ಕೇಂದ್ರದಿಂದ ಐತಿಹಾಸಿಕ ನಿರ್ಧಾರ; ಉದ್ಯೋಗಾಕಾಂಕ್ಷಿಗಳಿಗೆ ಭರ್ಜರಿ ಸುದ್ದಿ: ಕನ್ನಡ ಸೇರಿ 13 ಭಾಷೆಗಳಲ್ಲಿ SSC ಪರೀಕ್ಷೆ

ನವದೆಹಲಿ: ಸಿಬ್ಬಂದಿ ಮತ್ತು ತರಬೇತಿ ಇಲಾಖೆಯು ಸ್ಟಾಫ್ ಸೆಲೆಕ್ಷನ್ ಕಮಿಷನ್ ಮಲ್ಟಿಟಾಸ್ಕಿಂಗ್(ತಾಂತ್ರಿಕವಲ್ಲದ) ಸಿಬ್ಬಂದಿ(SSC MTS) ಪರೀಕ್ಷೆ ಮತ್ತು CHSLE ಪರೀಕ್ಷೆಯನ್ನು ಹಿಂದಿ ಮತ್ತು ಇಂಗ್ಲಿಷ್ ಜೊತೆಗೆ 13 ಪ್ರಾದೇಶಿಕ ಭಾಷೆಗಳಲ್ಲಿ ನಡೆಸಲು ಅನುಮೋದಿಸಿದೆ.

ಸ್ಥಳೀಯ ಯುವಕರ ಪಾಲ್ಗೊಳ್ಳುವಿಕೆಗೆ ಉತ್ತೇಜನ ನೀಡಲು ಮತ್ತು ಪ್ರಾದೇಶಿಕ ಭಾಷೆಗಳನ್ನು ಪ್ರೋತ್ಸಾಹಿಸಲು ಪ್ರಧಾನಿ ನರೇಂದ್ರ ಮೋದಿ ಅವರ ನೇತೃತ್ವದ ಸರ್ಕಾರದಿಂದ ಈ ಐತಿಹಾಸಿಕ ನಿರ್ಧಾರ ತೆಗೆದುಕೊಳ್ಳಲಾಗಿದೆ ಎಂದು ಕೇಂದ್ರ ಸಚಿವ ಡಾ.ಜಿತೇಂದ್ರ ಸಿಂಗ್ ಹೇಳಿದ್ದಾರೆ.

ಪ್ರತಿಯೊಬ್ಬರಿಗೂ ಉದ್ಯೋಗಕ್ಕೆ ಅರ್ಜಿ ಸಲ್ಲಿಸಲು ಸಮಾನ ಅವಕಾಶ ಸಿಗಬೇಕು ಮತ್ತು ಭಾಷೆಯ ಅಡೆತಡೆಯಿಂದಾಗಿ ಯಾರೂ ವಂಚಿತರಾಗಬಾರದು ಅಥವಾ ಅನನುಕೂಲಕ್ಕೆ ಒಳಗಾಗಬಾರದು ಎಂಬ ಪ್ರಧಾನಿ ನರೇಂದ್ರ ಮೋದಿ ಅವರ ದೂರದೃಷ್ಟಿಯ ಪ್ರಕಾರ ಈ ಕ್ರಮ ಕೈಗೊಳ್ಳಲಾಗಿದೆ ಎಂದು ಅವರು ಹೇಳಿದರು.

ಹಿಂದಿ ಮತ್ತು ಇಂಗ್ಲಿಷ್ ಜೊತೆಗೆ, ಪ್ರಶ್ನೆ ಪತ್ರಿಕೆಯು 13 ಪ್ರಾದೇಶಿಕ ಭಾಷೆಗಳಲ್ಲಿರುತ್ತದೆ. ಅಸ್ಸಾಮಿ, ಬಂಗಾಳಿ, ಗುಜರಾತಿ, ಮರಾಠಿ, ಮಲಯಾಳಂ, ಕನ್ನಡ, ತಮಿಳು, ತೆಲುಗು, ಒಡಿಯಾ, ಉರ್ದು, ಪಂಜಾಬಿ, ಮಣಿಪುರಿ ಮತ್ತು ಕೊಂಕಣಿ ಭಾಷೆಗಳಲ್ಲಿ ಪರೀಕ್ಷೆ ನಡೆಯಲಿದೆ. ಈ ನಿರ್ಧಾರ ಲಕ್ಷಾಂತರ ಆಕಾಂಕ್ಷಿಗಳು ತಮ್ಮ ಮಾತೃಭಾಷೆ ಅಥವಾ ಪ್ರಾದೇಶಿಕ ಭಾಷೆಯಲ್ಲಿ ಪರೀಕ್ಷೆಯಲ್ಲಿ ಪಾಲ್ಗೊಳ್ಳುವಂತೆ ಮಾಡುತ್ತದೆ.

ಇಂಗ್ಲಿಷ್ ಮತ್ತು ಹಿಂದಿ ಹೊರತುಪಡಿಸಿ ಇತರ ಭಾಷೆಗಳಲ್ಲಿ ಎಸ್‌ಎಸ್‌ಸಿ ಪರೀಕ್ಷೆಗಳನ್ನು ನಡೆಸಲು ವಿವಿಧ ರಾಜ್ಯಗಳಿಂದ ನಿರಂತರ ಬೇಡಿಕೆಗಳು ಬಂದವು. ಇತರ ವಿಷಯಗಳ ಜೊತೆಗೆ ಈ ಅಂಶವನ್ನು ಪರಿಶೀಲಿಸಲು ಸರ್ಕಾರವು ತಜ್ಞರ ಸಮಿತಿಯನ್ನು ನೇಮಿಸಿತ್ತು. ಮೊದಲ MTS 2022 ಪರೀಕ್ಷೆಯನ್ನು ಹಿಂದಿ ಮತ್ತು ಇಂಗ್ಲಿಷ್ ಜೊತೆಗೆ 13 ಪ್ರಾದೇಶಿಕ ಭಾಷೆಗಳಲ್ಲಿ ಮೇ 2 ರಿಂದ ನಡೆಸಲಾಗುತ್ತದೆ.

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read