ಅಕ್ಟೋಬರ್ 31ಕ್ಕೆ ತೆರೆ ಕಾಣಲಿದೆ ಶ್ರೀಮುರಳಿ ನಟನೆಯ ‘ಬಘೀರ’

ಡಾ. ಸೂರಿ ನಿರ್ದೇಶನದ ಶ್ರೀ ಮುರಳಿ ಅಭಿನಯದ ಬಹು ನಿರೀಕ್ಷಿತ ‘ಬಘೀರ’ ಚಿತ್ರ ಈಗಾಗಲೇ ತನ್ನ ಟೀಸರ್ ಮೂಲಕವೇ ಭರ್ಜರಿ ಸೌಂಡ್ ಮಾಡಿದ್ದು, ಬಿಡುಗಡೆಗೆ ಸಜ್ಜಾಗಿದೆ. ‘ಬಘೀರ’ ಚಿತ್ರ ತಂಡ ಸಾಮಾಜಿಕ ಜಾಲತಾಣದಲ್ಲಿ ಬಿಡುಗಡೆ ದಿನಾಂಕವನ್ನು ಘೋಷಣೆ ಮಾಡಿದ್ದು, ರೋರಿಂಗ್ ಸ್ಟಾರ್ ಶ್ರೀ ಮುರಳಿ ಅಭಿಮಾನಿಗಳು ಸಂಭ್ರಮಿಸಿದ್ದಾರೆ. ಮುಂದಿನ ತಿಂಗಳು ಅಕ್ಟೋಬರ್ 31 ರಂದು ಈ ಸಿನಿಮಾ ರಾಜ್ಯಾದ್ಯಂತ ತೆರೆ ಮೇಲೆ ಬರಲಿದೆ.

ಈ ಚಿತ್ರವನ್ನು ಹೊಂಬಾಳೆ ಫಿಲಂಸ್ ಬ್ಯಾನರ್ ನಲ್ಲಿ ವಿಜಯ್ ಕಿರಗಂದೂರು ನಿರ್ಮಾಣ ಮಾಡಿದ್ದು, ಶ್ರೀ ಮುರಳಿ ಸೇರಿದಂತೆ  ರುಕ್ಮಿಣಿ ವಸಂತ್, ಪ್ರಕಾಶ್ ರಾಜ್. ರಂಗಾಯಣ ರಘು. ಅಚ್ಯುತ್ ಕುಮಾರ್. ಬಣ್ಣ ಹಚ್ಚಿದ್ದಾರೆ. ಬಿ. ಅಜನೇಶ್ ಲೋಕನಾಥ್ ಸಂಗೀತ ಸಂಯೋಜನೆ ನೀಡಿದ್ದು, ಪ್ರಣವ್ ಶ್ರೀ ಪ್ರಸಾದ್ ಸಂಕಲನ, ಚೇತನ್ ಡಿಸೋಜಾ ಸಾಹಸ ನಿರ್ದೇಶನ, ಆದರ್ಶ, ಸ್ವರೂಪ್, ಹಾಗೂ ಸಮಂತ್ ಅವರ ಛಾಯಾಗ್ರಾಹಣವಿದೆ.

https://twitter.com/hombalefilms/status/1833849242655363416

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read