ಈ ಬಾರಿಯ ಇಂಡಿಯನ್ ಪ್ರೀಮಿಯರ್ ನ 12ನೇ ಪಂದ್ಯದಲ್ಲಿ ಇಂದು ಕ್ಯಾಪ್ಟನ್ ಕೂಲ್ ಎಂ.ಎಸ್. ಧೋನಿ ನಾಯಕತ್ವದ ಚೆನ್ನೈ ಸೂಪರ್ ಕಿಂಗ್ಸ್ ಹಾಗೂ ಯುವ ಕ್ರಿಕೆಟಿಗ ಸಂಜು ಸ್ಯಾಮ್ಸನ್ ನಾಯಕತ್ವದ ರಾಜಸ್ಥಾನ್ ರಾಯಲ್ಸ್ ತಂಡ ಮುಂಬೈನ ವಾಂಖೆಡೆ ಕ್ರೀಡಾಂಗಣದಲ್ಲಿ ಮುಖಾಮುಖಿಯಾಗಲಿವೆ.
ಎಂ.ಎಸ್. ಧೋನಿ ನಾಯಕತ್ವದ ಚೆನ್ನೈ ಸೂಪರ್ ಕಿಂಗ್ಸ್ ತಂಡ ಆಡಿರುವ ಎರಡು ಪಂದ್ಯಗಳಲ್ಲಿ ತನ್ನ ಮೊದಲನೇ ಪಂದ್ಯದಲ್ಲಿ ಡೆಲ್ಲಿ ಕ್ಯಾಪಿಟಲ್ಸ್ ವಿರುದ್ಧ ಸೋಲು ಕಂಡು ಎರಡನೇ ಪಂದ್ಯದಲ್ಲಿ ಪಂಜಾಬ್ ಕಿಂಗ್ಸ್ ವಿರುದ್ಧ ಭರ್ಜರಿ ಜಯ ಸಾಧಿಸುವ ಮೂಲಕ ಕಮ್ ಬ್ಯಾಕ್ ಮಾಡಿದೆ. ಈ ಬಾರಿ ತಂಡಕ್ಕೆ ಸೇರ್ಪಡೆಯಾಗಿರುವ ಮೋಯಿನ್ ಅಲಿ ಕೂಡ ಬ್ಯಾಟಿಂಗ್ ನಲ್ಲಿ ಉತ್ತಮ ಪ್ರದರ್ಶನ ತೋರಲಿದ್ದಾರೆ.
ಸಂಜು ಸ್ಯಾಮ್ಸನ್ ಕ್ಯಾಚ್ ಗೆ ಕ್ರಿಕೆಟ್ ಪ್ರೇಮಿಗಳು ಫಿದಾ
ಸಂಜು ಸ್ಯಾಮ್ಸನ್ ನಾಯಕತ್ವದ ರಾಜಸ್ಥಾನ್ ರಾಯಲ್ಸ್ ತಂಡ ಕೂಡ 2 ಪಂದ್ಯಗಳನ್ನಾಡಿದ್ದು 1 ಪಂದ್ಯದಲ್ಲಿ ಸೋತು ಇನ್ನೊಂದು ಪಂದ್ಯದಲ್ಲಿ ಜಯ ಸಾಧಿಸಿದೆ. ಬೆರಳಿನ ಗಾಯ ಮಾಡಿಕೊಂಡಿದ್ದ ಸ್ಟಾರ್ ಆಲ್ರೌಂಡರ್ ಬೆನ್ ಸ್ಟೋಕ್ಸ್ ಈ ಬಾರಿಯ ಐಪಿಎಲ್ ನಿಂದ ಹೊರಗುಳಿದಿದ್ದಾರೆ. ಡೇವಿಡ್ ಮಿಲ್ಲರ್ ಹಾಗೂ ಕ್ರಿಸ್ ಮೋರಿಸ್ ಅವರ ಬ್ಯಾಟಿಂಗ್ ನಿಂದ ತಂಡದ ಆತ್ಮವಿಶ್ವಾಸ ಇನ್ನಷ್ಟು ಹೆಚ್ಚಿಸಿದೆ.