ದರ್ಗಾದಲ್ಲಿ ದತ್ತಜಯಂತಿ ಆಚರಣೆಗೆ ಶ್ರೀರಾಮ ಸೇನೆ ಸಿದ್ದತೆ : ಜಿಲ್ಲಾಡಳಿತದಿಂದ ನಿಷೇಧಾಜ್ಞೆ ಜಾರಿ

ಚಿಕ್ಕಮಗಳೂರು :  ಡಿ.26ರಂದು ಚಿಕ್ಕಮಗಳೂರು ತಾಲೂಕಿನ ನಾಗೇನಹಳ್ಳಿ ದರ್ಗಾದಲ್ಲಿ ದತ್ತ ಜಯಂತಿ ಆಚರಣೆಗೆ ಶ್ರೀರಾಮ ಸೇನೆ ಸಿದ್ಧತೆ ಮಾಡಿಕೊಂಡಿದೆ .   ದರ್ಗಾದಲ್ಲಿ ದತ್ತಜಯಂತಿ ಆಚರಣೆಗೆ ಶ್ರೀರಾಮ ಸೇನೆ ಸಿದ್ದತೆ ನಡೆಸಿದ್ದು, ಜಿಲ್ಲಾಡಳಿತ ನಿಷೇಧಾಜ್ಞೆ ಜಾರಿಗೊಳಿಸಿ ಆದೇಶ ಹೊರಡಿಸಿದೆ.

ಜಿಲ್ಲಾಡಳಿತ ದರ್ಗಾ ಸುತ್ತಮುತ್ತ ನಿಷೇಧಾಜ್ಞೆ ಹೇರಿದ್ದು, ಪೊಲೀಸ್ ಇಲಾಖೆಯು ಪ್ರಮೋದ್ ಮುತಾಲಿಕ್ ಹಾಗೂ ಗಂಗಾಧರ್ ಕುಲಕರ್ಣಿ ಅವರಿಗೆ ಜಿಲ್ಲೆಗೆ ಬರಲು ನಿರ್ಬಂಧ ವಿಧಿಸಿದೆ. ದರ್ಗಾ ಇರುವ ನಾಗೇನಹಳ್ಳಿ ಗ್ರಾಮದ ಸರ್ವೇ ನಂಬರ್ 57ರ 200 ಮೀಟರ್ ಸುತ್ತಮುತ್ತ 4 ದಿನಗಳ ಕಾಲ ಜಿಲ್ಲಾಡಳಿತ ನಿಷೇಧಾಜ್ಞೆ ಹೇರಿದೆ.

ಸ್ಥಳದಲ್ಲಿ ಯಾವುದೇ ಅಹಿತಕರ ಘಟನೆಗಳು ನಡೆಯದಂತೆ 4,000 ಪೊಲೀಸರನ್ನು ನಿಯೋಜಿಸಲಾಗಿದೆ. ಚಿಕ್ಕಮಗಳೂರು ನಗರದ ಪ್ರಮುಖ ರಸ್ತೆಯಲ್ಲಿ ಇಂದು ಸುಮಾರು 30 ಸಾವಿರಕ್ಕೂ ಅಧಿಕ ಭಕ್ತರು ಬೃಹತ್ ಶೋಭಾಯಾತ್ರೆ ನಡೆಸಲಿದ್ದಾರೆ.

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read