ಬೆಂಗಳೂರು : ಕಳೆದ ಮಾರ್ಚ್ ಏಪ್ರಿಲ್ ತಿಂಗಳಿನಲ್ಲಿ ಎಸ್ ಎಸ್ ಎಲ್ ಸಿ (SSLC) ಪರೀಕ್ಷೆ ಬರೆದಿದ್ದ ಕೆಲವು ವಿದ್ಯಾರ್ಥಿಗಳು ಮರುಮೌಲ್ಯಮಾಪನಕ್ಕೆ ಅರ್ಜಿ ಸಲ್ಲಿಸಿದ್ದು, ಇದರಲ್ಲಿ 2164 ಮಂದಿ ಅನುತ್ತೀರ್ಣರಾಗಿದ್ದಾರೆ.
ಮರುಮೌಲ್ಯಮಾಪನ ಮತ್ತು ಮರು ಎಣಿಕೆಗೆ 12,986 ಅರ್ಜಿಗಳು ಬಂದಿದ್ದು, ಈ ಪೈಕಿ 2,353 ವಿದ್ಯಾರ್ಥಿಗಳು ಉತ್ತೀರ್ಣರಾಗಿದ್ದಾರೆ ಹಾಗೂ 2164 ಮಂದಿ ವಿದ್ಯಾರ್ಥಿಗಳು ಫೇಲ್ (fail) ಆಗಿದ್ದಾರೆ ಎಂದು ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯನಿರ್ಣಯ ಮಂಡಳಿ ನಿರ್ದೇಶಕರು ಮಾಹಿತಿ ನೀಡಿದ್ದಾರೆ.
ಅರ್ಜಿ ಸಲ್ಲಿಸಿದ್ದ ಎಲ್ಲಾ ವಿದ್ಯಾರ್ಥಿಗಳಿಗೆ ಮೊಬೈಲ್ ಮೂಲಕ ಸಂದೇಶ (SMS) ಕಳುಹಿಸಲಾಗಿದೆ ಎಂದು ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯನಿರ್ಣಯ ಮಂಡಳಿ ನಿರ್ದೇಶಕರು ತಿಳಿಸಿದ್ದಾರೆ. ಎಸ್ಎಸ್ಎಲ್ಸಿ ಮುಖ್ಯ ಪರೀಕ್ಷೆಯ ಮರುಎಣಿಕೆ, ಮರುಮೌಲ್ಯಮಾನದ ಫಲಿತಾಂಶವನ್ನು ಅಧಿಕೃತ ವೆಬ್ಸೈಟ್ https://kseab.karnataka.gov.in/ ನಲ್ಲಿ ಬಿಡುಗಡೆ ಮಾಡಲಾಗಿದೆ. ಆನ್ಲೈನ್ ಮೂಲಕ ಅರ್ಜಿ ಸಲ್ಲಿಸಿದ ವಿದ್ಯಾರ್ಥಿಗಳು ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯನಿರ್ಣಯ ಮಂಡಳಿ ವೆಬ್ಸೈಟ್ಗೆ ಭೇಟಿ ನೀಡಿ ಫಲಿತಾಂಶವನ್ನು ಪಡೆಯಬಹುದಾಗಿದೆ.