alex Certify ವಿಶ್ವ ಟೆಸ್ಟ್ ಚಾಂಪಿಯನ್ ಶಿಪ್ ಫೈನಲ್: 2 ಲಕ್ಷ ರೂ.ಗೆ ಮಾರಾಟವಾಗ್ತಿದೆ ಟಿಕೆಟ್ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ವಿಶ್ವ ಟೆಸ್ಟ್ ಚಾಂಪಿಯನ್ ಶಿಪ್ ಫೈನಲ್: 2 ಲಕ್ಷ ರೂ.ಗೆ ಮಾರಾಟವಾಗ್ತಿದೆ ಟಿಕೆಟ್

ಭಾರತ ಹಾಗೂ ನ್ಯೂಜಿಲ್ಯಾಂಡ್ ಮಧ್ಯೆ ವಿಶ್ವ ಟೆಸ್ಟ್ ಚಾಂಪಿಯನ್ ಶಿಪ್ ಫೈನಲ್ ಪಂದ್ಯ ನಡೆಯಲಿದೆ. ಜೂನ್ 18ರಿಂದ ಪಂದ್ಯ ಶುರುವಾಗಲಿದೆ. ಜೂನ್ 2ರಂದು ಟೀಂ ಇಂಡಿಯಾ ನ್ಯೂಜಿಲ್ಯಾಂಡ್ ಗೆ ಪ್ರಯಾಣ ಬೆಳೆಸಲಿದೆ.

ಈ ವಿಶ್ವಕಪ್ ಟೆಸ್ಟ್ ಪಂದ್ಯ ವೀಕ್ಷಣೆಗೆ ಕ್ರಿಕೆಟ್ ಅಭಿಮಾನಿಗಳು ಕುತೂಹಲದಿಂದ ಕಾಯುತ್ತಿದ್ದಾರೆ. ಸೌತಾಂಪ್ಟನ್ ಕ್ರಿಕೆಟ್ ಮೈದಾನದಲ್ಲಿ ನಡೆಯಲಿರುವ ಚಾಂಪಿಯನ್‌ಶಿಪ್ ಫೈನಲ್‌ನಲ್ಲಿ ನಾಲ್ಕು ಸಾವಿರ ಪ್ರೇಕ್ಷಕರಿಗೆ ಅವಕಾಶವಿದೆ. ಅಂತಿಮ ಪಂದ್ಯದ ಬಗ್ಗೆ ಸಾಕಷ್ಟು ಕ್ರೇಜ್ ಇದ್ದು, ಟಿಕೆಟ್ ಗೆ ಬೇಡಿಕೆ ಹೆಚ್ಚಾಗಿದೆ.

ಕ್ರಿಕೆಟ್ ಅಭಿಮಾನಿಗಳು 2 ಲಕ್ಷ ರೂಪಾಯಿ ನೀಡಿ ಟಿಕೆಟ್ ಖರೀದಿ ಮಾಡ್ತಿದ್ದಾರೆ. ಐಸಿಸಿಯಿಂದ ನೇಮಕಗೊಂಡಿರುವ ಅಧಿಕೃತ ಟಿಕೆಟ್ ಏಜೆಂಟ್ ಕಂಪನಿಗಳ ಪ್ರಕಾರ, ಪ್ರತಿ ವಿಭಾಗದಲ್ಲೂ ಟಿಕೆಟ್ ಗೆ ಬೇಡಿಕೆ ಹೆಚ್ಚಿದೆ. ಅನೇಕ ದಿನಗಳಿಂದ ಪ್ರೇಕ್ಷಕರು ಮೈದಾನಕ್ಕೆ ಬಂದಿಲ್ಲ. ಈಗ ಅವಕಾಶ ಸಿಕ್ಕಿದ್ದು, ಮೈದಾನದಲ್ಲಿ ಕ್ರಿಕೆಟ್ ವೀಕ್ಷಣೆ ಮಾಡುವವರ ಸಂಖ್ಯೆ ಹೆಚ್ಚಿದೆ.

ಇಂಗ್ಲೆಂಡ್-ನ್ಯೂಜಿಲ್ಯಾಂಡ್ ವಿರುದ್ಧ ಎಡ್ಜ್‌ಬಾಸ್ಟನ್‌ನಲ್ಲಿ ನಡೆಯುವ ಎರಡನೇ ಟೆಸ್ಟ್ ಪಂದ್ಯದ ಮೊದಲ ಮೂರು ದಿನಗಳು 18000 ಪ್ರೇಕ್ಷಕರಿಗೆ ಭಾಗವಹಿಸಲು ಅವಕಾಶವಿದೆ. ಸೌತಾಂಪ್ಟನ್‌ನಲ್ಲಿ ನಡೆಯಲಿರುವ ವಿಶ್ವ ಟೆಸ್ಟ್ ಚಾಂಪಿಯನ್‌ಶಿಪ್‌ನ ಫೈನಲ್‌ ಪಂದ್ಯವನ್ನು ನಾಲ್ಕು ಸಾವಿರ ಪ್ರೇಕ್ಷಕರು ಮೈದಾನದಲ್ಲಿ ವೀಕ್ಷಿಸಬಹುದಾಗಿದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...