ಬೇಸಿಗೆ ಆರಂಭವಾಗುತ್ತಿದೆ. ಎಸ್‌ಎಸ್ಎಲ್‌ಸಿ ಮತ್ತು ಪಿಯುಸಿ ಪರೀಕ್ಷೆಗಳ ವೇಳಾಪಟ್ಟಿ ಪ್ರಕಟವಾಗಿದೆ. ಫೆಬ್ರವರಿ 28 ರಿಂದ ದ್ವಿತೀಯ ಪಿಯುಸಿ ಪರೀಕ್ಷೆ ಮತ್ತು ಮಾರ್ಚ್ 18ರಿಂದ ಎಸ್ಎಸ್‌ಎಲ್‌ಸಿ ಪರೀಕ್ಷೆಗಳು ನಡೆಯಲಿವೆ.
ಬೇಸಿಗೆ ಸಮಯದ ಲೋಡ್ ಶೆಡ್ಡಿಂಗ್ ಕಾರಣಕ್ಕೆ ವಿದ್ಯಾರ್ಥಿಗಳ ಓದಿಗೆ ತೊಂದರೆಯಾಗುವ ಸಾಧ್ಯತೆ ಇದೆ. ಆದ್ದರಿಂದ ಇಂಧನ ಸಚಿವ ಕೆ.ಜೆ.ಜಾರ್ಜ್ ಅವರಿಗೆ ಪತ್ರವನ್ನು ಬರೆಯಲಾಗಿದ್ದು, ಲೋಡ್ ಶೆಡ್ಡಿಂಗ್ ಮಾಡದಂತೆ ಮನವಿ ಮಾಡಲಾಗಿದೆ.
ಉಡುಪಿ ಶಾಸಕ ಯಶ್‌ಪಾಲ್ ಎ.ಸುವರ್ಣ ಈ ಕುರಿತು ಪತ್ರವನ್ನು ಬರೆದಿದ್ದಾರೆ. ಸಾಮಾಜಿಕ ಜಾಲತಾಣದಲ್ಲಿ ಈ ಕುರಿತು ಪೋಸ್ಟ್ ಹಾಕಿದ್ದು, ವಿದ್ಯಾರ್ಥಿಗಳ ಶೈಕ್ಷಣಿಕ ವರ್ಷದ ಅಂತಿಮ ಹಂತದ ಪರೀಕ್ಷೆಗಳ ಸಂದರ್ಭದಲ್ಲಿ ವಿದ್ಯುತ್ ಲೋಡ್ ಶೆಡ್ಡಿಂಗ್ ಮಾಡದಂತೆ ಇಂಧನ ಇಲಾಖೆ ಸಚಿವರಾದ ಶೀ ಕೆಜೆ ಜಾರ್ಜ್ ಅವರಿಗೆ ಮನವಿ ಮಾಡಲಾಗಿದೆ.
ಉಡುಪಿ ಜಿಲ್ಲೆ ಶಿಕ್ಷಣ ಕ್ಷೇತ್ರದಲ್ಲಿ ಮುಂದುವರೆದ ಜಿಲ್ಲೆ ಎಂಬ ಹೆಗ್ಗಳಿಕೆ ಹೊಂದಿದೆ. ಜಿಲ್ಲೆಯ ವಿದ್ಯಾರ್ಥಿಗಳು ಮತ್ತು ಪೋಷಕರು ಶಿಕ್ಷಣಕ್ಕೆ ಹೆಚ್ಚಿನ ಪ್ರಾಮುಖ್ಯತೆ ನೀಡಿಕೊಂಡು ಬರುತ್ತಿದ್ದು, ಜಿಲ್ಲೆಯು ಶಿಕ್ಷಣ ಕ್ಷೇತ್ರದಲ್ಲಿ ಮತ್ತು ಫಲಿತಾಂಶಗಳಲ್ಲಿ ಹೆಚ್ಚಿನ ಸಾಧನೆ ಮಾಡಿದ ಹಿನ್ನಲೆ ಹೊಂದಿದೆ. ಉಡುಪಿ ಜಿಲ್ಲೆಯಲ್ಲಿ ನೂರಾರು ಶಿಕ್ಷಣ ಸಂಸ್ಥೆಗಳು ವಿದ್ಯಾದಾನ ಮಾಡುತ್ತಿದ್ದು, ಹೊರ ಜಿಲ್ಲೆಗಳ ಸಹಸ್ರಾರು ವಿದ್ಯಾರ್ಥಿಗಳೂ ವ್ಯಾಸಂಗ ಮಾಡುತ್ತಿದ್ದಾರೆ.
ಎಸ್.ಎಸ್.ಎಲ್.ಸಿ. ಮತ್ತು ಪಿ.ಯು.ಸಿ. ವಾರ್ಷಿಕ ಪರೀಕ್ಷಾ ಪೂರ್ವ ಸಿದ್ದತೆಗಳು ನಡೆಯುತ್ತಿದ್ದು, ಎಸ್.ಎಸ್.ಎಲ್.ಸಿ. ಅಂತಿಮ ಪರೀಕ್ಷೆ, ಪದವಿ ಪೂರ್ವ, ಪದವಿ ಹಾಗೂ ಸ್ನಾತಕೋತ್ತರ ಪರೀಕ್ಷೆಗಳು ಮಾರ್ಚ್ ಹಾಗೂ ಏಪ್ರಿಲ್ ತಿಂಗಳಲ್ಲಿ ನಡೆಯಲಿದೆ. ಈ ಪರೀಕ್ಷೆಗಳು ವಿದ್ಯಾರ್ಥಿಗಳ ಜೀವನದಲ್ಲಿ ಪ್ರಮುಖ ಶೈಕ್ಷಣಿಕ ಘಟ್ಟವಾಗಿದೆ. ಅಂತಿಮ ಪರೀಕ್ಷೆಗಳಿಗೆ ವಿದ್ಯಾರ್ಥಿಗಳು ತಯಾರಿ ನಡೆಸುತ್ತಿದ್ದು, ಈ ಸಂದರ್ಭದಲ್ಲಿ ವಿದ್ಯಾರ್ಥಿಗಳ ಕಲಿಕೆ ಹಾಗೂ ಅಭ್ಯಾಸಕ್ಕೆ ಅನುಕೂಲವಾಗಲು ವಿದ್ಯುತ್ ಲೋಡ್ ಶೆಡ್ಡಿಂಗ್ ಮಾಡದಂತೆ ಸೂಕ್ತ ನಿರ್ದೇಶನ ನೀಡಲು ಇಂಧನ ಇಲಾಖೆಯ ಸಚಿವರಾದ ಶ್ರೀ ಕೆ.ಜೆ ಜಾರ್ಜ್ ರವರಿಗೆ, ಜಿಲ್ಲಾಧಿಕಾರಿಗಳಿಗೆ ಹಾಗು ಮೆಸ್ಕಾಂ ಅಧಿಕಾರಿಗಳಿಗೆ ಶಾಸಕ ಯಶ್ ಪಾಲ್ ಸುವರ್ಣ ಮನವಿ ಮಾಡಿದ್ದಾರೆ.
ಶಾಸಕರ ಪತ್ರದ ವಿವರ: ಶಾಸಕರ ಪತ್ರವು ಶಾಲಾ ಕಾಲೇಜು ವಿದ್ಯಾರ್ಥಿಗಳ ಪರೀಕ್ಷಾ ಸಮಯದಲ್ಲಿ ಲೋಡ್ ಶೆಡ್ಡಿಂಗ್ ಮಾಡದಿರುವ ಕುರಿತು ಎಂಬ ವಿಷಯವನ್ನು ಒಳಗೊಂಡಿದೆ.
ಮೇಲಿನ ವಿಷಯಕ್ಕೆ ಸಂಬಂಧಿಸಿದಂತೆ, ಉಡುಪಿ ಜಿಲ್ಲೆಯು ಶಿಕ್ಷಣ ಕ್ಷೇತ್ರದಲ್ಲಿ ಮುಂದುವರೆದ ಜಿಲ್ಲೆ ಎಂಬ ಹೆಗ್ಗಳಿಕೆ ಹೊಂದಿದೆ. ಜಿಲ್ಲೆಯ ವಿದ್ಯಾರ್ಥಿಗಳು ಮತ್ತು ಪೋಷಕರು ಶಿಕ್ಷಣಕ್ಕೆ ಹೆಚ್ಚಿನ ಪ್ರಾಮುಖ್ಯತೆ ನೀಡಿಕೊಂಡು ಬರುತ್ತಿದ್ದು, ಜಿಲ್ಲೆಯು ಶಿಕ್ಷಣ ಕ್ಷೇತ್ರದಲ್ಲಿ ಮತ್ತು ಫಲಿತಾಂಶಗಳಲ್ಲಿ ಹೆಚ್ಚಿನ ಸಾಧನೆ ಮಾಡಿದ ಹಿನ್ನಲೆ ಹೊಂದಿದೆ. ಉಡುಪಿ ಜಿಲ್ಲೆಯಲ್ಲಿ ನೂರಾರು ಶಿಕ್ಷಣ ಸಂಸ್ಥೆಗಳು ವಿದ್ಯಾದಾನ ಮಾಡುತ್ತಿದ್ದು, ಹೊರ ಜಿಲ್ಲೆಯಗಳ ಸಹಸ್ರಾರು ವಿದ್ಯಾರ್ಥಿಗಳೂ ವ್ಯಾಸಂಗ ಮಾಡುತ್ತಿದ್ದಾರೆ ಎಂದು ಹೇಳಿದ್ದಾರೆ.
ಎಸ್.ಎಸ್.ಎಲ್.ಸಿ. ಮತ್ತು ಪಿ.ಯು.ಸಿ. ವಾರ್ಷಿಕ ಪರೀಕ್ಷಾ ಪೂರ್ವ ಸಿದ್ಧತೆಗಳು ನಡೆಯುತ್ತಿದ್ದು, ಎಸ್.ಎಸ್.ಎಲ್.ಸಿ. ಅಂತಿಮ ಪರೀಕ್ಷೆ, ಪದವಿ ಪೂರ್ವ, ಪದವಿ ಹಾಗೂ ಸ್ನಾತಕೋತ್ತರ ಪರೀಕ್ಷೆಗಳು ಮಾರ್ಚ್ ಹಾಗೂ ಏಪ್ರಿಲ್ ತಿಂಗಳಲ್ಲಿ ನಡೆಯಲಿದೆ.
ಈ ಪರೀಕ್ಷೆಗಳು ವಿದ್ಯಾರ್ಥಿಗಳ ಜೀವನದಲ್ಲಿ ಒಂದು ಪ್ರಮುಖ ಶೈಕ್ಷಣಿಕ ಘಟ್ಟವಾಗಿದೆ. ಅಂತಿಮ ಪರೀಕ್ಷೆಗಳಿಗೆ ವಿದ್ಯಾರ್ಥಿಗಳು ತಯಾರಿ ನಡೆಸುತ್ತಿದ್ದು, ಈ ಸಂದರ್ಭದಲ್ಲಿ ವಿದ್ಯಾರ್ಥಿಗಳ ಕಲಿಕೆ ಹಾಗೂ ಅಭ್ಯಾಸಕ್ಕೆ ಅನುಕೂಲವಾಗಲು ವಿದ್ಯುತ್ ಲೋಡ್ ಶೆಡ್ಡಿಂಗ್ ಮಾಡದಂತೆ ಸಂಬಂಧ ಪಟ್ಟವರಿಗೆ ಸೂಕ್ತ ನಿರ್ದೇಶನ ನೀಡಲು ಕೋರಿದೆ ಎಂದು ಪತ್ರದಲ್ಲಿ ತಿಳಿಸಿದ್ದಾರೆ.

