HomeLatest NewsBREAKING : ಟಿ.ಡಿ ರಾಜೇಗೌಡಗೆ ಬಿಗ್ ರಿಲೀಫ್ ; ಶೃಂಗೇರಿ ಕ್ಷೇತ್ರದ ಮರು ಎಣಿಕೆ ಫಲಿತಾಂಶಕ್ಕೆ ಸುಪ್ರೀಂಕೋರ್ಟ್ ಬ್ರೇಕ್

BREAKING : ಟಿ.ಡಿ ರಾಜೇಗೌಡಗೆ ಬಿಗ್ ರಿಲೀಫ್ ; ಶೃಂಗೇರಿ ಕ್ಷೇತ್ರದ ಮರು ಎಣಿಕೆ ಫಲಿತಾಂಶಕ್ಕೆ ಸುಪ್ರೀಂಕೋರ್ಟ್ ಬ್ರೇಕ್

ಚಿಕ್ಕಮಗಳೂರು :  ಶೃಂಗೇರಿ ವಿಧಾನಸಭಾ ಕ್ಷೇತ್ರದ ಚುನಾವಣಾ ಫಲಿತಾಂಶದ ಮರು ಎಣಿಕೆಗೆ ಸಂಬಂಧಿಸಿದಂತೆ ಶಾಸಕ ಟಿ.ಡಿ. ರಾಜೇಗೌಡ ಅವರಿಗೆ ಸುಪ್ರೀಂಕೋರ್ಟ್‌ನಿಂದ ದೊಡ್ಡ ಮಟ್ಟದ ಸಮಾಧಾನ ಸಿಕ್ಕಿದೆ.ಮರು ಎಣಿಕೆಗೆ ಆದೇಶಿಸಿದ್ದ ಹೈಕೋರ್ಟ್ ತೀರ್ಪಿನ ಎಲ್ಲಾ ಪ್ರಕ್ರಿಯೆಗಳಿಗೆ ಸುಪ್ರೀಂಕೋರ್ಟ್ ಈಗ ತಡೆಯಾಜ್ಞೆ ನೀಡಿದೆ. ಶಾಸಕ ಸ್ಥಾನಕ್ಕೆ ಎದುರಾಗಿದ್ದ ತಾತ್ಕಾಲಿಕ ಸಂಕಷ್ಟ ದೂರವಾಗಿದೆ. ಹೈಕೋರ್ಟ್ ಆದೇಶವನ್ನು ಪ್ರಶ್ನಿಸಿ ರಾಜೇಗೌಡ ಅವರು ಸಲ್ಲಿಸಿದ್ದ ಮೇಲ್ಮನವಿಯನ್ನು ಪುರಸ್ಕರಿಸಿದ ಸರ್ವೋಚ್ಚ ನ್ಯಾಯಾಲಯ ಈ ಮಹತ್ವದ ಆದೇಶ ಹೊರಡಿಸಿದೆ. ಈ ಸಂಬಂಧ ಸುಪ್ರೀಂಕೋರ್ಟ್ ನಲ್ಲಿ ಮೇ.21 ರಂದು ವಿಚಾರಣೆ ನಡೆಯಲಿದೆ.

ಶೃಂಗೇರಿ ವಿಧಾನಸಭಾ ಕ್ಷೇತ್ರದ ಅಂಚೆ ಮತಗಳ ಎಣಿಕೆ ಮರು ಎಣಿಕೆ ವಿವಾದಕ್ಕೆ ಸಂಬಂಧಿಸಿದಂತೆ ಮಾಜಿ ಶಾಸಕ ಟಿ.ಡಿ. ರಾಜೇಗೌಡ ಸುಪ್ರೀಂ ಕೋರ್ಟ್ ಮೆಟ್ಟಿಲೇರಿದ್ದರು. ಮರು ಎಣಿಕೆಯಲ್ಲಿ ಪರಾಭವಗೊಂಡ ಕಾಂಗ್ರೆಸ್ ನ ಟಿ.ಡಿ. ರಾಜೇಗೌಡ ಸುಪ್ರೀಂ ಕೋರ್ಟ್ ಗೆ ಮೇಲ್ಮನವಿ ಅರ್ಜಿ ಸಲ್ಲಿಸಿದ್ದರು.

ಶೃಂಗೇರಿ ವಿಧಾನಸಭಾ ಕ್ಷೇತ್ರದ ಚುನಾವಣಾ ಫಲಿತಾಂಶಕ್ಕೆ ಸಂಬಂಧಿಸಿದಂತೆ ಸುಪ್ರೀಂಕೋರ್ಟ್ ಮಹತ್ವದ ಆದೇಶ ನೀಡಿದ್ದು, ಇತ್ತೀಚೆಗೆ ನಡೆದಿದ್ದ ಮತ ಮರು ಎಣಿಕೆಯನ್ನು ರದ್ದುಗೊಳಿಸಿದೆ. ಈ ಮೂಲಕ ಕಾಂಗ್ರೆಸ್ ಶಾಸಕ ಟಿ.ಡಿ. ರಾಜೇಗೌಡ ಅವರಿಗೆ ದೊಡ್ಡ ಮಟ್ಟದ ಜಯ ಸಿಕ್ಕಿದ್ದು, ಅವರೇ ಶಾಸಕರಾಗಿ ಮುಂದುವರಿಯಲಿದ್ದಾರೆ.2023ರ ವಿಧಾನಸಭಾ ಚುನಾವಣೆಯಲ್ಲಿ ಟಿ.ಡಿ. ರಾಜೇಗೌಡ ಅವರು ಬಿಜೆಪಿ ಅಭ್ಯರ್ಥಿ ಡಿ.ಎನ್. ಜೀವರಾಜ್ ವಿರುದ್ಧ 201 ಮತಗಳ ಅಂತರದಿಂದ ಜಯಗಳಿಸಿದ್ದರು. ಆದರೆ, ಅಂಚೆ ಮತಗಳ ಎಣಿಕೆಯಲ್ಲಿ ಅಕ್ರಮ ನಡೆದಿದೆ ಎಂದು ಆರೋಪಿಸಿ ಜೀವರಾಜ್ ಹೈಕೋರ್ಟ್ ಮೆಟ್ಟಿಲೇರಿದ್ದರು. ಹೈಕೋರ್ಟ್ ಮರು ಎಣಿಕೆಗೆ ಆದೇಶ ನೀಡಿತ್ತು.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಮರು ಎಣಿಕೆ ಮತ್ತು ಗೊಂದಲ: ಹೈಕೋರ್ಟ್ ಆದೇಶದಂತೆ ಮೇ 2ರಂದು ನಡೆದ ಮರು ಎಣಿಕೆಯಲ್ಲಿ ರಾಜೇಗೌಡ ಅವರ 255 ಮತಗಳನ್ನು ಅಮಾನ್ಯಗೊಳಿಸಲಾಗಿತ್ತು ಮತ್ತು ಡಿ.ಎನ್. ಜೀವರಾಜ್ ಅವರನ್ನು ವಿಜೇತ ಅಭ್ಯರ್ಥಿ ಎಂದು ಘೋಷಿಸುವ ಪ್ರಕ್ರಿಯೆ ನಡೆದಿತ್ತು. ಇದನ್ನು ಪ್ರಶ್ನಿಸಿ ರಾಜೇಗೌಡ ಅವರು ಸುಪ್ರೀಂಕೋರ್ಟ್‌ನಲ್ಲಿ ಮೇಲ್ಮನವಿ ಸಲ್ಲಿಸಿದ್ದರು.

ಸುಪ್ರೀಂಕೋರ್ಟ್ ಆದೇಶ: ನ್ಯಾಯಮೂರ್ತಿಗಳಾದ ಸಂಜಯ್ ಕುಮಾರ್ ಮತ್ತು ಕೆ. ವಿನೋದ್ ಚಂದ್ರನ್ ಅವರಿದ್ದ ಪೀಠವು ಈ ಅರ್ಜಿಯ ವಿಚಾರಣೆ ನಡೆಸಿತು. “ಹೈಕೋರ್ಟ್ ಕೇವಲ 279 ತಿರಸ್ಕೃತ ಮತಗಳ ಪರಿಶೀಲನೆಗೆ ಹೇಳಿತ್ತು, ಆದರೆ ಅಧಿಕಾರಿಗಳು 562 ಮತಗಳನ್ನು ಮರುಪರಿಶೀಲಿಸಿದ್ದಾರೆ” ಎಂಬ ರಾಜೇಗೌಡರ ವಾದವನ್ನು ಆಲಿಸಿದ ನ್ಯಾಯಾಲಯ, ಸದ್ಯ ಯಥಾಸ್ಥಿತಿ (Status Quo) ಕಾಯ್ದುಕೊಳ್ಳುವಂತೆ ಸೂಚಿಸಿದೆ.ಇದರೊಂದಿಗೆ, ಮರು ಎಣಿಕೆ ಫಲಿತಾಂಶ ರದ್ದಾಗಿದ್ದು, ಟಿ.ಡಿ. ರಾಜೇಗೌಡ ಅವರೇ ಶೃಂಗೇರಿಯ ಶಾಸಕರಾಗಿ ಅಧಿಕಾರದಲ್ಲಿ ಮುಂದುವರಿಯಲಿದ್ದಾರೆ. ಇದು ಕ್ಷೇತ್ರದ ಕಾಂಗ್ರೆಸ್ ಕಾರ್ಯಕರ್ತರಲ್ಲಿ ಸಂಭ್ರಮ ತಂದಿದೆ.

ಚಲಾವಣೆಯಾದ 1811 ಅಂಚು ಮತಗಳ ಪೈಕಿ ತಿರಸ್ಕೃತವಾದ 279 ಅಂಚೆ ಮತಗಳನ್ನು ಮರುಪರಿಶೀಲಿಸಿ ನಂತರ ಎಲ್ಲಾ ಮತಗಳನ್ನು ಮರು ಎಣಿಕೆ ಮಾಡಿ ಫಲಿತಾಂಶ ಪ್ರಕಟಿಸಬೇಕು ಎಂದು ನಿರ್ದೇಶಿಸಿದ ಹೈಕೋರ್ಟ್ ನ ಏಪ್ರಿಲ್ 6ರ ಆದೇಶವನ್ನು ಮೇಲ್ಮನವಿಯಲ್ಲಿ ರಾಜೇಗೌಡ ಪ್ರಶ್ನಿಸಿದ್ದರು. ಸುಪ್ರೀಂಕೋರ್ಟ್ ಮುಖ್ಯ ನ್ಯಾಯಮೂರ್ತಿ ಸೂರ್ಯಕಾಂತ್ ನೇತೃತ್ವದ ಪೀಠದ ಎದುರು ವಕೀಲ ದೇವದತ್ ಕಾಮತ್ ವಿಷಯ ಪ್ರಸ್ತಾಪಿಸಿ ಮೇಲ್ಮನವಿಯನ್ನು ಮೇ 11ರಂದು ತುರ್ತಾಗಿ ಪಟ್ಟಿ ಮಾಡುವಂತೆ ಮನವಿ ಮಾಡಿದ್ದರು.

ಅಂಚೆ ಮತ ಎಣಿಕೆಯಲ್ಲಿ ಅನ್ಯಾಯವಾಗಿದೆ ಎಂದು ಬಿಜೆಪಿಯ ಜೀವರಾಜ್ ಹೈಕೋರ್ಟ್ ಗೆ ಅರ್ಜಿ ಸಲ್ಲಿಸಿದ್ದರು. ಎರಡೂವರೆ ವರ್ಷಗಳ ವಿಚಾರಣೆಯ ನಂತರ ಹೈಕೋರ್ಟ್ ಅಂಚೆ ಮತಗಳ ಮರು ಎಣಿಕೆಗೆ ಆದೇಶಿಸಿದ್ದು, ಜಿಲ್ಲಾ ಚುನಾವಣಾ ಅಧಿಕಾರಿಗಳ ನೇತೃತ್ವದಲ್ಲಿ ಅಂಚೆ ಮತಗಳ ಮರು ಎಣಿಕೆ ನಡೆಸಿದ್ದು. ಇದರಲ್ಲಿ ಜೀವರಾಜ್ ಗೆಲುವು ಸಾಧಿಸಿದ್ದರು. ಪ್ರಮಾಣವಚನವನ್ನೂ ಸ್ವೀಕರಿಸಿದ್ದರು. ಇದರ ಬೆನ್ನಲ್ಲೇ ರಾಜೇಗೌಡ ಸುಪ್ರೀಂಕೋರ್ಟ್ ಮೆಟ್ಟಿಲೇರಿದ್ದರು. ತುರ್ತು ವಿಚಾರಣೆಗೆ ಸಿಜೆಐ ಸೂರ್ಯಕಾಂತ್ ನೇತೃತ್ವದ ಪೀಠದ ಮುಂದೆ ಮನವಿ ಮಾಡಲಾಗಿತ್ತು.

For Latest News Updates, Join Our Whatsapp Community🚩
ranjith
ranjith
Ranjith S S has a decade of experience in digital media. covering stories that spark conversations across the internet, Breaking news, viral moments and celebrity updates to everyday news that gets people talking.
RELATED ARTICLES

LEAVE A REPLY

Please enter your comment!
Please enter your name here

Most Popular