BREAKING: ಜಮ್ಮು ಕಾಶ್ಮೀರದಲ್ಲಿ ಘೋರ ದುರಂತ: 160 ಅಡಿ ಆಳದ ಕಂದಕಕ್ಕೆ ಸೇನಾ ವಾಹನ ಬಿದ್ದು 5 ಯೋಧರು ಹುತಾತ್ಮ

ಶ್ರೀನಗರ: ಜಮ್ಮು ಮತ್ತು ಕಾಶ್ಮೀರದ ಪೂಂಚ್ ನಲ್ಲಿ ಸೇನಾ ವಾಹನ ಕಂದಕಕ್ಕೆ ಉರುಳಿ ಬಿದ್ದು 5 ಯೋಧರು ಹುತಾತ್ಮರಾಗಿದ್ದಾರೆ.

160 ಅಡಿಯ ಕಂದಕಕ್ಕೆ ಸೇನಾ ವಾಹನ ಬಿದ್ದು ದುರಂತ ಸಂಭವಿಸಿದೆ. ಪೂಂಚ್ ಜಿಲ್ಲೆಯ ಮೆಂಧರ್ ಪ್ರದೇಶ ಬಲ್ನೋಯಿ ಮೂಲಕ ಸೇನಾ ವಾಹನ ಸಾಗುತ್ತಿತ್ತು. ಚಾಲಕನ ನಿಯಂತ್ರಣ ತಪ್ಪಿದ ವಾಹನ ಕಂದಕಕ್ಕೆ ಉರುಳಿ ಬಿದ್ದಿದೆ.

ಅಪಘಾತದಲ್ಲಿ ಐವರು ಯೋಧರು ಹುತಾತ್ಮರಾಗಿದ್ದು, 5 ಯೋಧರು ಗಾಯಗೊಂಡಿರುವ ಮಾಹಿತಿ ಗೊತ್ತಾಗಿದೆ.

ರಕ್ಷಣಾ ಕಾರ್ಯಾಚರಣೆಗಳು ನಡೆಯುತ್ತಿವೆ. ಗಾಯಗೊಂಡ ಸಿಬ್ಬಂದಿಯನ್ನು ವೈದ್ಯಕೀಯ ಆರೈಕೆಗೆ ದಾಖಲಿಸಲಾಗಿದೆ.

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read