HomeKarnatakaಸಚಿವ ಶ್ರೀರಾಮುಲು ಮಹತ್ವದ ನಿರ್ಧಾರ: ವಿಧಾನಸಭೆ ಚುನಾವಣೆಯಲ್ಲಿ ಕ್ಷೇತ್ರ ಬದಲಾವಣೆ

ಸಚಿವ ಶ್ರೀರಾಮುಲು ಮಹತ್ವದ ನಿರ್ಧಾರ: ವಿಧಾನಸಭೆ ಚುನಾವಣೆಯಲ್ಲಿ ಕ್ಷೇತ್ರ ಬದಲಾವಣೆ

ಬಳ್ಳಾರಿ: ಮುಂದಿನ ವಿಧಾನಸಭೆ ಚುನಾವಣೆಯಲ್ಲಿ ಮೊಳಕಾಲ್ಮೂರು ಕ್ಷೇತ್ರದ ಬದಲಿಗೆ ಬಳ್ಳಾರಿ ಗ್ರಾಮೀಣ ಅಥವಾ ಸಂಡೂರು ವಿಧಾನಸಭಾ ಕ್ಷೇತ್ರದಿಂದ ಸ್ಪರ್ಧಿಸಲು  ಸಚಿವ ಬಿ. ಶ್ರೀರಾಮುಲು ನಿರ್ಧರಿಸಿದ್ದಾರೆ.

ಬಳ್ಳಾರಿಯಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಮುಂದಿನ ವಿಧಾನಸಭೆ ಚುನಾವಣೆಯಲ್ಲಿ ಸಂಡೂರು ಅಥವಾ ಬಳ್ಳಾರಿ ಗ್ರಾಮೀಣ ಕ್ಷೇತ್ರದಿಂದ ಸ್ಪರ್ಧಿಸಲು ನಿರ್ಧರಿಸಿದ್ದೇನೆ. ಹೈಕಮಾಂಡ್ ಗೂ ಈ ಬಗ್ಗೆ ಮಾಹಿತಿ ನೀಡಿದ್ದು, ಅಂತಿಮವಾಗಿ ಪಕ್ಷ ಎಲ್ಲಿಂದ ಸ್ಪರ್ಧಿಸಬೇಕು ಎಂದು ನಿರ್ಧರಿಸುತ್ತದೆ ಎಂದು ತಿಳಿಸಿದ್ದಾರೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಪ್ರಸ್ತುತ ಮೊಳಕಾಲ್ಮೂರು ಕ್ಷೇತ್ರ ಪ್ರತಿನಿಧಿಸುತ್ತಿರುವ ಶ್ರೀರಾಮುಲು ಕ್ಷೇತ್ರವನ್ನು ತೊರೆದು ಬೇರೆ ಕ್ಷೇತ್ರದಲ್ಲಿ ಸ್ಪರ್ಧಿಸುವುದಾಗಿ ಹೇಳಿದ್ದು, ಅವರು ಹಿಂದೆ ಪ್ರತಿನಿಧಿಸಿದ್ದ ಬಳ್ಳಾರಿ ಗ್ರಾಮೀಣ ಇಲ್ಲವೇ ಸಂಡೂರಿನಿಂದ ಕಣಕ್ಕಿಳಿಯುವ ಸಾಧ್ಯತೆ ಇದೆ.

For Latest News Updates, Join Our Whatsapp Community🚩
niranjan
niranjan
Niranjan working in media filed from 24 years. He worked in Hubballi Udayavani and local newspapers in Shivamogga. ನಿರಂಜನ ಮೂರ್ತಿ ಎಚ್.ಸಿ. 24 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿದ್ದಾರೆ. ಎಂಎ ಕನ್ನಡ, ಪಿಜಿ ಡಿಪ್ಲೊಮಾ ಇನ್ ಜರ್ನಲಿಸಂ ವ್ಯಾಸಂಗ ಮಾಡಿದ್ದಾರೆ. ಶಿವಮೊಗ್ಗದ ಎಚ್ಚರಿಕೆ, ನಮ್ಮನಾಡು, ಜೈ ಕರುನಾಡು, ನುಡಿಗಿಡ, ಕ್ರಾಂತಿ ಭಗತ್ ಸ್ಥಳೀಯ ಪತ್ರಿಕೆಗಳಲ್ಲಿ ವರದಿಗಾರನಾಗಿ, ಹುಬ್ಬಳ್ಳಿಯ ಉದಯವಾಣಿಯಲ್ಲಿ ಉಪ ಸಂಪಾದಕರಾಗಿ ಕಾರ್ಯ ನಿರ್ವಹಣೆ ಮಾಡಿದ್ದಾರೆ.
RELATED ARTICLES

Most Popular