು ಉತ್ತಮ ಪ್ರದರ್ಶನ ನೀಡುತ್ತಿದ್ದಾರೆ. ಫಾರ್ಮ್ ಕಳೆದುಕೊಂಡಿರುವ ವಿರಾಟ್ ಕೊಹ್ಲಿ ಇಂದಿನ ಪಂದ್ಯದಲ್ಲಿ ಭರ್ಜರಿ ಪ್ರದರ್ಶನ ನೀಡಲು ಸಜ್ಜಾಗಿದ್ದಾರೆ.
ಪ್ಲೇಆಫ್ ಹಂತಕ್ಕೆ ಪ್ರವೇಶಿಸಲು ಗೆಲುವು ಅನಿವಾರ್ಯವಾಗಿದೆ. ಆರ್ಸಿಬಿ ಇಂದಿನ ಪಂದ್ಯದಲ್ಲಿ ಜಯಗಳಿಸಿದಲ್ಲಿ 16 ಅಂಕಗಳೊಂದಿಗೆ ಪ್ಲೇಆಫ್ ಹಂತಕ್ಕೆ ಪ್ರವೇಶಿಸಲು ಹತ್ತಿರವಾಗಲಿದೆ. ಪ್ಲೇ ಆಫ್ ಖಾತ್ರಿಯಾಗಲು 18 ಅಂಕ ಗಳಿಸಬೇಕಿದೆ. ಸಂಜೆ 7.30 ಕ್ಕೆ ಪಂದ್ಯ ಆರಂಭವಾಗಲಿದ್ದು, ಕುತೂಹಲ ಮೂಡಿಸಿದೆ.