‘SSLC’ ಪೂರಕ ಪರೀಕ್ಷೆ ಬರೆಯಲಿರುವ ವಿದ್ಯಾರ್ಥಿಗಳಿಗೆ ಮುಖ್ಯ ಮಾಹಿತಿ; ಪ್ರವೇಶ ಪತ್ರ ಬಿಡುಗಡೆ

ಬೆಂಗಳೂರು : ಜೂನ್ 12 ರಿಂದ ಎಸ್ ಎಸ್ ಎಲ್ ಸಿ (SSLC) ಪೂರಕ ಪರೀಕ್ಷೆ ಆರಂಭವಾಗಲಿದ್ದು, ಪರೀಕ್ಷೆ ಬರೆಯುವ ವಿದ್ಯಾರ್ಥಿಗಳ ಪ್ರವೇಶ ಪತ್ರವನ್ನು ಶಾಲಾ ಲಾಗಿನ್ ನಲ್ಲಿ ಬಿಡುಗಡೆ ಮಾಡಲಾಗಿದೆ.

ಶಾಲಾ ಮುಖ್ಯೋಪಾಧ್ಯಾಯರು, ವಿದ್ಯಾರ್ಥಿಗಳು ಪ್ರವೇಶ ಪತ್ರಗಳನ್ನು ಮಂಡಳಿಯ ವೆಬ್‌ ಸೈಟ್ ಮೂಲಕ ಡೌನ್ ಲೋಡ್ ಮಾಡಿಕೊಂಡು ವಿದ್ಯಾರ್ಥಿಗಳಿಗೆ ಸಕಾಲದಲ್ಲಿ ವಿತರಿಸುವಂತೆ ಸೂಚನೆ ನೀಡಲಾಗಿದೆ. ಪ್ರವೇಶ ಪತ್ರದಲ್ಲಿ (hall ticket) ದಲ್ಲಿ ಏನಾದರೂ ತಪ್ಪುಗಳಿದ್ದರೇ ಈ ಕೂಡಲೇ ಸರಿಪಡಿಸಿಕೊಳ್ಳಲು ಮಂಡಳಿ ನಿರ್ದೇಶಕರು ಸೂಚಿಸಿದ್ದಾರೆ.

ಪ್ರವೇಶ ಪತ್ರದಲ್ಲಿ ಭಾವಚಿತ್ರ ಇಲ್ಲದೇ ಇರುವ ವಿದ್ಯಾರ್ಥಿಗೆ ಪರೀಕ್ಷೆ ಬರೆಯಲು ಅನುಮತಿ ನೀಡಲಾಗುವುದಿಲ್ಲ. ಇದರಿಂದ ವಿದ್ಯಾರ್ಥಿಗೆ ಆಗುವ ತೊಂದರೆಗೆ ಸಂಬಂದಿಸಿದ ಶಾಲಾ ಮುಖ್ಯಸ್ಥರೇ ಜವಾಬ್ದಾರರಾಗಿದ್ದು, ಮಂಡಳಿಯು ಇದಕ್ಕೆ ಜವಾಬ್ದಾರಿ ಇಲ್ಲ ಎಂದು ಸೂಚನೆ ನೀಡಿದೆ. ಶಾಲಾ ಲಾಗಿನ್ (School login) ನಿಂದ ಮುದ್ರಿಸಿಕೊಂಡಿರುವ ಪ್ರವೇಶ ಪತ್ರಗಳನ್ನು ಆಭ್ಯರ್ಥಿಗಳಿಗೆ ಕೂಡಲೇ ವಿತರಿಸುವಂತೆ ಸೂಚನೆ ನೀಡಿದ್ದಾರೆ. ಪ್ರವೇಶ ಪತ್ರದಲ್ಲಿ ನೀಡಲಾಗಿರುವ ಸೂಚನೆಗಳನ್ನು ವಿದ್ಯಾರ್ಥಿಗಳಿಗೆ ತಪ್ಪದೇ ಪಾಲಿಸುವಂತೆ ತಿಳಿಸಲು ಸೂಚಿಸಿದ್ದಾರೆ.

12:06:2023 ರಿಂದ ಪರೀಕ್ಷೆ ಆರಂಭವಾಗಿ 19:06:2023 ರವರೆಗೆ ಪರೀಕ್ಷೆ ನಡೆಯಲಿದೆ. ಎಲ್ಲಾ ಪರೀಕ್ಷಾ ಕೇಂದ್ರಗಳಲ್ಲೂ ಸಿಸಿಟಿವಿ ಕ್ಯಾಮರಾಗಳನ್ನು ಕಡ್ಡಾಯವಾಗಿ ಅಳವಡಿಸಲು ಕ್ರಮ ವಹಿಸಲಾಗಿದೆ. ಅತ್ಯಂತ ವ್ಯವಸ್ಥಿತವಾಗಿ ಈ ಬಾರಿ ಪೂರಕ ಪರೀಕ್ಷೆಯನ್ನು ನಡೆಸಲು ತೀರ್ಮಾನಿಸಲಾಗಿದೆ ಎಂದು ಕರ್ನಾಟಕ ರಾಜ್ಯ ಶಾಲಾ ಪರೀಕ್ಷಾ ಮತ್ತು ಮೌಲ್ಯ ನಿರ್ಣಯ ಮಂಡಳಿ ಮಾಹಿತಿ ನೀಡಿದೆ.

 

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read