ರಾಯಚೂರು : ರಾಜನಹಳ್ಳಿ ವಾಲ್ಮೀಕಿ ಗುರುಪೀಠದ ಶ್ರೀ ಪ್ರಸನ್ನಾನಂದಪುರಿ ಸ್ವಾಮೀಜಿ ಆರೋಗ್ಯದಲ್ಲಿ ಚೇತರಿಕೆ ಕಂಡು ಬಂದಿದ್ದು, ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದಾರೆ.
ರಾಯಚೂರಿನಲ್ಲಿ ಭಾಗವಹಿಸಿದ್ದ ವೇಳೆಯಲ್ಲಿ ರಾಜನಹಳ್ಳಿ ಮಹರ್ಷಿ ವಾಲ್ಮೀಕಿ ಗುರುಪೀಠದ ಪ್ರಸನ್ನಾನಂದಪುರಿ ಸ್ವಾಮೀಜಿಗೆ ಲಘು ಹೃದಯಾಘಾತವಾಗಿತ್ತು. ಸಮುದಾಯದ ಕಾರ್ಯಕ್ರಮ ಹಿನ್ನೆಲೆಯಲ್ಲಿ ವಾಸ್ತವ್ಯ ಹೂಡಿದ್ದ ವೇಳೆ ಲಘು ಹೃದಯಾಘಾತವಾಗಿದೆ. ಕೂಡಲೇ ರಾಯಚೂರಿನ ಖಾಸಗಿ ಆಸ್ಪತ್ರೆಗೆ ಸ್ವಾಮೀಜಿ ದಾಖಲಿಸಲಾಗಿತ್ತು.
ರಾಯಚೂರು ಜಿಲ್ಲೆಯ ಲಿಂಗಸಗೂರು ತಾಲೂಕಿನ ಹಟ್ಟಿ ಪಟ್ಟಣದಲ್ಲಿ ಸಮುದಾಯದ ಕಾರ್ಯಕ್ರಮವೊಂದರಲ್ಲಿ ಭಾಗವಹಿಸಲು ಆಗಮಿಸಿದ್ದ ವೇಳೆ ಸ್ವಾಮೀಜಿಯವರಿಗೆ ಏಕಾಏಕಿ ಎದೆನೋವು ಕಾಣಿಸಿಕೊಂಡಿತ್ತು. ಫೆಬ್ರವರಿ 18, 2026ರ ಬುಧವಾರ ರಾತ್ರಿ ಅವರಿಗೆ ಲಘು ಹೃದಯಾಘಾತ ಸಂಭವಿಸಿದ ಕೂಡಲೇ ರಾಯಚೂರಿನ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತು.
ವೈದ್ಯರು ಶ್ರೀಗಳಿಗೆ ಕೆಲವು ದಿನಗಳ ಕಾಲ ಸಂಪೂರ್ಣ ವಿಶ್ರಾಂತಿ ಪಡೆಯುವಂತೆ ಮತ್ತು ನಿಯಮಿತವಾಗಿ ಔಷಧೋಪಚಾರಗಳನ್ನು ಮುಂದುವರಿಸುವಂತೆ ಸೂಚಿಸಿದ್ದಾರೆ.

