ಟಿ20 ಮೊದಲನೇ ವಿಶ್ವಕಪ್ ಟೂರ್ನಿಯಲ್ಲಿ 6 ಎಸೆತಗಳಲ್ಲಿ 6 ಸಿಕ್ಸರ್ ಸಿಡಿಸಿ ಯುವರಾಜ್ ಸಿಂಗ್ ದಾಖಲೆ ಬರೆದು ಇಂದಿಗೆ 14 ವರ್ಷಗಳಾಗಿವೆ.
ದಕ್ಷಿಣ ಆಫ್ರಿಕಾದ ಸರ್ಬನ್ ನಲ್ಲಿ 2007ರಲ್ಲಿ ನಡೆದಿದ್ದ ಮೊದಲನೇ ಟಿ20 ವಿಶ್ವಕಪ್ ಟೂರ್ನಿಯ ಇಂಗ್ಲೆಂಡ್ ವಿರುದ್ಧದ ಪಂದ್ಯದಲ್ಲಿ ಸ್ಟುವರ್ಟ್ ಬ್ರಾಡ್ ಅವರ 6 ಎಸೆತಗಳಲ್ಲಿ ಯುವರಾಜ್ ಸಿಂಗ್ ಸತತ ಆರು ಸಿಕ್ಸರ್ ಗಳನ್ನು ಸಿಡಿಸಿ ದಾಖಲೆ ಬರೆದಿದ್ದರು.
ಈ ಪಂದ್ಯದಲ್ಲಿ ಯುವರಾಜ್ ಸಿಂಗ್ 12 ಎಸೆತಗಳಲ್ಲಿ ಅರ್ಧ ಶತಕ ಗಳಿಸಿದ್ದರು. 14 ಎಸೆತಗಳಲ್ಲಿ ಮೂರು ಬೌಂಡರಿ, 7 ಸಿಕ್ಸರ್ ನೆರವಿನಿಂದ 58 ರನ್ ಗಳಿಸಿದ್ದರು. ಈ ಪಂದ್ಯದಲ್ಲಿ ಭಾರತ ಇಂಗ್ಲೆಂಡ್ ವಿರುದ್ಧ ಜಯಗಳಿಸಿ 14 ವರ್ಷಗಳು ಕಳೆದಿದ್ದು, ಸಾಮಾಜಿಕ ಜಾಲತಾಣಗಳಲ್ಲಿ ಯುವರಾಜ್ ಸಿಂಗ್ ಅವರ ಸಾಧನೆಯ ನೆನಪು ಮಾಡಿಕೊಳ್ಳಲಾಗಿದೆ.