HomeLatest NewsGOOD NEWS: ಕ್ರೀಡಾಪಟುಗಳಿಗೆ ಗುಡ್ ನ್ಯೂಸ್: ವಿವಿಧ ಇಲಾಖೆಗಳಲ್ಲಿ ನೇಮಕಾತಿಯಲ್ಲಿ ಮೀಸಲಾತಿ ಅನುಷ್ಠಾನ: ಸಿಎಂ ಘೋಷಣೆ

GOOD NEWS: ಕ್ರೀಡಾಪಟುಗಳಿಗೆ ಗುಡ್ ನ್ಯೂಸ್: ವಿವಿಧ ಇಲಾಖೆಗಳಲ್ಲಿ ನೇಮಕಾತಿಯಲ್ಲಿ ಮೀಸಲಾತಿ ಅನುಷ್ಠಾನ: ಸಿಎಂ ಘೋಷಣೆ

ಬೆಳಗಾವಿ: ಕ್ರೀಡಾಪಟುಗಳಿಗೆ ಪ್ರೋತ್ಸಾಹ ನೀಡುವ ದಿಸೆಯಲ್ಲಿ ಅರಣ್ಯ ಇಲಾಖೆಯಲ್ಲಿ ಶೇ. 3 ಪೊಲೀಸ್ ಇಲಾಖೆಯಲ್ಲಿ ಶೇ.3 ಹಾಗೂ ವಿವಿಧ ಇಲಾಖೆಗಳಲ್ಲಿ ಶೇ. 2 ರಷ್ಟು ಮೀಸಲಾತಿಯನ್ನು ಅನುಷ್ಠಾನಗೊಳಿಸಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಘೋಷಿಸಿದ್ದಾರೆ.

ವಿಧಾನ ಮಂಡಲ ಅಧಿವೇಶನ ಹಿನ್ನೆಲೆಯಲ್ಲಿ ವಿಧಾನ ಪರಿಷತ್ ನಲ್ಲಿ ಮಾತನಾಡಿದ ಸಿಎಂ ಸಿದ್ದರಾಮಯ್ಯ, ರಾಜ್ಯದಲ್ಲಿ ಕ್ರೀಡಾಪಟುಗಳಿಗೆ ಪ್ರೋತ್ಸಾಹ, ಕ್ರೀಡಾ ಸಾಧಕರಿಗೆ ಸರ್ಕಾರಿ ಉದ್ಯೋಗದಲ್ಲಿ ಮೀಸಲಾತಿ, ಕ್ರೀಡಾ ಮೂಲಸೌಕರ್ಯ ವೃದ್ಧಿ ಹಾಗೂ ಕಬ್ಬಡಿ ಕ್ರೀಡೆಗೆ ಪ್ರೋತ್ಸಾಹ ನೀಡುವ ಬಗ್ಗೆ ಮಾಹಿತಿ ನೀಡಿದರು.

ರಾಜ್ಯ ಸರ್ಕಾರ ಒಲಂಪಿಕ್ಸ್, ಪಾರಾಒಲಂಪಿಕ್ಸ್, ಕಾಮನ್ವೆಲ್ತ್, ಏಷಿಯನ್ ಗೇಮ್ಸ್ ಕ್ರೀಡಾಕೂಟಗಳಲ್ಲಿ ಪದಕವಿಜೇತರಾದ 13 ಕ್ರೀಡಾಪಟುಗಳಿಗೆ ನೇಮಕಾತಿ ಮಾಡಿಕೊಳ್ಳಲಾಗಿದೆ. ಪೊಲೀಸ್ ಇಲಾಖೆಯಲ್ಲಿ 70 ಕಾನ್ಸ್ಟೇಬಲ್ ಗಳಿಗೆ ನೇರ ನೇಮಕಾತಿ ಹಾಗೂ 14 ಪಿಎಸ್ ಐ ಗಳನ್ನು ನೇಮಕಾತಿ ಮಾಡಿಕೊಳ್ಳಲಾಗಿದೆ. ಅಲ್ಲದೇ ಅರಣ್ಯ ಇಲಾಖೆಯಲ್ಲಿ ಶೇ. 3 ಪೊಲೀಸ್ ಇಲಾಖೆಯಲ್ಲಿ ಶೇ.3 ಹಾಗೂ ವಿವಿಧ ಇಲಾಖೆಗಳಲ್ಲಿ ಶೇ. 2 ರಷ್ಟು ಮೀಸಲಾತಿ ನೀಡಿ ಕ್ರೀಡಾಪಟುಗಳಿಗೆ ಪ್ರೋತ್ಸಾಹ ನೀಡಲಾಗುವುದು. ಕಬ್ಬಡಿ ಕ್ರೀಡೆಗೆ ಹೆಚ್ಚಿನ ಪ್ರೋತ್ಸಾಹ ನೀಡುವ ಬಗ್ಗೆ ಪರಿಶೀಲನೆ ನಡೆಸಲಾಗುವುದು ಎಂದು ತಿಳಿಸಿದರು.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

For Latest News Updates, Join Our Whatsapp Community🚩
RELATED ARTICLES

Most Popular