SSLC ಪಾಸಾದವರಿಗೆ ಭರ್ಜರಿ ಗುಡ್ ನ್ಯೂಸ್: 11 ಸಾವಿರಕ್ಕೂ ಅಧಿಕ ಹುದ್ದೆಗಳಿಗೆ ನೇಮಕಾತಿ

ಉದ್ಯೋಗದ ನಿರೀಕ್ಷೆಯಲ್ಲಿರುವ ಹತ್ತನೇ ತರಗತಿ ಪಾಸಾದವರಿಗೆ ಭರ್ಜರಿ ಗುಡ್ ನ್ಯೂಸ್ ಇಲ್ಲಿದೆ. ಮಲ್ಟಿ ಟಾಸ್ಕಿಂಗ್ ಸ್ಟಾಪ್ ಹಾಗೂ ಹವಾಲ್ದಾರ್ ಹುದ್ದೆಗಳ ನೇಮಕಾತಿಗೆ ಎಸ್ ಎಸ್ ಸಿ ಅರ್ಜಿ ಆಹ್ವಾನಿಸಿದೆ.

ಮಲ್ಟಿ ಟಾಸ್ಕಿಂಗ್ ಸ್ಟಾಪ್ (ನಾನ್ ಟೆಕ್ನಿಕಲ್) – 10,880 ಹುದ್ದೆಗಳು ಹಾಗೂ ಹವಾಲ್ದಾರ್ – 529 ಸೇರಿ ಒಟ್ಟು 11,409 ಹುದ್ದೆಗಳಿಗೆ ನೇಮಕಾತಿ ನಡೆಯಲಿದ್ದು, ಹತ್ತನೇ ತರಗತಿ ವಿದ್ಯಾರ್ಹತೆ ಹೊಂದಿರುವ ಕನಿಷ್ಠ 18 ಹಾಗೂ ಗರಿಷ್ಠ 27 ವರ್ಷ ವಯೋಮಿತಿಯವರು ಅರ್ಜಿ ಸಲ್ಲಿಸಬಹುದಾಗಿದೆ.

ಮಲ್ಟಿ ಟಾಸ್ಕಿಂಗ್ ಸ್ಟಾಪ್ ಹುದ್ದೆಗೆ ಆಯ್ಕೆಯಾದವರು ಕೇಂದ್ರ ಸರ್ಕಾರದ ವಿವಿಧ ಇಲಾಖೆ / ಸಚಿವಾಲಯ / ಕಚೇರಿಗಳಲ್ಲಿ ಕಾರ್ಯನಿರ್ವಹಿಸಬೇಕಾಗಿದ್ದು, ಅರ್ಜಿ ಸಲ್ಲಿಸಲು ಫೆಬ್ರವರಿ 17 ಕೊನೆಯ ದಿನಾಂಕವಾಗಿದೆ. ಹೆಚ್ಚಿನ ಮಾಹಿತಿಗಾಗಿ https://ssc.nic.in ವೆಬ್ ಸೈಟ್ ಗೆ ಭೇಟಿ ನೀಡಬಹುದಾಗಿದೆ.

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read