HomeKarnatakaಸಂಸದ ಬಸವರಾಜ್ ನಪುಂಸಕ: ಮೋದಿ ಎದುರಾದರೆ ಬಿಜೆಪಿ ಸಂಸದರು ಮೂತ್ರ ವಿಸರ್ಜನೆ ಮಾಡಿಕೊಳ್ತಾರೆ: ನಾಲಿಗೆ ಹರಿಬಿಟ್ಟ...

ಸಂಸದ ಬಸವರಾಜ್ ನಪುಂಸಕ: ಮೋದಿ ಎದುರಾದರೆ ಬಿಜೆಪಿ ಸಂಸದರು ಮೂತ್ರ ವಿಸರ್ಜನೆ ಮಾಡಿಕೊಳ್ತಾರೆ: ನಾಲಿಗೆ ಹರಿಬಿಟ್ಟ ಕಾಂಗ್ರೆಸ್ ಶಾಸಕ ಶ್ರೀನಿವಾಸ್

ತುಮಕೂರು: ಬಿಜೆಪಿ ಸಂಸದ ಜಿ.ಎಸ್. ಬಸವರಾಜು ವಿರುದ್ಧ ಗುಬ್ಬಿ ಶಾಸಕ ಎಸ್.ಆರ್. ಶ್ರೀನಿವಾಸ್ ನಾಲಿಗೆ ಹರಿಬಿಟ್ಟಿದ್ದಾರೆ.

ತುಮಕೂರಿನಲ್ಲೊಬ್ಬ ನಪುಂಸಕ ಸಂಸದ ಇದ್ದಾನೆ. ಒಂದೇ ಒಂದು ದಿನ ಸಂಸತ್ ನಲ್ಲಿ ಮಾತನಾಡಿಲ್ಲ. ಯಾವ ಪುರುಷಾರ್ಥಕ್ಕಾಗಿ ಅಂತವರನ್ನು ಗೆಲ್ಲಿಸಿ ಕಳಿಸುತ್ತೀರಿ ಎಂದು ಪ್ರಶ್ನಿಸಿದ್ದಾರೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ನಪುಂಸಕರು ನಮಗೆ ಬೇಕಾಗಿಲ್ಲ, ಅಭಿವೃದ್ಧಿ ಆಗಬೇಕು ಎಂದರೆ ಮುದ್ದಹನುಮೇಗೌಡರ ಗೆಲ್ಲಿಸಬೇಕು. ಸಂಸತ್ ನಲ್ಲಿ ಮಾತನಾಡುವಂತಹ ಮುದ್ದಹನುಮೇಗೌಡರು ಬೇಕಾಗಿದ್ದಾರೆ ಎಂದು ಹೇಳಿದ್ದಾರೆ.

ರಾಜ್ಯದಲ್ಲಿರುವ ಬಿಜೆಪಿಯ 26 ಸಂಸದರು ಮೋದಿಗೆ ಹೆದರುತ್ತಾರೆ. ಮೋದಿ ಬಂದರೆ ಹೆದರಿ ಮೂತ್ರ ವಿಸರ್ಜನೆ ಮಾಡಿಕೊಳ್ಳುತ್ತಾರೆ. ಕೇಂದ್ರದ ಬಳಿ ಬರ ಪರಿಹಾರ ಕೇಳಿದ್ದರೂ ನಯಾ ಪೈಸೆ ಬಿಡುಗಡೆಯಾಗಿಲ್ಲ. ನರೇಂದ್ರ ಮೋದಿ ಅವರಿಂದ ರಾಜ್ಯಕ್ಕೆ ಮೋಸವಾಗಿದೆ. ಒಕ್ಕೂಟ ವ್ಯವಸ್ಥೆಯಲ್ಲಿ ಎಲ್ಲರಿಗೂ ಪಾಲು ಕೊಡುವುದು ಕೇಂದ್ರದ ಕರ್ತವ್ಯ. ಆದರೆ, ತನ್ನ ಕರ್ತವ್ಯ ನಿರ್ವಹಿಸುವಲ್ಲಿ ಮೋದಿ ಸರ್ಕಾರ ವಿಫಲವಾಗಿದ್ದು, ರಾಜ್ಯಕ್ಕೆ ಆದ ಅನ್ಯಾಯ ಸರಿಪಡಿಸಲು ಕಾಂಗ್ರೆಸ್ ಬೆಂಬಲಿಸಿ ಎಂದು ಹೇಳಿದ್ದಾರೆ.

For Latest News Updates, Join Our Whatsapp Community🚩
niranjan
niranjan
Niranjan working in media filed from 24 years. He worked in Hubballi Udayavani and local newspapers in Shivamogga. ನಿರಂಜನ ಮೂರ್ತಿ ಎಚ್.ಸಿ. 24 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿದ್ದಾರೆ. ಎಂಎ ಕನ್ನಡ, ಪಿಜಿ ಡಿಪ್ಲೊಮಾ ಇನ್ ಜರ್ನಲಿಸಂ ವ್ಯಾಸಂಗ ಮಾಡಿದ್ದಾರೆ. ಶಿವಮೊಗ್ಗದ ಎಚ್ಚರಿಕೆ, ನಮ್ಮನಾಡು, ಜೈ ಕರುನಾಡು, ನುಡಿಗಿಡ, ಕ್ರಾಂತಿ ಭಗತ್ ಸ್ಥಳೀಯ ಪತ್ರಿಕೆಗಳಲ್ಲಿ ವರದಿಗಾರನಾಗಿ, ಹುಬ್ಬಳ್ಳಿಯ ಉದಯವಾಣಿಯಲ್ಲಿ ಉಪ ಸಂಪಾದಕರಾಗಿ ಕಾರ್ಯ ನಿರ್ವಹಣೆ ಮಾಡಿದ್ದಾರೆ.
RELATED ARTICLES

Most Popular