HomeLatest Newsಇಂದಿನಿಂದ ಶ್ರೀ ಹಾಸನಾಂಬ ದೇವಿ ದರ್ಶನ ಮತ್ತು ಶ್ರೀ ಸಿದ್ದೇಶ್ವರ ಸ್ವಾಮಿ ಜಾತ್ರಾ ಮಹೋತ್ಸವ ಪ್ರಾರಂಭ

ಇಂದಿನಿಂದ ಶ್ರೀ ಹಾಸನಾಂಬ ದೇವಿ ದರ್ಶನ ಮತ್ತು ಶ್ರೀ ಸಿದ್ದೇಶ್ವರ ಸ್ವಾಮಿ ಜಾತ್ರಾ ಮಹೋತ್ಸವ ಪ್ರಾರಂಭ

ಶ್ರೀ ಹಾಸನಾಂಬ ದೇವಿ ದರ್ಶನ ಮತ್ತು ಶ್ರೀ ಸಿದ್ದೇಶ್ವರ ಸ್ವಾಮಿ ಜಾತ್ರಾ ಮಹೋತ್ಸವ ಅ.09 ರಂದು ಪ್ರಾರಂಭವಾಗಲಿದೆ. ಅಂದು ಮ.12 ಗಂಟೆಗೆ ಶ್ರೀ ಹಾಸನಾಂಬ ದೇವಿಯ ದೇವಾಲಯದ ಬಾಗಿಲನ್ನು ತೆರೆಯಲಾಗುತ್ತದೆ. ಅ.23 ರಂದು ದೇವಾಲಯದ ಬಾಗಿಲನ್ನು ಮುಚ್ಚಲಾಗುತ್ತದೆ. ಭಕ್ತರಿಗೆ ಅ.10 ರಿಂದ ಅ.23 ರವರೆಗೆ ದರ್ಶನಕ್ಕೆ ಅವಕಾಶ ಮಾಡಿಕೊಡಲಾಗಿದೆ.

ಶ್ರೀ ಆದಿಚುಂಚನಗಿರಿ ಮಹಾಸಂಸ್ಥಾನ ಮಠದ ಪೀಠಾಧ್ಯಕ್ಷರಾದ ಪರಮಪೂಜ್ಯ ಶ್ರೀ ಡಾ. ನಿರ್ಮಲಾನಂದನಾಥ ಮಹಾಸ್ವಾಮೀಜಿ, ತುಮಕೂರು ಶ್ರೀ ಸಿದ್ಧಗಂಗಾ ಮಠದ ಶ್ರೀ ಸಿದ್ಧಲಿಂಗ ಮಹಾಸ್ವಾಮಿಗಳು ಕಾರ್ಯಕ್ರಮ ಉದ್ಘಾಟನೆ ಮಾಡಲಿದ್ದಾರೆ.

ಕರ್ನಾಟಕ ಸರ್ಕಾರದ ಮುಖ್ಯಮಂತ್ರಿಗಳಾದ ಸಿದ್ಧರಾಮಯ್ಯ, ಮಾಜಿ ಪ್ರಧಾನ ಮಂತ್ರಿಗಳು ಹಾಗೂ ರಾಜ್ಯಸಭಾ ಸದಸ್ಯರಾದ ಹೆಚ್.ಡಿ.ದೇವೇಗೌಡ, ಕರ್ನಾಟಕ ಸರ್ಕಾರದ ಉಪ ಮುಖ್ಯ ಮಂತ್ರಿಗಳಾದ ಡಿ.ಕೆ ಶಿವಕುಮಾರ್ ಅವರು ಗೌರವ ಉಪಸ್ಥಿತಿವಹಿಸಲಿದ್ದಾರೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಕಂದಾಯ ಸಚಿವರು ಹಾಗೂ ಜಿಲ್ಲಾ ಉಸ್ತುವಾರಿ ಸಚಿವರಾದ ಕೃಷ್ಣ ಭೈರೇಗೌಡ, ಮುಜರಾಯಿ ಮತ್ತು ಸಾರಿಗೆ ಸಚಿವರಾದ ರಾಮಲಿಂಗರೆಡ್ಡಿ, ಕರ್ನಾಟಕ ರಾಜ್ಯ ಗೃಹ ಮಂಡಳಿಯ ಅಧ್ಯಕ್ಷರು ಹಾಗೂ ಶಾಸಕರಾದ ಕೆ.ಎಂ.ಶಿವಲಿAಗೇಗೌಡ ಅವರು ಘನ ಉಪಸ್ಥಿತಿವಹಿಸಲಿದ್ದಾರೆ. ಶಾಸಕರಾದ ಸ್ವರೂಪ್ ಪ್ರಕಾಶ್ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಲಿದ್ದಾರೆ.

ಮುಖ್ಯ ಅತಿಥಿಗಳಾಗಿ ಸಂಸದರಾದ ಶ್ರೇಯಸ್ ಎಂ.ಪಟೇಲ್, ಶಾಸಕರುಗಳಾದ ಹೆಚ್.ಡಿ.ರೇವಣ್ಣ, ಡಾ.ಸಿ.ಎನ್.ಬಾಲಕೃಷ್ಣ, ಎ.ಮಂಜು, ಹೆಚ್.ಕೆ.ಸುರೇಶ್, ಸಿಮೆಂಟ್ ಮಂಜು, ವಿಧಾನ ಪರಿಷತ್ ಶಾಸಕರುಗಳಾದ ಮಧು ಜಿ.ಮಾದೇಗೌಡ, ಕೆ.ವಿವೇಕಾನಂದ, ಡಾ|| ಸೂರಜ್ ರೇವಣ್ಣ ಹಾಗೂ ಮಹಾನಗರ ಪಾಲಿಕೆಯ ಮಹಾಪೌರರಾದ ಗಿರೀಶ್ ಚನ್ನವಿರಪ್ಪ ಅವರು ಭಾಗವಹಿಸಲಿದ್ದಾರೆ.

ಕ್ರೀಡಾ ಮತ್ತು ಯುವಜನ ಸಬಲೀಕರಣ ಇಲಾಖೆಯ ಪ್ರಧಾನ ಕಾರ್ಯದರ್ಶಿಗಳು ಹಾಗೂ ಹಾಸನ ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿ ನವೀನ್ ರಾಜ್ ಸಿಂಗ್, ಹಿಂದೂ ಧಾರ್ಮಿಕ ಸಂಸ್ಥೆಗಳು ಹಾಗೂ ಧರ್ಮದಾಯ ದತ್ತಿಗಳ ಇಲಾಖೆಯ ಆಯುಕ್ತರಾದ ಡಾ.ವೆಂಕಟೇಶ್ ಎಂ.ವಿ, ಜಿಲ್ಲಾಧಿಕಾರಿ ಕೆ.ಎಸ್ ಲತಾ ಕುಮಾರಿ, ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಡಾ. ಪೂರ್ಣಿಮಾ ಬಿ.ಆರ್, ಜಿಲ್ಲಾ ಪೊಲೀಸ್ ವರೀಷ್ಠಾಧಿಕಾರಿ ಮೊಹಮ್ಮದ್ ಸುಜೀತಾ, ಉಪ ಅರಣ್ಯ ಸಂರಕ್ಷಣಾಧಿಕಾರಿ ಸೌರಭ್ ಕುಮಾರ್, ಉಪ ವಿಭಾಗಾಧಿಕಾರಿ ಹಾಗೂ ಶ್ರೀ ಹಾಸನಾಂಬ ದೇವಾಲಯದ ಆಡಳಿತಾಧಿಕಾರಿ ಮಾರುತಿ ಜೆ.ಬಿ, ತಹಸೀಲ್ದಾರ್ ಗೀತಾ ಸಿ.ಜಿ ಭಾಗವಹಿಸಲಿದ್ದಾರೆ.

ಅ.10 ರಿಂದ ಅ.17 ರವರೆಗೆ ಬೆ.10 ರಿಂದ ಮ.01 ಗಂಟೆಯವರೆಗೆ ಮಾತ್ರ ಶಿಷ್ಟಾಚಾರ ದರ್ಶನಕ್ಕೆ ಅವಕಾಶವಿರುತ್ತದೆ. ಅ.18 ರಿಂದ ಅ.22 ರವರೆಗೆ ಯಾವುದೇ ರೀತಿಯ ಶಿಷ್ಟಾಚಾರ ದರ್ಶನಕ್ಕೆ ಅವಕಾಶ ಇರುವುದಿಲ್ಲ.

For Latest News Updates, Join Our Whatsapp Community🚩
ranjith
ranjith
Ranjith S S has a decade of experience in digital media. covering stories that spark conversations across the internet, Breaking news, viral moments and celebrity updates to everyday news that gets people talking.
RELATED ARTICLES

Most Popular