
ಜಿಲ್ಲಾಡಳಿತ ದರ್ಗಾ ಸುತ್ತಮುತ್ತ ನಿಷೇಧಾಜ್ಞೆ ಹೇರಿದ್ದು, ಪೊಲೀಸ್ ಇಲಾಖೆಯು ಪ್ರಮೋದ್ ಮುತಾಲಿಕ್ ಹಾಗೂ ಗಂಗಾಧರ್ ಕುಲಕರ್ಣಿ ಅವರಿಗೆ ಜಿಲ್ಲೆಗೆ ಬರಲು ನಿರ್ಬಂಧ ವಿಧಿಸಿದೆ. ದರ್ಗಾ ಇರುವ ನಾಗೇನಹಳ್ಳಿ ಗ್ರಾಮದ ಸರ್ವೇ ನಂಬರ್ 57ರ 200 ಮೀಟರ್ ಸುತ್ತಮುತ್ತ 4 ದಿನಗಳ ಕಾಲ ಜಿಲ್ಲಾಡಳಿತ ನಿಷೇಧಾಜ್ಞೆ ಹೇರಿದೆ.
ಸ್ಥಳದಲ್ಲಿ ಯಾವುದೇ ಅಹಿತಕರ ಘಟನೆಗಳು ನಡೆಯದಂತೆ 4,000 ಪೊಲೀಸರನ್ನು ನಿಯೋಜಿಸಲಾಗಿದೆ. ಚಿಕ್ಕಮಗಳೂರು ನಗರದ ಪ್ರಮುಖ ರಸ್ತೆಯಲ್ಲಿ ಇಂದು ಸುಮಾರು 30 ಸಾವಿರಕ್ಕೂ ಅಧಿಕ ಭಕ್ತರು ಬೃಹತ್ ಶೋಭಾಯಾತ್ರೆ ನಡೆಸಲಿದ್ದಾರೆ.

