ರಾಜ್ಯಾದ್ಯಂತ ಇಂದಿನಿಂದ SSLC ಪರೀಕ್ಷೆ ಆರಂಭ: ವಿದ್ಯಾರ್ಥಿಗಳಿಗೆ ಆಲ್ ದಿ ಬೆಸ್ಟ್

ಬೆಂಗಳೂರು: ರಾಜ್ಯದಾದ್ಯಂತ ಇಂದಿನಿಂದ ಎಸ್ಎಸ್ಎಲ್ಸಿ ಪರೀಕ್ಷೆ ಆರಂಭವಾಗಲಿದೆ. ದ್ವಿತೀಯ ಪಿಯುಸಿ ಪರೀಕ್ಷೆಗಳು ಮುಕ್ತಾಯವಾದ ಬೆನ್ನಲ್ಲೇ ಶುಕ್ರವಾರದಿಂದ ಎಸ್ಎಸ್ಎಲ್ಸಿ ಪರೀಕ್ಷೆಗಳು ಆರಂಭವಾಗಲಿದ್ದು, ಮೊದಲ ದಿನ ಪ್ರಥಮ ಭಾಷೆಯ ಪರೀಕ್ಷೆಗಳು ನಡೆಯಲಿವೆ.

ಕಳೆದ ಬಾರಿಯಂತೆ ಈ ಬಾರಿಯೂ ಸಿಸಿ ಕ್ಯಾಮರಾ, ವೆಬ್ ಕಾಸ್ಟಿಂಗ್ ಕಣ್ಗಾವಲಿನಲ್ಲಿ ಪರೀಕ್ಷೆ ನಡೆಸಲಾಗುವುದು. ಏಪ್ರಿಲ್ 4ರವರೆಗೆ ಪರೀಕ್ಷೆ ನಡೆಸಲು ಶಾಲಾ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ ಮಂಡಳಿ ಸಕಲ ಸಿದ್ಧತೆ ಮಾಡಿಕೊಂಡಿದೆ.

8.42 ಲಕ್ಷ ತರಗತಿ ವಿದ್ಯಾರ್ಥಿಗಳು ಸೇರಿ ಒಟ್ಟು 8,96,887 ವಿದ್ಯಾರ್ಥಿಗಳು ಪರೀಕ್ಷೆಗೆ ನೋಂದಾಯಿಸಿಕೊಂಡಿದ್ದಾರೆ. 3.35 ಲಕ್ಷಕ್ಕೂ ಹೆಚ್ಚು ವಿದ್ಯಾರ್ಥಿಗಳು 3.78 ಲಕ್ಷಕ್ಕೂ ಹೆಚ್ಚು ವಿದ್ಯಾರ್ಥಿನಿಯರು, ಐವರು ತೃತೀಯ ಲಿಂಗಿಗಳು 2818 ಕೇಂದ್ರಗಳಲ್ಲಿ ಪರೀಕ್ಷೆ ನಡೆಯಲಿದ್ದಾರೆ.

ಬೆಳಗ್ಗೆ 10 ಗಂಟೆಗೆ ಪರೀಕ್ಷೆ ಆರಂಭವಾಗಲಿದ್ದು, 9ಗಂಟೆಯೊಳಗೆ ಪರೀಕ್ಷಾ ಕೇಂದ್ರಕ್ಕೆ ತಲುಪಿ ತಮ್ಮ ನೋಂದಣಿ ಸಂಖ್ಯೆ ಯಾವ ಕೊಠಡಿಯಲ್ಲಿ ದಾಖಲಾಗಿದೆ ಎನ್ನುವುದನ್ನು ಪರೀಕ್ಷೆ ಕೇಂದ್ರದ ಆವರಣದಲ್ಲಿ ಪ್ರಕಟಿಸಿರುವ ಮಾಹಿತಿ ಫಲಕದಲ್ಲಿ ನೋಡಿಕೊಳ್ಳಿ. ಮನೆಯಿಂದ ಹೊರಡುವಾಗ ತಪ್ಪದೆ ಹಾಲ್ ಟಿಕೆಟ್, ನೀಲಿ ಬಾಲ್ ಪಾಯಿಂಟ್ ಎರಡು ಮೂರು ಪೆನ್ನುಗಳನ್ನು ತೆಗೆದುಕೊಂಡು ಹೋಗಿ. ಯಾವುದೇ ಎಲೆಕ್ಟ್ರಾನಿಕ್ ಉಪಕರಣ ತೆಗೆದುಕೊಂಡು ಹೋಗಬೇಡಿ.

ಎಲ್ಲೆಡೆ ಸುಗಮವಾಗಿ ಪರೀಕ್ಷೆ ನಡೆಸಲು ಸಕಲ ಸಿದ್ಧತೆ ಮಾಡಿಕೊಳ್ಳಲಾಗಿದೆ. 2818 ಸ್ಥಾನಿಕ ದಳ, ಜಿಲ್ಲಾ ಹಂತದಲ್ಲಿ ಮತ್ತು ತಾಲೂಕು ಹಂತದಲ್ಲಿ ವಿಚಕ್ಷಣಾ ದಳ ವೆಬ್ ಕಾಸ್ಟಿಂಗ್, ಸಿಸಿ ಕ್ಯಾಮೆರಾ, ಪರೀಕ್ಷಾ ಕೇಂದ್ರಗಳ ಸುತ್ತಮುತ್ತ ನಿಷೇಧಾಜ್ಞೆ ಜಾರಿ ಸೇರಿದಂತೆ ಸುಗಮವಾಗಿ ಪರೀಕ್ಷೆ ನಡೆಸಲು ಹಲವು ಬಿಗಿ ಕ್ರಮ ಕೈಗೊಳ್ಳಲಾಗಿದೆ. ವಿದ್ಯಾರ್ಥಿ ಜೀವನ ಪಪ್ರಮುಖ ಘಟ್ಟ ಎಸ್ಎಸ್ಎಲ್ಸಿ ಪರೀಕ್ಷೆ ಬರೆಯುವ ವಿದ್ಯಾರ್ಥಿಗಳಿಗೆಲ್ಲಾ ಶುಭವಾಗಲಿ.

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read