ಏಷ್ಯಾ ಕಪ್ 2023 ರ ಸಿದ್ಧತೆಗಳ ಮಧ್ಯೆ ಟೀಮ್ ಇಂಡಿಯಾಗೆ ದೊಡ್ಡ ಹೊಡೆತ ಬಿದ್ದಿದೆ. ವಿಕೆಟ್ ಕೀಪರ್, ಬ್ಯಾಟರ್ ಕೆ.ಎಲ್. ರಾಹುಲ್ ಸೆಪ್ಟೆಂಬರ್ 2 ಮತ್ತು 4 ರಂದು ಪಾಕಿಸ್ತಾನ ಮತ್ತು ನೇಪಾಳ ವಿರುದ್ಧದ ಮೊದಲ ಎರಡು ಪಂದ್ಯಗಳಿಗೆ ಲಭ್ಯವಿರುವುದಿಲ್ಲ ಎಂದು ಮುಖ್ಯ ಕೋಚ್ ರಾಹುಲ್ ದ್ರಾವಿಡ್ ಖಚಿತಪಡಿಸಿದ್ದಾರೆ.
ಮಂಡಿ ಗಾಯದಿಂದ ಅವರು ಶಸ್ತ್ರಚಿಕಿತ್ಸೆಗೆ ಒಳಗಾಗಿದ್ದಾರೆ. ರಾಹುಲ್ ಚೇತರಿಸಿಕೊಂಡಿದ್ದರೂ, ಮೊದಲ ಪಂದ್ಯವನ್ನು ಆಡುವುದು ಅನುಮಾನ ಎಂದು ತಂಡದ ಪ್ರಕಟಣೆಯ ಪತ್ರಿಕಾಗೋಷ್ಠಿಯಲ್ಲಿ ಮುಖ್ಯ ಆಯ್ಕೆಗಾರ ಅಜಿತ್ ಅಗರ್ಕರ್ ಪ್ರಸ್ತಾಪಿಸಿದ್ದರು. ಈಗ ದ್ರಾವಿಡ್ ಇದನ್ನು ಮಂಗಳವಾರದಂದು ಖಚಿತಪಡಿಸಿದ್ದಾರೆ.
ಕೆ.ಎಲ್. ರಾಹುಲ್ ನಿಜವಾಗಿಯೂ ಉತ್ತಮವಾಗಿ ಮುನ್ನಡೆಯುತ್ತಿದ್ದಾರೆ. ಆದರೆ ಏಷ್ಯಾ ಕಪ್ ಮುಖ್ಯ ಕೋಚ್ ರಾಹುಲ್ ದ್ರಾವಿಡ್ ಅವರ ಪ್ರಕಾರ, ಪಾಕಿಸ್ತಾನ ಮತ್ತು ನೇಪಾಳ ವಿರುದ್ಧದ ಭಾರತದ ಮೊದಲ ಎರಡು ಪಂದ್ಯಗಳಿಗೆ ಲಭ್ಯವಿರುವುದಿಲ್ಲ ಎಂದು ಬಿಸಿಸಿಐ ಹೇಳಿಕೆ ತಿಳಿಸಿದೆ.
ಆದರೆ ಇದೀಗ ಮೊದಲ ಆಯ್ಕೆಯ ವಿಕೆಟ್ಕೀಪರ್ ಆಗಿದ್ದ ರಾಹುಲ್ ಔಟಾಗಿರುವುದರಿಂದ ಭಾರತಕ್ಕೆ ಆಯ್ಕೆಗಳ ಲಭ್ಯತೆ ಅಡ್ಡಿಯಾಗಿದೆ.
ರಾಹುಲ್ ಮಧ್ಯಮ ಕ್ರಮಾಂಕದಲ್ಲಿ ವಿಕೆಟ್ಕೀಪರ್ ಬ್ಯಾಟರ್ನ ಪಾತ್ರವನ್ನು ನಿರ್ವಹಿಸಿ ಅದರಲ್ಲಿ ಯಶಸ್ವಿಯಾಗಿದ್ದಾರೆ. ಸಂಜು ಸ್ಯಾಮ್ಸನ್, ಇಶಾನ್ ಕಿಶನ್ ಉಳಿದ ಆಯ್ಕೆಯಾಗಿದ್ದಾರೆ.
ಪಾಕಿಸ್ತಾನ ಪಂದ್ಯಕ್ಕೆ ಭಾರತದ ಸಂಭಾವ್ಯ ಆಟಗಾರರ ಪಟ್ಟಿ: ರೋಹಿತ್ ಶರ್ಮಾ, ಶುಭಮನ್ ಗಿಲ್, ವಿರಾಟ್ ಕೊಹ್ಲಿ, ಶ್ರೇಯಸ್ ಅಯ್ಯರ್, ಇಶಾನ್ ಕಿಶನ್ (WK), ಹಾರ್ದಿಕ್ ಪಾಂಡ್ಯ, ರವೀಂದ್ರ ಜಡೇಜಾ, ಅಕ್ಷರ್ ಪಟೇಲ್, ಶಾರ್ದೂಲ್ ಠಾಕೂರ್, ಕುಲದೀಪ್ ಯಾದವ್, ಜಸ್ಪ್ರೀತ್ ಬುಮ್ರಾ, ಮೊಹಮ್ಮದ್ ಸಿರಾಜ್.