HomeKarnatakaಬಿಟ್ ಕಾಯಿನ್ ಹಗರಣ: ಪೊಲೀಸ್ ಅಧಿಕಾರಿ ಶ್ರೀಧರ್ ಗೆ ನಿರೀಕ್ಷಣಾ ಜಾಮೀನು

ಬಿಟ್ ಕಾಯಿನ್ ಹಗರಣ: ಪೊಲೀಸ್ ಅಧಿಕಾರಿ ಶ್ರೀಧರ್ ಗೆ ನಿರೀಕ್ಷಣಾ ಜಾಮೀನು

ಬೆಂಗಳೂರು: ಬಹುಕೋಟಿ ಮೊತ್ತದ ಬಿಟ್ ಕಾಯಿನ್ ಹಗರಣ ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸ್ ಅಧಿಕಾರಿ ಶ್ರೀಧರ ಪೂಜಾರ್ ಅವರಿಗೆ ಹೈಕೋರ್ಟ್ ಏಕ ಸದಸ್ಯ ಪೀಠದಿಂದ ನಿರೀಕ್ಷಣಾ ಜಾಮೀನು ನೀಡಲಾಗಿದೆ.

ಬಿಟ್ ಕಾಯಿನ್ ಹಗರಣ ಪ್ರಕರಣದಲ್ಲಿ ಪೊಲೀಸ್ ಅಧಿಕಾರಿ ಶ್ರೀಧರ್ ಪೂಜಾರ್ ವಿರುದ್ಧ ಆರೋಪ ಕೇಳಿ ಬಂದಿತ್ತು. ಎಸ್ಐಟಿ ಫೆಬ್ರವರಿ 17ರಂದು ಕೇಸ್ ದಾಖಲಿಸಿ ಬಂಧಿಸಲು ಮುಂದಾಗಿದ್ದ ವೇಳೆ ಅಧಿಕಾರಿಗಳ ಮೇಲೆ ಕಾರ್ ಹತ್ತಿಸಲು ಯತ್ನಿಸಿ ಶ್ರೀಧರ್ ಪರಾರಿಯಾಗಿದ್ದರು. ನಂತರ ಅವರ ವಿರುದ್ಧ ವಿಧಾನಸೌಧ ಪೊಲೀಸರು ಸರ್ಕಾರಿ ಕರ್ತವ್ಯಕ್ಕೆ ಅಡ್ಡಿ ಪ್ರಕರಣ ದಾಖಲಿಸಿಕೊಂಡಿದ್ದರು.

ಶ್ರೀಧರ್ ಪೂಜಾರ್ ತೆರೆ ಮರೆಯಲ್ಲೇ ನಿರೀಕ್ಷಣಾ ಜಾಮೀನಿಗೆ ಅರ್ಜಿ ಸಲ್ಲಿಸಿದ್ದರು. ವಿಚಾರಣೆಗೆ ಸಹಕರಿಸದೆ ತಲೆಮರೆಸಿಕೊಂಡಿದ್ದರಿಂದ ವಿಚಾರಣಾ ನ್ಯಾಯಾಲಯದಿಂದ ಘೋಷಿತ ಆರೋಪಿ ಎಂದು ವಾರೆಂಟ್ ಜಾರಿ ಮಾಡಲಾಗಿತ್ತು. ವಾರೆಂಟ್ ಪ್ರಶ್ನಿಸಿ ಶ್ರೀಧರ್ ಪೂಜಾರ್ ಹೈಕೋರ್ಟ್ಗೆ ಅರ್ಜಿ ಸಲ್ಲಿಸಿದ್ದರು.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಶ್ರೀಧರ್ ಪೂಜಾ ಅವರ ಪರ ಹಿರಿಯ ವಕೀಲ ಅರುಣ್ ಶ್ಯಾಮ್ ವಾದ ಮಂಡಿಸಿ, ಪೊಲೀಸರು ತಮ್ಮ ಪ್ರತಿಷ್ಠೆಗಾಗಿ ಕೇಸು ದಾಖಲಿಸಿದ್ದಾರೆ. ಒಂದೇ ಕೇಸ್ ಗೆ ಎರಡೆರಡು ಬಾರಿ ಎಫ್ಐಆರ್ ಮಾಡಿ ತನಿಖೆ ನಡೆಸಿದ್ದಾರೆ ಎಂದು ವಾದ ಮಂಡಿಸಿದ್ದಾರೆ. ಪೊಲೀಸರ ಕ್ರಮಕ್ಕೆ ನ್ಯಾಯಮೂರ್ತಿ ಎಂ.ಜಿ. ಉಮಾ ಅಸಮಾಧಾನ ವ್ಯಕ್ತಪಡಿಸಿದ್ದು, ಇಷ್ಟು ವರ್ಷವಾದರೂ ತನಿಖೆಯಲ್ಲಿ ಪ್ರಗತಿ ಏಕಿಲ್ಲ? ವಾಟ್ಸಾಪ್ ಚಾಟ್ ಆಧಾರದಲ್ಲಿ ಕ್ರಮ ಹೇಗೆ ಸಾಧ್ಯ? ಹಾಗಿದ್ದರೆ ಆಗಿನ ಆಯುಕ್ತರು, ಜಂಟಿ ಆಯುಕ್ತರು ಇತರರ ಮೇಲೆ ಯಾಕೆ ಕೇಸ್ ದಾಖಲಿಸಿಲ್ಲ ಎಂದು ಪೊಲೀಸರಿಗೆ ಹೈಕೋರ್ಟ್ ಏಕ ಸದಸ್ಯ ಪೀಠ ತರಾಟೆಗೆ ತೆಗೆದುಕೊಂಡಿದೆ.

For Latest News Updates, Join Our Whatsapp Community🚩
niranjan
niranjan
Niranjan working in media filed from 24 years. He worked in Hubballi Udayavani and local newspapers in Shivamogga. ನಿರಂಜನ ಮೂರ್ತಿ ಎಚ್.ಸಿ. 24 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿದ್ದಾರೆ. ಎಂಎ ಕನ್ನಡ, ಪಿಜಿ ಡಿಪ್ಲೊಮಾ ಇನ್ ಜರ್ನಲಿಸಂ ವ್ಯಾಸಂಗ ಮಾಡಿದ್ದಾರೆ. ಶಿವಮೊಗ್ಗದ ಎಚ್ಚರಿಕೆ, ನಮ್ಮನಾಡು, ಜೈ ಕರುನಾಡು, ನುಡಿಗಿಡ, ಕ್ರಾಂತಿ ಭಗತ್ ಸ್ಥಳೀಯ ಪತ್ರಿಕೆಗಳಲ್ಲಿ ವರದಿಗಾರನಾಗಿ, ಹುಬ್ಬಳ್ಳಿಯ ಉದಯವಾಣಿಯಲ್ಲಿ ಉಪ ಸಂಪಾದಕರಾಗಿ ಕಾರ್ಯ ನಿರ್ವಹಣೆ ಮಾಡಿದ್ದಾರೆ.
RELATED ARTICLES

Most Popular