HomeEntertainmentಚಿತ್ರೀಕರಣ ವೇಳೆ ನಟ ಶ್ರೀಮುರಳಿ ಕಾಲಿಗೆ ಪೆಟ್ಟು, ಆಸ್ಪತ್ರೆಗೆ ದಾಖಲು

ಚಿತ್ರೀಕರಣ ವೇಳೆ ನಟ ಶ್ರೀಮುರಳಿ ಕಾಲಿಗೆ ಪೆಟ್ಟು, ಆಸ್ಪತ್ರೆಗೆ ದಾಖಲು

ಬೆಂಗಳೂರು: ಚಿತ್ರೀಕರಣ ವೇಳೆ ನಟ ಶ್ರೀಮುರುಳಿ ಕಾಲಿಗೆ ಪೆಟ್ಟಾಗಿದೆ. ಮೈಸೂರಿನಲ್ಲಿ ಡಾ. ಸೂರಿ ನಿರ್ದೇಶನದ ‘ಭಘೀರ’ ಚಿತ್ರೀಕರಣ ನಡೆಯುತ್ತಿತ್ತು. ಶನಿವಾರ ಸಾಹಸ ದೃಶ್ಯದ ಚಿತ್ರೀಕರಣ ಮಾಡುವಾಗ ಶ್ರೀಮುರುಳಿ ಅವರ ಎಡಗಾಲಿಗೆ ಪೆಟ್ಟಾಗಿದೆ. ಕೂಡಲೇ ಅವರನ್ನು ಮಣಿಪಾಲ್ ಆಸ್ಪತ್ರೆಗೆ ದಾಖಲಿಸಿದ್ದು, ಒಂದು ವಾರ ವಿಶ್ರಾಂತಿಗೆ ವೈದ್ಯರು ಸಲಹೆ ನೀಡಿದ್ದಾರೆ.

ಯಶ್ ನಟಿಸಿದ್ದ ‘ಲಕ್ಕಿ’, ಸತೀಶ್ ನೀನಾಸಂ ನಟಿಸಿದ್ದ ‘ಕ್ವಾಟ್ಲೆ ಸತೀಶ’ ಚಿತ್ರಗಳನ್ನು ನಿರ್ದೇಶಿಸಿದ್ದ ಡಾ. ಸೂರಿ 10 ವರ್ಷಗಳ ಬಳಿಕ ಮತ್ತೆ ನಿರ್ದೇಶನಕ್ಕಿಳಿದಿದ್ದಾರೆ. ಹೊಂಬಾಳೆ ಫಿಲಂಸ್ ಬ್ಯಾನರ್ ನಲ್ಲಿ ಚಿತ್ರ ನಿರ್ಮಾಣವಾಗುತ್ತಿದೆ. ಚಿತ್ರದ ಸಾಹಸ ದೃಶ್ಯ ಚಿತ್ರೀಕರಣ ವೇಳೆ ಮುರಳಿ ಅವರ ಎಡಗಾಲಿಗೆ ಪೆಟ್ಟು ಬಿದ್ದಿದೆ.

2019ರಲ್ಲಿ ‘ಮದಗಜ’ ಚಿತ್ರದ ಶೂಟಿಂಗ್ ವೇಳೆ ಅವರ ಎಡ ಮೊಣಕಾಲಿಗೆ ಪೆಟ್ಟಾಗಿತ್ತು. 2023ರ ಜನವರಿಯಲ್ಲಿ ‘ಭಘೀರ’ ಚಿತ್ರೀಕರಣ ವೇಳೆ ಪೆಟ್ಟು ಮಾಡಿಕೊಂಡಿದ್ದರು. ಈಗ ಮೂರನೇ ಬಾರಿಗೆ ಅವರ ಕಾಲಿಗೆ ಪೆಟ್ಟು ಬಿದ್ದಿದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

For Latest News Updates, Join Our Whatsapp Community🚩
niranjan
niranjan
Niranjan working in media filed from 24 years. He worked in Hubballi Udayavani and local newspapers in Shivamogga. ನಿರಂಜನ ಮೂರ್ತಿ ಎಚ್.ಸಿ. 24 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿದ್ದಾರೆ. ಎಂಎ ಕನ್ನಡ, ಪಿಜಿ ಡಿಪ್ಲೊಮಾ ಇನ್ ಜರ್ನಲಿಸಂ ವ್ಯಾಸಂಗ ಮಾಡಿದ್ದಾರೆ. ಶಿವಮೊಗ್ಗದ ಎಚ್ಚರಿಕೆ, ನಮ್ಮನಾಡು, ಜೈ ಕರುನಾಡು, ನುಡಿಗಿಡ, ಕ್ರಾಂತಿ ಭಗತ್ ಸ್ಥಳೀಯ ಪತ್ರಿಕೆಗಳಲ್ಲಿ ವರದಿಗಾರನಾಗಿ, ಹುಬ್ಬಳ್ಳಿಯ ಉದಯವಾಣಿಯಲ್ಲಿ ಉಪ ಸಂಪಾದಕರಾಗಿ ಕಾರ್ಯ ನಿರ್ವಹಣೆ ಮಾಡಿದ್ದಾರೆ.
RELATED ARTICLES

Most Popular