
ಬೆಂಗಳೂರು: ಗುಬ್ಬಿ ಕ್ಷೇತ್ರದ ಶಾಸಕ ಸ್ಥಾನಕ್ಕೆ ಜೆಡಿಎಸ್ ಪಕ್ಷದ ಎಸ್.ಆರ್. ಶ್ರೀನಿವಾಸ್(ವಾಸು) ರಾಜೀನಾಮೆ ನೀಡಿದ್ದಾರೆ. ಅವರ ರಾಜೀನಾಮೆಯನ್ನು ವಿಧಾನಸಭಾಧ್ಯಕ್ಷರು ಅಂಗೀಕರಿಸಿದ್ದಾರೆ.
ತುಮಕೂರು ಜಿಲ್ಲೆ ಗುಬ್ಬಿ ಜೆಡಿಎಸ್ ಶಾಸಕ ಶ್ರೀನಿವಾಸ್ ವಿಧಾನಸಭೆ ಸ್ಪೀಕರ್ ವಿಶ್ವೇಶ್ವರ ಹೆಗಡೆ ಕಾಗೇರಿ ಅವರನ್ನು ಭೇಟಿ ಮಾಡಿ ರಾಜೀನಾಮೆ ಸಲ್ಲಿಸಿದ್ದರು. ಅವರ ರಾಜೀನಾಮೆಯನ್ನು ಅಂಗೀಕರಿಸಲಾಗಿದೆ. ವಿಧಾನಸಭೆ ಚುನಾವಣೆಯಲ್ಲಿ ಶ್ರೀನಿವಾಸ್ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಯಾಗಿ ಸ್ಪರ್ಧಿಸಲಿದ್ದಾರೆ.
Karnataka | JDS party's SR Srinivas (Vasu) resigned as an MLA from Gubbi Constituency. His resignation has been accepted by Assembly Speaker.
— ANI (@ANI) March 27, 2023

