HomeKarnatakaಕರ್ನಾಟಕ ಹೈಕೋರ್ಟ್ ಮೊರೆ ಹೋದ ಶ್ರೀಲಂಕಾ ಸುಪ್ರೀಂ ಕೋರ್ಟ್ ಜಡ್ಜ್

ಕರ್ನಾಟಕ ಹೈಕೋರ್ಟ್ ಮೊರೆ ಹೋದ ಶ್ರೀಲಂಕಾ ಸುಪ್ರೀಂ ಕೋರ್ಟ್ ಜಡ್ಜ್

ಬೆಂಗಳೂರು: ಶ್ರೀಲಂಕಾ ಸುಪ್ರೀಂ ಕೋರ್ಟ್ ನ್ಯಾಯಮೂರ್ತಿ ಎಎಚ್‌ಎಂಡಿ ನವಾಜ್ ಕರ್ನಾಟಕದ ಹೈಕೋರ್ಟ್ ಮೆಟ್ಟಿಲೇರಿರುವ ಘಟನೆ ನಡೆದಿದೆ.

ತಮ್ಮ ವಿರುದ್ಧ ಆನ್‌ಲೈನ್‌ನಲ್ಲಿ ಪ್ರಕಟವಾಗಿರುವ ಮಾನಹಾನಿಕರ ಬರಹಗಳನ್ನು ತೆರವುಗೊಳಿಸುವಂತೆ ನಿರ್ದೇಶಿಸಬೇಕೆಂದು ಕೋರಿ ಶ್ರೀಲಂಕಾ ಸುಪ್ರೀಂ ಕೋರ್ಟ್ ಜಡ್ಜ್ ನವಾಜ್ ಕರ್ನಾಟಕ ಹೈಕೋರ್ಟ್ ಮೊರೆ ಹೋಗಿದ್ದಾರೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಈ ಸಂಬಂಧ ಅವರು ಹೈಕೋರ್ಟ್‌ಗೆ ರಿಟ್ ಅರ್ಜಿ ಸಲ್ಲಿಸಿದ್ದು, ಅರ್ಜಿಯ ವಿಚಾರಣೆ ನಡೆಸಿದ ನ್ಯಾ. ಸಚಿನ್ ಶಂಕರ್ ಮಗದುಮ್ ಅವರಿದ್ದ ಪೀಠ ಕೇಂದ್ರ ಸರ್ಕಾರದ ಮಾಹಿತಿ ತಂತ್ರಜ್ಞಾನ ಇಲಾಖೆ, ಗೂಗಲ್ ಇಂಡಿಯಾ, ಗೂಗಲ್ ಇಂಕ್, ಕೊಲಂಬೋ ಟೆಲಿಗ್ರಾಫ್ ಹಾಗೂ ಲಂಕಾ ಇ-ನ್ಯೂಸ್‌ಗೆ ನೋಟಿಸ್ ಜಾರಿ ಮಾಡಿದೆ.

2015 ಮತ್ತು 2020ರಲ್ಲಿ ತಮ್ಮ ವಿರುದ್ಧ ಸುಳ್ಳು ಹಾಗೂ ಆಧಾರರಹಿತ ಮಾನಹಾನಿ ಸುದ್ದಿಗಳನ್ನು ಪ್ರಕಟಿಸಲಾಗಿದೆ ಎಂದು ನವಾಜ್ ಆರೋಪಿಸಿದ್ದಾರೆ. ಶ್ರೀಲಂಕಾ ಸುಪ್ರೀಂ ಕೋರ್ಟ್ ನ್ಯಾಯಮೂರ್ತಿಯಾಗಿರುವ ಕಾರಣ ಅಲ್ಲಿನ ನ್ಯಾಯಾಲಯಕ್ಕೆ ಅರ್ಜಿ ಸಲ್ಲಿಸಿದರೆ ಹಿತಾಸಕ್ತಿ ಸಂಘರ್ಷದ ಪ್ರಶ್ನೆ ಉದ್ಭವಿಸಬಹುದು ಎಂದು ಅವರು ತಿಳಿಸಿದ್ದಾರೆ. ತನ್ನ ಅಹವಾಲಿಗೆ ತಾನೇ ತೀರ್ಪು ನೀಡಬಾರದೆಂಬ ತತ್ವದ ಹಿನ್ನೆಲೆಯಲ್ಲಿ ಭಾರತದಲ್ಲಿ ಪ್ರಕರಣ ದಾಖಲಿಸಿರುವುದಾಗಿ ಅರ್ಜಿಯಲ್ಲಿ ವಿವರಿಸಲಾಗಿದೆ.

ಇನ್ನು ಆನ್‌ಲೈನ್ ಸುದ್ದಿ ತಾಣಗಳಲ್ಲಿ ತಮ್ಮ ವಿರುದ್ಧ ದುರುದ್ದೇಶಪೂರಿತವಾಗಿ ಸುದ್ದಿಗಳನ್ನು ಹಂಚಲಾಗಿದೆ ಎಂದು ಹೇಳಿರುವ ಅವರು, ಶ್ರೀಲಂಕಾ ಕೋರ್ಟ್ ಆಫ್ ಅಪೀಲ್‌ನ ಮುಖ್ಯಸ್ಥರಾಗಿದ್ದಾಗ ನೀಡಿದ ಕಾನೂನು ಅಭಿಪ್ರಾಯವನ್ನು ತಪ್ಪಾಗಿ ಉಲ್ಲೇಖಿಸಿ ಮಾನಹಾನಿ ಮಾಡಲಾಗಿದೆ ಎಂದು ಆರೋಪಿಸಿದ್ದಾರೆ. ಭಾರತದ ಸಂವಿಧಾನವು ಘನತೆಯಿಂದ ಬದುಕುವ ಹಕ್ಕನ್ನು ವಿದೇಶೀಯರಿಗೂ ವಿಸ್ತರಿಸಿರುವುದರಿಂದ ಈ ಅರ್ಜಿಯನ್ನು ಪರಿಗಣಿಸಬೇಕು ಎಂದು ಮನವಿ ಮಾಡಿದ್ದಾರೆ.

For Latest News Updates, Join Our Whatsapp Community🚩
RELATED ARTICLES

LEAVE A REPLY

Please enter your comment!
Please enter your name here

Most Popular