alex Certify ಕ್ರಿಕೆಟ್ ಪ್ರೇಮಿಗಳಿಗೆ BMRCL ಗುಡ್ ನ್ಯೂಸ್: ವಿಶ್ವಕಪ್ ಪಂದ್ಯ ನಡೆವ ದಿನಗಳಂದು ಮೆಟ್ರೋ ವಿಶೇಷ ಟಿಕೆಟ್ ಸೌಲಭ್ಯ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಕ್ರಿಕೆಟ್ ಪ್ರೇಮಿಗಳಿಗೆ BMRCL ಗುಡ್ ನ್ಯೂಸ್: ವಿಶ್ವಕಪ್ ಪಂದ್ಯ ನಡೆವ ದಿನಗಳಂದು ಮೆಟ್ರೋ ವಿಶೇಷ ಟಿಕೆಟ್ ಸೌಲಭ್ಯ

ಬೆಂಗಳೂರು: ಕ್ರಿಕೆಟ್ ಪ್ರೇಮಿಗಳಿಗೆ ಬಿಎಂಆರ್‌ಸಿಎಲ್ ಗುಡ್ ನ್ಯೂಸ್ ನೀಡಿದೆ. ಬೆಂಗಳೂರಿನ ಎಂ. ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಏಕದಿನ ವಿಶ್ವಕಪ್ ಪಂದ್ಯಗಳು ನಡೆಯುವ ದಿನಗಳಂದು ಅಭಿಮಾನಿಗಳಿಗೆ ಸಹಾಯ ಆಗುವ ನಿಟ್ಟಿನಲ್ಲಿ ಮೆಟ್ರೋ ಟಿಕೆಟ್ ವ್ಯವಸ್ಥೆ ಕಲ್ಪಿಸಲಾಗಿದೆ.

ವಿಶ್ವಕಪ್ ಪಂದ್ಯಗಳಿಗೆ ಮೆಟ್ರೋದಲ್ಲಿ ವಿಶೇಷ ಟಿಕೆಟ್ ವ್ಯವಸ್ಥೆ ಮಾಡಲಾಗಿದೆ. ಅಕ್ಟೋಬರ್ 20, 26, ನವೆಂಬರ್ 4, 9, 12 ರಂದು ಪಂದ್ಯ ನಡೆಯುವ ದಿನಗಳಲ್ಲಿ ನಮ್ಮ ಮೆಟ್ರೋದಲ್ಲಿ ವಿಶೇಷ ಟಿಕೆಟ್ ವ್ಯವಸ್ಥೆ ಕಲ್ಪಿಸದಲಾಗಿದೆ.

ಬರುವ ಮತ್ತು ಹೋಗುವ ಪ್ರಯಾಣಕ್ಕೆ ಬಿಎಂಆರ್‌ಸಿಎಲ್ 50 ರೂ. ನಿಗದಿಪಡಿಸಿದೆ. ಕ್ರಿಕೆಟ್ ಪಂದ್ಯದ ದಿನದಂದು ಬೆಳಗ್ಗೆ 7 ಗಂಟೆಗೆ ಬೆಂಗಳೂರಿನ ಎಲ್ಲಾ ಮೆಟ್ರೋ ನಿಲ್ದಾಣಗಳಲ್ಲಿಯೂ ಪೇಪರ್ ಟಿಕೆಟ್ ಲಭ್ಯವಿರಲಿದೆ. ಪೇಪರ್ ಕಾರ್ಡ್ ಗಳ ಜೊತೆಗೆ ಸ್ಮಾರ್ಟ್ ಕಾರ್ಡ್ ಹಾಗೂ ಎನ್.ಸಿ.ಎಂ.ಸಿ. ವ್ಯವಸ್ಥೆಯನ್ನು ಪ್ರಯಾಣಿಕರು ಉಪಯೋಗಿಸಬಹುದಾಗಿದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...