ಚಂಡಿಗಢ: ಜಾತಿನಿಂದನೆ ಪ್ರಕರಣದಲ್ಲಿ ಭಾರತ ಕ್ರಿಕೆಟ್ ತಂಡದ ಮಾಜಿ ಆಟಗಾರ ಯುವರಾಜ್ ಸಿಂಗ್ ಅವರನ್ನು ಹರಿಯಾಣ ಪೊಲೀಸರು ಬಂಧಿಸಿ ಬಿಡುಗಡೆ ಮಾಡಿದ್ದಾರೆ.
ಟೀಮ್ ಇಂಡಿಯಾ ಸ್ಪಿನ್ನರ್ ಯಜುವೇಂದ್ರ ಚಹಲ್ ಅವರ ಬಗ್ಗೆ ಯುವರಾಜ್ ಸಿಂಗ್ ಜಾತಿ ನಿಂದನೆ ಮಾಡಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಬಂಧಿಸಿ ಮಧ್ಯಂತರ ಜಾಮೀನಿನ ಮೇಲೆ ಬಿಡುಗಡೆ ಮಾಡಲಾಗಿದೆ.
ಕಳೆದವರ್ಷ ಇನ್ಸ್ಟಾಗ್ರಾಮ್ ವಿಡಿಯೋದಲ್ಲಿ ಯುವರಾಜ್ ಸಿಂಗ್ ಜಾತಿನಿಂದನೆ ಮಾಡಿದ್ದಾರೆ ಎಂದು ಆರೋಪಿಸಲಾಗಿತ್ತು. ನಂತರದಲ್ಲಿ ಯುವರಾಜ್ ಸಿಂಗ್ ಕ್ಷಮೆಯಾಚಿಸಿದ್ದರು. ವ್ಯಕ್ತಿಯೊಬ್ಬರು ದೂರು ದಾಖಲಿಸಿದ್ದರು. ಹರಿಯಾಣ ಹೈಕೋರ್ಟ್ ವಿಚಾರಣೆಗೆ ಹಾಜರಾಗುವಂತೆ ಸೂಚನೆ ನೀಡಿದ್ದರೂ, ಅವರು ಹಾಜರಾಗದ ಕಾರಣ ಬಂಧಿಸಿ ಮಧ್ಯಂತರ ಜಾಮೀನು ಮೇಲೆ ಬಿಡುಗಡೆ ಮಾಡಲಾಗಿದೆ.