HomeLatest NewsSSC CGL 2026 : 12,256 ಕೇಂದ್ರ ಸರ್ಕಾರಿ ಉದ್ಯೋಗಗಳು.. ಅರ್ಜಿ ಸಲ್ಲಿಕೆಗೆ ಇಂದೇ ಕೊನೆಯ...

SSC CGL 2026 : 12,256 ಕೇಂದ್ರ ಸರ್ಕಾರಿ ಉದ್ಯೋಗಗಳು.. ಅರ್ಜಿ ಸಲ್ಲಿಕೆಗೆ ಇಂದೇ ಕೊನೆಯ ದಿನ

ಕೇಂದ್ರ ಸರ್ಕಾರದ ಉದ್ಯೋಗ ಪಡೆಯಲು ಬಯಸುವ ನಿರುದ್ಯೋಗಿ ಯುವಕರಿಗೆ ಇದು ಸುವರ್ಣಾವಕಾಶವಾಗಿದೆ. ಸ್ಟಾಫ್ ಸೆಲೆಕ್ಷನ್ ಕಮಿಷನ್ (SSC), ಕಂಬೈನ್ಡ್ ಗ್ರಾಜುಯೇಟ್ ಲೆವೆಲ್ (CGL) 2026 ನೇಮಕಾತಿ ಅಧಿಸೂಚನೆಯ ಮೂಲಕ ಕೇಂದ್ರ ಸರ್ಕಾರದ ವಿವಿಧ ಸಚಿವಾಲಯಗಳು ಹಾಗೂ ಇಲಾಖೆಗಳಲ್ಲಿನ 12,256 ಗ್ರೂಪ್-ಬಿ ಮತ್ತು ಗ್ರೂಪ್-ಸಿ ಹುದ್ದೆಗಳ ಭರ್ತಿಗೆ ಅರ್ಜಿಗಳನ್ನು ಆಹ್ವಾನಿಸಿದೆ. ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಇಂದೇ (ಜೂನ್ 22, 2026) ಕೊನೆಯ ದಿನವಾಗಿದ್ದು, ಅರ್ಹ ಅಭ್ಯರ್ಥಿಗಳು ಶೀಘ್ರವಾಗಿ ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಸುವುದು ಒಳಿತು.

ಅರ್ಜಿ ಸಲ್ಲಿಸಲು ಅಭ್ಯರ್ಥಿಗಳು ಮಾನ್ಯತೆ ಪಡೆದ ವಿಶ್ವವಿದ್ಯಾಲಯದಿಂದ ಯಾವುದೇ ಪದವಿ ಪಡೆದಿರಬೇಕು. ಕೆಲವು ಹುದ್ದೆಗಳಿಗೆ CA, MBA, MBS ಮುಂತಾದ ಉನ್ನತ ವಿದ್ಯಾರ್ಹತೆ ಅಗತ್ಯವಿರುತ್ತದೆ. ಪ್ರಸ್ತುತ ಪದವಿಯ ಅಂತಿಮ ವರ್ಷದ ಅಥವಾ ಕೊನೆಯ ಸೆಮಿಸ್ಟರ್‌ನಲ್ಲಿ ವ್ಯಾಸಂಗ ಮಾಡುತ್ತಿರುವ ವಿದ್ಯಾರ್ಥಿಗಳೂ ಅರ್ಜಿ ಸಲ್ಲಿಸಲು ಅರ್ಹರಾಗಿದ್ದಾರೆ.

ಅಭ್ಯರ್ಥಿಗಳ ವಯೋಮಿತಿ 18 ರಿಂದ 32 ವರ್ಷಗಳ ನಡುವೆ ಇರಬೇಕು. ಎಸ್‌ಸಿ, ಎಸ್‌ಟಿ, ಒಬಿಸಿ ಹಾಗೂ ದಿವ್ಯಾಂಗ ಅಭ್ಯರ್ಥಿಗಳಿಗೆ ಸರ್ಕಾರದ ನಿಯಮಾನುಸಾರ ವಯೋಮಿತಿಯಲ್ಲಿ ಸಡಿಲಿಕೆ ಲಭ್ಯವಿದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಆಯ್ಕೆ ಪ್ರಕ್ರಿಯೆಯು ಟಿಯರ್-1 ಮತ್ತು ಟಿಯರ್-2 ಕಂಪ್ಯೂಟರ್ ಆಧಾರಿತ ಪರೀಕ್ಷೆಗಳು (CBT) ಹಾಗೂ ನಂತರದ ದಾಖಲೆ ಪರಿಶೀಲನೆ (ಡಾಕ್ಯುಮೆಂಟ್ ವೆರಿಫಿಕೇಶನ್) ಆಧಾರಿತವಾಗಿರುತ್ತದೆ. ಆಯ್ಕೆಯಾದ ಅಭ್ಯರ್ಥಿಗಳಿಗೆ ಹುದ್ದೆಯ ಪ್ರಕಾರ ತಿಂಗಳಿಗೆ ₹25,500 ರಿಂದ ₹1,51,100ರವರೆಗೆ ವೇತನ ಹಾಗೂ ಕೇಂದ್ರ ಸರ್ಕಾರದ ಇತರೆ ಭತ್ಯೆಗಳು ದೊರೆಯಲಿವೆ.

ಹೆಚ್ಚಿನ ಮಾಹಿತಿ ಹಾಗೂ ಆನ್‌ಲೈನ್ ಅರ್ಜಿಗಾಗಿ SSCಯ ಅಧಿಕೃತ ವೆಬ್‌ಸೈಟ್‌ಗೆ ಭೇಟಿ ನೀಡಬಹುದು:
SSC ಅಧಿಕೃತ ವೆಬ್‌ಸೈಟ್ https://ssc.gov.in/

ಪ್ರಮುಖ ದಿನಾಂಕಗಳು

  • ಅರ್ಜಿ ಸಲ್ಲಿಸಲು ಕೊನೆಯ ದಿನ: 22-06-2026
  • ಆನ್‌ಲೈನ್ ಶುಲ್ಕ ಪಾವತಿ ಕೊನೆಯ ದಿನ: 23-06-2026
  • ಅರ್ಜಿ ತಿದ್ದುಪಡಿ ಅವಧಿ: 29-06-2026 ರಿಂದ 01-07-2026
  • ಟಿಯರ್-1 ಪರೀಕ್ಷೆ (ತಾತ್ಕಾಲಿಕ): ಆಗಸ್ಟ್ – ಸೆಪ್ಟೆಂಬರ್ 2026
  • ಟಿಯರ್-2 ಪರೀಕ್ಷೆ (ತಾತ್ಕಾಲಿಕ): ಡಿಸೆಂಬರ್ 2026

ಸರ್ಕಾರಿ ಉದ್ಯೋಗದ ಕನಸು ಹೊಂದಿರುವ ಅಭ್ಯರ್ಥಿಗಳು ಕೊನೆಯ ಕ್ಷಣದವರೆಗೆ ಕಾಯದೆ ಕೂಡಲೇ ಅರ್ಜಿ ಸಲ್ಲಿಸುವುದು ಉತ್ತಮ.

For Latest News Updates, Join Our Whatsapp Community🚩
ranjith
ranjith
Ranjith S S has a decade of experience in digital media. covering stories that spark conversations across the internet, Breaking news, viral moments and celebrity updates to everyday news that gets people talking.
RELATED ARTICLES

LEAVE A REPLY

Please enter your comment!
Please enter your name here

Most Popular