HomeIndiaಪೊಲೀಸ್ ಉದ್ಯೋಗಾಕಾಂಕ್ಷಿಗಳಿಗೆ ಶುಭ ಸುದ್ದಿ: ಮೊದಲ ಬಾರಿಗೆ ಕನ್ನಡ ಸೇರಿ 13 ಭಾಷೆಗಳಲ್ಲಿ CAPF ಕಾನ್‌ಸ್ಟೆಬಲ್...

ಪೊಲೀಸ್ ಉದ್ಯೋಗಾಕಾಂಕ್ಷಿಗಳಿಗೆ ಶುಭ ಸುದ್ದಿ: ಮೊದಲ ಬಾರಿಗೆ ಕನ್ನಡ ಸೇರಿ 13 ಭಾಷೆಗಳಲ್ಲಿ CAPF ಕಾನ್‌ಸ್ಟೆಬಲ್ ಪರೀಕ್ಷೆ

ನವದೆಹಲಿ: ಕೇಂದ್ರ ಸಶಸ್ತ್ರ ಪೊಲೀಸ್ ಪಡೆಗಳಲ್ಲಿ(CAPFs) ಕಾನ್‌ಸ್ಟೆಬಲ್‌ಗಳ ನೇಮಕಾತಿಗಾಗಿ ಕಾನ್ಸ್‌ ಟೇಬಲ್(GD) ಪರೀಕ್ಷೆಯನ್ನು ಮೊದಲ ಬಾರಿಗೆ 13 ಪ್ರಾದೇಶಿಕ ಭಾಷೆಗಳಲ್ಲಿ ನಡೆಸಲಾಗುವುದು.

ಹಿಂದಿ ಮತ್ತು ಇಂಗ್ಲಿಷ್ ಅಲ್ಲದೆ, ಅಸ್ಸಾಮಿ, ಬೆಂಗಾಲಿ, ಗುಜರಾತಿ, ಮರಾಠಿ, ಮಲಯಾಳಂ, ಕನ್ನಡ, ತಮಿಳು, ತೆಲುಗು, ಒಡಿಯಾ, ಉರ್ದು, ಪಂಜಾಬಿ, ಮಣಿಪುರಿ ಮತ್ತು ಕೊಂಕಣಿ ಭಾಷೆಗಳಲ್ಲಿ ಪರೀಕ್ಷೆ ನಡೆಯಲಿದೆ ಎಂದು ಗೃಹ ಸಚಿವಾಲಯ ಪ್ರಕಟಿಸಿದೆ.

ದೇಶದಾದ್ಯಂತ 128 ನಗರಗಳಲ್ಲಿ ಸುಮಾರು 48 ಲಕ್ಷ ಅಭ್ಯರ್ಥಿಗಳಿಗೆ ಫೆಬ್ರವರಿ 20 ರಿಂದ ಮಾರ್ಚ್ 7, 2024 ರವರೆಗೆ ಪರೀಕ್ಷೆಯನ್ನು ನಡೆಸಲಾಗುವುದು. CAPF GD ಕಾನ್‌ಸ್ಟೆಬಲ್ ಪರೀಕ್ಷೆಯಲ್ಲಿ ಸ್ಥಳೀಯ ಯುವಕರ ಭಾಗವಹಿಸುವಿಕೆಯನ್ನು ಹೆಚ್ಚಿಸಲು ಹಾಗೂ ಪ್ರಾದೇಶಿಕ ಭಾಷೆಗಳನ್ನು ಉತ್ತೇಜಿಸಲು ಈ ನಿರ್ಧಾರವನ್ನು ತೆಗೆದುಕೊಳ್ಳಲಾಗಿದೆ ಎಂದು ಸಚಿವಾಲಯ ತಿಳಿಸಿದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಸ್ಟಾಫ್ ಸೆಲೆಕ್ಷನ್ ಕಮಿಷನ್(SSC) ಪ್ರತಿ ವರ್ಷ ಕಾನ್ಸ್ಟೇಬಲ್ GD ಪರೀಕ್ಷೆಯನ್ನು ನಡೆಸುತ್ತದೆ. ಈ ವರ್ಷ, ಆಯೋಗವು ಹಿಂದಿ ಮತ್ತು ಇಂಗ್ಲಿಷ್ ಜೊತೆಗೆ 13 ಪ್ರಾದೇಶಿಕ ಭಾಷೆಗಳಲ್ಲಿ ಪರೀಕ್ಷೆ ನಡೆಸಲು ಅನುಕೂಲವಾಗುವಂತೆ ಗೃಹ ವ್ಯವಹಾರಗಳ ಸಚಿವಾಲಯದೊಂದಿಗೆ ಎಂಒಯುಗೆ ಸಹಿ ಹಾಕಿದೆ.

For Latest News Updates, Join Our Whatsapp Community🚩
niranjan
niranjan
Niranjan working in media filed from 24 years. He worked in Hubballi Udayavani and local newspapers in Shivamogga. ನಿರಂಜನ ಮೂರ್ತಿ ಎಚ್.ಸಿ. 24 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿದ್ದಾರೆ. ಎಂಎ ಕನ್ನಡ, ಪಿಜಿ ಡಿಪ್ಲೊಮಾ ಇನ್ ಜರ್ನಲಿಸಂ ವ್ಯಾಸಂಗ ಮಾಡಿದ್ದಾರೆ. ಶಿವಮೊಗ್ಗದ ಎಚ್ಚರಿಕೆ, ನಮ್ಮನಾಡು, ಜೈ ಕರುನಾಡು, ನುಡಿಗಿಡ, ಕ್ರಾಂತಿ ಭಗತ್ ಸ್ಥಳೀಯ ಪತ್ರಿಕೆಗಳಲ್ಲಿ ವರದಿಗಾರನಾಗಿ, ಹುಬ್ಬಳ್ಳಿಯ ಉದಯವಾಣಿಯಲ್ಲಿ ಉಪ ಸಂಪಾದಕರಾಗಿ ಕಾರ್ಯ ನಿರ್ವಹಣೆ ಮಾಡಿದ್ದಾರೆ.
RELATED ARTICLES

Most Popular