ಬಳ್ಳಾರಿ : ಪ್ರಸ್ತಕ ಶೈಕ್ಷಣಿಕ ಸಾಲಿನಿಂದ ಸ್ನಾತಕ, ಸ್ನಾತಕೋತ್ತರ ಪದವಿಗೆ ಪ್ರವೇಶಾತಿ ಬಯಸುವ ತೃತೀಯ ಲಿಂಗಿ ಮತ್ತು ದೇವದಾಸಿ ಮಕ್ಕಳ ವಿದ್ಯಾರ್ಥಿಗಳಿಗೆ (ದಾಖಲಾತಿಗಳನ್ನು ಸಲ್ಲಿಸಿದ್ದಲ್ಲಿ ಮಾತ್ರ) ಪ್ರವೇಶಾತಿಯ ಶುಲ್ಕದಿಂದ ವಿನಾಯಿತಿ ನೀಡಲಾಗುವುದು ಎಂದು ವಿಜಯನಗರ ಶ್ರೀ ಕೃಷ್ಣದೇವರಾಯ ವಿಶ್ವವಿದ್ಯಾಲಯದ ಕುಲಸಚಿವ ಎಸ್.ಎನ್ರುದ್ರೇಶ್ ಅವರು ತಿಳಿಸಿದ್ದಾರೆ.
ಮಾನವೀಯ, ಸಾಮಾಜಿಕ, ನೈಸರ್ಗಿಕ ಸಾಮ್ಯತೆ ದೃಷ್ಟಿಯಿಂದ ಪ್ರಸಕ್ತ ಶೈಕ್ಷಣಿಕ ಸಾಲಿನಿಂದ ಸ್ನಾತಕ, ಸ್ನಾತಕೋತ್ತರ ಪದವಿಗೆ ಪ್ರವೇಶಾತಿ ಬಯಸುವ ತೃತೀಯ ಲಿಂಗಿ ಮತ್ತು ದೇವದಾಸಿ ಮಕ್ಕಳ ವಿದ್ಯಾರ್ಥಿಗಳಿಗೆ (ದಾಖಲಾತಿಗಳನ್ನು ಸಲ್ಲಿಸಿದ್ದಲ್ಲಿ ಮಾತ್ರ) ಪ್ರವೇಶಾತಿಯ ಶುಲ್ಕದಿಂದ ವಿನಾಯಿತಿ ನೀಡಲಾಗುತ್ತಿದೆ ಎಂದು ಸಿಂಡಿಕೇಟ್ ಸಭೆಯಲ್ಲಿ ತೀರ್ಮಾನಿಸಿ ಅನುಮೋದಿಸಲಾಗಿದೆ ಎಂದು ಅವರು ತಿಳಿಸಿದ್ದಾರೆ.
📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
Ranjith S S has a decade of experience in digital media. covering stories that spark conversations across the internet, Breaking news, viral moments and celebrity updates to everyday news that gets people talking.