ಡಿ. 15 ರಂದು ಶ್ರೀಲಂಕಾ ಅಧ್ಯಕ್ಷ ದಿಸ್ಸನಾಯಕೆ ಭಾರತಕ್ಕೆ ಮೊದಲ ಪ್ರವಾಸ

ಕೊಲಂಬೋ: ಶ್ರೀಲಂಕಾ ಅಧ್ಯಕ್ಷ ಅನುರಾ ಕುಮಾರ ದಿಸ್ಸನಾಯಕೆ ಡಿಸೆಂಬರ್ 15 ರಿಂದ ಎರಡು ದಿನಗಳ ಕಾಲ ಭಾರತ ಪ್ರವಾಸ ಕೈಗೊಳ್ಳಲಿದ್ದಾರೆ.

ಶ್ರೀಲಂಕಾ ಅಧ್ಯಕ್ಷರಾಗಿ ಅಧಿಕಾರ ವಹಿಸಿಕೊಂಡ ನಂತರ ದಿಸ್ಸನಾಯಕೆ ಅವರ ಭಾರತದ ಮೊದಲ ಭೇಟಿ ಇದಾಗಲಿದೆ. ಭಾರತ ಮತ್ತು ಶ್ರೀಲಂಕಾ ನಡುವಿನ ಬಾಂಧವ್ಯ ಸುಧಾರಿಸಲಿದೆ ಎಂದು ಶ್ರೀಲಂಕಾ ಸಂಪುಟ ವಕ್ತಾರ ನಲಿಂದಾ ಜಯತಿಸ್ಸಾ ತಿಳಿಸಿದ್ದಾರೆ.

ಭಾರತ ಪ್ರವಾಸದ ವೇಳೆ ದಿಸ್ಸನಾಯಕೆ ಅವರು ರಾಷ್ಟ್ರಪತಿ ದ್ರೌಪದಿ ಮುರ್ಮು, ಪ್ರಧಾನಿ ನರೇಂದ್ರ ಮೋದಿ ಅವರನ್ನು ಭೇಟಿ ಮಾಡಲಿದ್ದಾರೆ. ಉಭಯ ದೇಶಗಳ ದ್ವಿಪಕ್ಷೀಯ ಬಾಂಧವ್ಯದ ಕುರಿತಾಗಿ ಮಾತುಕತೆ ನಡೆಸಲಿದ್ದಾರೆ. ಅವರ ಭೇಟಿಯ ವೇಳೆ ಹಲವು ಕ್ಷೇತ್ರಗಳಲ್ಲಿ ಒಪ್ಪಂದ ಏರ್ಪಡುವ ಸಾಧ್ಯತೆ ಇದೆ ಎಂದು ತಿಳಿಸಿದ್ದಾರೆ.

ದಿಸ್ಸನಾಯಕೆ ಭಾರತ ಭೇಟಿಯ ಸಂದರ್ಭದಲ್ಲಿ ವಿದೇಶಾಂಗ ಸಚಿವ ವಿಜಿತಾ ಹೆರಾತ್ ಮತ್ತು ಹಣಕಾಸು ಖಾತೆ ಉಪ ಸಚಿವ ಅನಿಲ್ ಜಯಂತ ಫರ್ನಾಂಡೋ ಸೇರಿದಂತೆ ಪ್ರಮುಖ ಅಧಿಕಾರಿಗಳೊಂದಿಗೆ ಭಾರತದ ಪ್ರಧಾನಿ ನರೇಂದ್ರ ಮೋದಿ ಮತ್ತು ಅಧ್ಯಕ್ಷ ದ್ರೌಪದಿ ಮುರ್ಮು ಅವರನ್ನು ಭೇಟಿಯಾಗಲಿದ್ದಾರೆ ಎಂದು ಶ್ರೀಲಂಕಾ ಸರ್ಕಾರ ದೃಢಪಡಿಸಿದೆ.

ದೆಹಲಿಗೆ ಭೇಟಿ ನೀಡುವಂತೆ ಭಾರತೀಯ ವಿದೇಶಾಂಗ ಸಚಿವ ಎಸ್. ಜೈಶಂಕರ್ ಅವರು ಆಹ್ವಾನಿಸಿದ್ದರು.

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read