HomeKarnatakaಶೃಂಗೇರಿ ಫಲಿತಾಂಶವನ್ನು ನ್ಯಾಯಾಲಯದಲ್ಲಿ ಪ್ರಶ್ನಿಸಲಾಗುವುದು ; ಸಿಎಂ ಸಿದ್ದರಾಮಯ್ಯ

ಶೃಂಗೇರಿ ಫಲಿತಾಂಶವನ್ನು ನ್ಯಾಯಾಲಯದಲ್ಲಿ ಪ್ರಶ್ನಿಸಲಾಗುವುದು ; ಸಿಎಂ ಸಿದ್ದರಾಮಯ್ಯ

ಮೈಸೂರು : ಶೃಂಗೇರಿ ವಿಧಾನಸಭಾ ಕ್ಷೇತ್ರದ ಅಂಚೆ ಮತಗಳ ಮರು ಎಣಿಕೆ ಪ್ರಕ್ರಿಯೆಯಲ್ಲಿ ಬಿಜೆಪಿ ಕ್ರಿಮಿನಲ್ ಸಂಚು ನಡೆಸಿದೆ ಎಂದು ಗಂಭೀರ ಆರೋಪ ಮಾಡಲಾಗಿದ್ದು, ಈ ಅನ್ಯಾಯದ ವಿರುದ್ಧ ನ್ಯಾಯಾಲಯದ ಮೊರೆ ಹೋಗಲಾಗುತ್ತದೆ ಎಂದು ಸಿಎಂ ಸಿದ್ದರಾಮಯ್ಯ ಹೇಳಿದರು.

ಮೈಸೂರು ವಿಮಾನ ನಿಲ್ದಾಣದಲ್ಲಿ ಇಂದು ಮಾಧ್ಯಮದವರೊಂದಿಗೆ ಮಾತನಾಡಿದ ಸಂದರ್ಭದಲ್ಲಿ, ” ಶೃಂಗೇರಿ ಕ್ಷೇತ್ರದ ಅಂಚೆ ಮತಗಳ ಮರು ಎಣಿಕೆಯಲ್ಲಿ ಬಿಜೆಪಿ ಕ್ರಿಮಿನಲ್ ಸಂಚು ನಡೆಸಿದೆ. ರಾಜೇಗೌಡರಿಗೆ ಬಿದ್ದಿದ್ದ 255 ಅರ್ಹವಾಗಿದ್ದ ಮತಗಳನ್ನು ಅನರ್ಹ ಮಾಡಲಾಗಿದೆ. ಮತ ಎಣಿಕೆಯಾಗುವಾಗ ಬಿಜೆಪಿ ಸರ್ಕಾರವಿತ್ತು. ಬಿಜೆಪಿಯವರು ಸಿಬ್ಬಂದಿಯ ಮೂಲಕ ಮತಪತ್ರಗಳನ್ನು ತಿದ್ದಲಾಗಿದ್ದು, ಇದು ಕ್ರಿಮಿನಲ್ ಸಂಚು. ಆದ್ದರಿಂದ ಶೃಂಗೇರಿ ಫಲಿತಾಂಶವನ್ನು ನ್ಯಾಯಾಲಯದಲ್ಲಿ ಪ್ರಶ್ನಿಸಲಾಗುವುದು. ರೈಲ್ವೆ ಇಲಾಖೆಯ ಹುದ್ದೆಗಳಿಗೆ ಕನ್ನಡಿಗರನ್ನು ಕಡೆಗಣಿಸಲಾಗುತ್ತಿದೆ. ಈ ಪರೀಕ್ಷೆಗಳನ್ನು ಕೇಂದ್ರ ಸರ್ಕಾರ ನಡೆಸುತ್ತಿದ್ದು, ಅವರ ಈ ನಡವಳಿಕೆಯು ಕನ್ನಡಿಗರ ಪರ ಅವರ ಧೋರಣೆಯನ್ನು ಬಿಂಬಿಸುತ್ತದೆ ಎಂದರು.

ದಾವಣಗೆರೆ ಮತ್ತು ಬಾಗಲಕೋಟೆ ಉಪಚುನಾವಣೆಯಲ್ಲಿ ಕಾಂಗ್ರೆಸ್ ಗೆಲುವು ರಾಜ್ಯದ ಜನರು ಕಾಂಗ್ರೆಸ್ ಸರ್ಕಾರದ ಯೋಜನೆಗಳನ್ನು ಮೆಚ್ಚಿಕೊಂಡಿರುವುದನ್ನು ಸೂಚಿಸುತ್ತದೆ. ವಿಪಕ್ಷಗಳ ಯಾವುದೇ ತಂತ್ರಗಾರಿಕೆ ನಡೆಯುವುದಿಲ್ಲ. ಅವರು ಕೇವಲ ಕುತಂತ್ರಗಳನ್ನಷ್ಟೇ ಮಾಡುತ್ತಾರೆ. ಕಾಂಗ್ರೆಸ್ ಸರ್ಕಾರ ತನ್ನ ಐದು ವರ್ಷದ ಅವಧಿಯನ್ನು ಯಶಸ್ವಿಯಾಗಿ ಪೂರ್ಣಗೊಳಿಸಲಿದೆ. ಮುಖ್ಯಮಂತ್ರಿ ಬದಲಾವಣೆ ಬಗ್ಗೆ ಪಕ್ಷದ ವರಿಷ್ಠರ ತೀರ್ಮಾನಕ್ಕೆ ಬದ್ಧವಾಗಿರುತ್ತೇನೆ. ಸಿಎಂ ಬದಲಾವಣೆ ಮಾಡುವ ಬಗ್ಗೆ ನನಗೆ ಯಾವುದೇ ಮಾಹಿತಿಯಿಲ್ಲ. ವರಿಷ್ಠರ ಭೇಟಿಗೆ ಕರೆ ಬಂದರೆ ನವದೆಹಲಿಗೆ ಹೋಗುತ್ತೇನೆ ಎಂದರು.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

For Latest News Updates, Join Our Whatsapp Community🚩
ranjith
ranjith
Ranjith S S has a decade of experience in digital media. covering stories that spark conversations across the internet, Breaking news, viral moments and celebrity updates to everyday news that gets people talking.
RELATED ARTICLES

LEAVE A REPLY

Please enter your comment!
Please enter your name here

Most Popular