HomeKarnatakaBREAKING : ಶೃಂಗೇರಿ ವಿಧಾನಸಭಾ ಕ್ಷೇತ್ರದ ಚುನಾವಣೆ : ಮರು ಎಣಿಕೆಯಲ್ಲೂ ಕಾಂಗ್ರೆಸ್‌ ಅಭ್ಯರ್ಥಿ ಟಿ.ಡಿ....

BREAKING : ಶೃಂಗೇರಿ ವಿಧಾನಸಭಾ ಕ್ಷೇತ್ರದ ಚುನಾವಣೆ : ಮರು ಎಣಿಕೆಯಲ್ಲೂ ಕಾಂಗ್ರೆಸ್‌ ಅಭ್ಯರ್ಥಿ ಟಿ.ಡಿ. ರಾಜೇಗೌಡಗೆ ಭರ್ಜರಿ ಗೆಲುವು.!

ಚಿಕ್ಕಮಗಳೂರು: ತೀವ್ರ ಕುತೂಹಲ ಕೆರಳಿಸಿದ್ದ ಶೃಂಗೇರಿ ವಿಧಾನಸಭಾ ಕ್ಷೇತ್ರದ ಅಂಚೆ ಮತಗಳ (Postal Ballots) ಮರು ಎಣಿಕೆ ಪ್ರಕ್ರಿಯೆ ಮುಕ್ತಾಯಗೊಂಡಿದ್ದು, ಕಾಂಗ್ರೆಸ್ ಅಭ್ಯರ್ಥಿ ಟಿ.ಡಿ. ರಾಜೇಗೌಡ ಅವರೇ ಮತ್ತೆ ಗೆಲುವು ಸಾಧಿಸಿದ್ದಾರೆ. ವಿಶೇಷವೆಂದರೆ ಮರುಮತ ಎಣಿಕೆಯಲ್ಲಿ ರಾಜೇಗೌಡ ಅವರ ಗೆಲುವಿನ ಅಂತರ ಮತ್ತಷ್ಟು ಹೆಚ್ಚಾಗಿದೆ.

೨೦೩ ಮತಗಳ ಅಂತರದಿಂದ ಗೆಲುವು: ಚಿಕ್ಕಮಗಳೂರಿನ ಐಡಿಎಸ್‌ಜಿ (IDSG) ಕಾಲೇಜಿನಲ್ಲಿ ಬಿಗಿ ಪೊಲೀಸ್ ಭದ್ರತೆಯಲ್ಲಿ ಅಂಚೆ ಮತಗಳ ಮರು ಎಣಿಕೆ ಕಾರ್ಯ ನಡೆಯಿತು. ಈ ಹಿಂದೆ ನಡೆದಿದ್ದ ಸಾಮಾನ್ಯ ಮತ ಎಣಿಕೆಯಲ್ಲಿ ಟಿ.ಡಿ. ರಾಜೇಗೌಡ ಅವರು 201 ಮತಗಳಿಂದ ಗೆಲುವು ಸಾಧಿಸಿದ್ದರು. ಆದರೆ ಇಂದು ನಡೆದ ಮರು ಮತ ಎಣಿಕೆ ಬಳಿಕ ಅವರ ಲೀಡ್ 2 ಮತಗಳಷ್ಟು ಹೆಚ್ಚಾಗಿದ್ದು, ಒಟ್ಟು 203 ಮತಗಳ ಅಂತರದಿಂದ ಗೆಲುವು ದಾಖಲಿಸಿದ್ದಾರೆ.

ಮರು ಎಣಿಕೆ ವೇಳೆ ನಡೆದಿದ್ದೇನು?

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ
  • ಅಧಿಕಾರಿಗಳು ಮೊದಲು 20 ಟ್ರಂಕ್‌ಗಳಲ್ಲಿ ಭದ್ರಗೊಳಿಸಿದ್ದ ಒಟ್ಟು 1,822 ಅಂಚೆ ಮತಗಳನ್ನು ಬಂಡಲ್‌ಗಳಾಗಿ ಬೇರ್ಪಡಿಸಿದರು.
  • ಇವುಗಳಲ್ಲಿ ತಿರಸ್ಕೃತಗೊಂಡಿದ್ದ 279 ಮತಗಳನ್ನು ಪ್ರತ್ಯೇಕವಾಗಿ ವಿಂಗಡಿಸಿ, ಉಳಿದ 1,540 ಮತಗಳನ್ನು ತಲಾ 25 ಮತಪತ್ರಗಳಂತೆ ಬಂಡಲ್ ಮಾಡಲಾಯಿತು.
  • ಮತ ಎಣಿಕೆ ಆರಂಭಕ್ಕೂ ಮುನ್ನ ಕೆಲವು ಟ್ರಂಕ್‌ಗಳು ಜಖಂಗೊಂಡಿರುವುದು ಮತ್ತು ಸೀಲ್ ಇಲ್ಲದಿರುವುದು ಕಂಡುಬಂದ ಹಿನ್ನೆಲೆಯಲ್ಲಿ ಕೆಲಕಾಲ ಹೈಡ್ರಾಮಾ ಮತ್ತು ಗೊಂದಲ ಉಂಟಾಗಿತ್ತು.
  • ಆದರೆ, ಅಂಚೆ ಮತಗಳ ಟ್ರಂಕ್ ಸೇಫ್ ಆಗಿವೆ ಮತ್ತು ಯಾವುದೇ ಗೊಂದಲವಿಲ್ಲ ಎಂದು ಚುನಾವಣಾ ಆಯೋಗ ಸ್ಪಷ್ಟಪಡಿಸಿದ ನಂತರವೇ ಮತ ಎಣಿಕೆಗೆ ಅವಕಾಶ ನೀಡಲಾಯಿತು.

2023ರ ವಿಧಾನಸಭಾ ಚುನಾವಣೆಯಲ್ಲಿ ಶೃಂಗೇರಿ ಕ್ಷೇತ್ರದಿಂದ ಒಟ್ಟು 12 ಜನ ಅಭ್ಯರ್ಥಿಗಳು ಸ್ಪರ್ಧಿಸಿದ್ದರು. ಆಗ ಕಾಂಗ್ರೆಸ್‌ನ ಟಿ.ಡಿ. ರಾಜೇಗೌಡ ಅವರು 201 ಮತಗಳ ಅಂತರದಿಂದ ಗೆಲುವು ಸಾಧಿಸಿದ್ದರು. ಈ ಫಲಿತಾಂಶದ ವಿರುದ್ಧ ಮರು ಎಣಿಕೆಗೆ ಕೋರಲಾಗಿತ್ತು. ಇದೀಗ ನಡೆದ ಮರು ಎಣಿಕೆಯಲ್ಲೂ ಅವರೇ ಜಯಶಾಲಿಯಾಗಿದ್ದಾರೆ

ಮರು ಎಣಿಕೆಗೆ ಆದೇಶಿಸಿದ್ದ ಹೈಕೋರ್ಟ್

ಶೃಂಗೇರಿ ವಿಧಾನಸಭಾ ಚುನಾವಣೆಯ ಪೋಸ್ಟಲ್ ಬ್ಯಾಲೆಟ್ ಮತ ಮರು ಪರಿಶೀಲಿಸಿ ಹೊಸದಾಗಿ ಫಲಿತಾಂಶ ಪ್ರಕಟಿಸುವಂತೆ ಹೈಕೋರ್ಟ್ ಆದೇಶಿಸಿತ್ತು.ಕಳೆದ ವಿಧಾನಸಭೆ ಚುನಾವಣೆಯಲ್ಲಿ ಶೃಂಗೇರಿ ಕ್ಷೇತ್ರದಲ್ಲಿ ಮತದಾನವಾಗಿರುವ ಒಟ್ಟು ಪೋಸ್ಟಲ್ ಬ್ಯಾಲೆಟ್ ನಲ್ಲಿ ತಿರಸ್ಕೃತಗೊಂಡ 279 ಮತಗಳನ್ನು ಮರುಪರಿಶೀಲನೆ ನಡೆಸಿ ಹೊಸದಾಗಿ ಫಲಿತಾಂಶ ಪ್ರಕಟಿಸುವಂತೆ ಕೇಂದ್ರ ಚುನಾವಣಾ ಆಯೋಗಕ್ಕೆ ಹೈಕೋರ್ಟ್ ನಿರ್ದೇಶಿಸಿತ್ತು.

ಶೃಂಗೇರಿ ಕ್ಷೇತ್ರದಿಂದ ಜಯಗಳಿಸಿದ ಶಾಸಕ ಟಿ.ಡಿ. ರಾಜೇಗೌಡ ಅವರ ಆಯ್ಕೆ ಅಸಿಂಧು ಎಂದು ಘೋಷಣೆ ಮಾಡುವಂತೆ ಪರಾಜಿತ ಅಭ್ಯರ್ಥಿ ಡಿ.ಎನ್. ಜೀವರಾಜ್ ಸಲ್ಲಿಸಿದ್ದ ಅರ್ಜಿ ವಿಚಾರಣೆ ನಡೆಸಿದ ನ್ಯಾಯಮೂರ್ತಿ ಆರ್. ನಟರಾಜ್ ಅವರಿದ್ದ ನ್ಯಾಯಪೀಠ ಈ ಆದೇಶ ನೀಡಿದೆ. ಮುಂದಿನ ಎರಡು ವಾರಗಳಲ್ಲಿ ತಿರಸ್ಕೃತ 279 ಪೋಸ್ಟಲ್ ಬ್ಯಾಲೆಟ್ ಮತಗಳ ಮರುಪರಿಶೀಲನೆ ನಡೆಸಬೇಕು. ಈ ಸಂದರ್ಭದಲ್ಲಿ ಚುನಾವಣಾ ಅಧಿಕಾರಿಗಳು ಮಾರ್ಗಸೂಚಿಯನ್ನು ಕಟ್ಟುನಿಟ್ಟಾಗಿ ಅನುಸರಿಸಬೇಕು. ತಿರಸ್ಕೃತ ಮತಗಳ ಮರುಪರಿಶೀಲನೆ ಸಂದರ್ಭದಲ್ಲಿ ಅರ್ಜಿದಾರರು ಮತ್ತು ಪ್ರತಿವಾದಿ ಅವರಿಗೆ ಹಂಚಿಕೆಯಾಗಿರುವ ಮತಗಳಲ್ಲಿ ಯಾವುದೇ ಗಣನೀಯ ಲೋಪ ಕಂಡು ಬಂದಲ್ಲಿ ಎಲ್ಲಾ ಪೋಸ್ಟಲ್ ಬ್ಯಾಲೆಟ್ ಗಳ ಮತಗಳನ್ನು ಮರು ಎಣಿಕೆ ಮಾಡಿ ಹೊಸದಾಗಿ ಫಲಿತಾಂಶ ಪ್ರಕಟಿಸಬೇಕೆಂದು ನಿರ್ದೇಶಿಸಿತ್ತು.

.

For Latest News Updates, Join Our Whatsapp Community🚩
ranjith
ranjith
Ranjith S S has a decade of experience in digital media. covering stories that spark conversations across the internet, Breaking news, viral moments and celebrity updates to everyday news that gets people talking.
RELATED ARTICLES

LEAVE A REPLY

Please enter your comment!
Please enter your name here

Most Popular