ಬೆಂಗಳೂರು : ರಾಜ್ಯದಲ್ಲಿ ಎಸ್ಎಸ್ಎಲ್ಸಿ ಪರೀಕ್ಷೆ – 2 ಇದೇ ಮೇ 26 ರಿಂದ ಜೂನ್ 2ರ ವರೆಗೆ ನಡೆಯಲಿದೆ. ಅನುತ್ತೀರ್ಣರಾದವರು, ಫಲಿತಾಂಶ ವೃದ್ಧಿಸಿಕೊಳ್ಳಲು ಬಯಸುವವರು, ಖಾಸಗಿಯಾಗಿ ಪರೀಕ್ಷೆ ತೆಗೆದುಕೊಳ್ಳುವವರು ಮೇ 10ರ ಒಳಗೆ ನೋಂದಣಿ ಮಾಡಿಕೊಳ್ಳಬೇಕು ಎಂದು ಪ್ರಕಟಣೆ ಹೊರಡಿಸಿದೆ.
ಪರೀಕ್ಷೆ – 1ರಲ್ಲಿ ಅನುತ್ತೀರ್ಣರಾದ ವಿದ್ಯಾರ್ಥಿಗಳಿಗೆ ಪರೀಕ್ಷಾ ಶುಲ್ಕ ಇರುವುದಿಲ್ಲ. ಫಲಿತಾಂಶ ವೃದ್ಧಿಸಿಕೊಳ್ಳಲು ಬಯಸುವವರು ಶುಲ್ಕ ಪಾವತಿಸಬೇಕು ಎಂದು ಪ್ರಕಟಣೆ ಹೊರಡಿಸಿದೆ.
ಕರ್ನಾಟಕ ‘ಎಸ್ ಎಸ್ ಎಲ್ ಸಿ’ ಫಲಿತಾಂಶ ನಿನ್ನೆ ಪ್ರಕಟವಾಗಿದ್ದು, 22 ವಿದ್ಯಾರ್ಥಿಗಳು 625 ಕ್ಕೆ 625 ಅಂಕ ಪಡೆದಿದ್ದಾರೆ.ಈ ಬಾರಿ ಪರೀಕ್ಷೆಗೆ ಹಾಜರಾದ 842173 ವಿದ್ಯಾರ್ಥಿಗಳ ಪೈಕಿ 524984 ವಿದ್ಯಾರ್ಥಿಗಳು ಪಾಸಾಗಿದ್ದಾರೆ.ಪರೀಕ್ಷೆಗೆ ಹಾಜರಾದ 390311 ಬಾಲಕರ ಪೈಕಿ 226637 ಬಾಲಕರು ಪಾಸಾಗಿದ್ದರೆ, ಪರೀಕ್ಷೆಗೆ ಹಾಜರಾದ 400579 ಬಾಲಕಿಯರ ಪೈಕಿ 296438 ವಿದ್ಯಾರ್ಥಿಗಳು ಪಾಸಾಗಿದ್ದಾರೆ.
ಈ ವರ್ಷದ ಎಸ್ಎಸ್ಎಲ್ಸಿ ಫಲಿತಾಂಶದಲ್ಲಿ 625 ಕ್ಕೆ 625 ಅಂಕಗಳನ್ನು 22 ವಿದ್ಯಾರ್ಥಿಗಳು ಪಡೆದಿದ್ದಾರೆ. ಹಾಗೆಯೇ 624 ಅಂಕಗಳನ್ನು 65 ವಿದ್ಯಾರ್ಥಿಗಳು, 623 ಅಂಕಗಳನ್ನು 108 ವಿದ್ಯಾರ್ಥಿಗಳು, 622 ಅಂಕಗಳನ್ನು 189 ವಿದ್ಯಾರ್ಥಿಗಳು ಪಡೆದಿದ್ದಾರೆ.
ಎಸ್ಎಸ್ಎಲ್ಸಿ ಪರೀಕ್ಷೆ – 2 ಇದೇ ಮೇ 26 ರಿಂದ ಜೂನ್ 2ರ ವರೆಗೆ ನಡೆಯಲಿದೆ. ಅನುತ್ತೀರ್ಣರಾದವರು, ಫಲಿತಾಂಶ ವೃದ್ಧಿಸಿಕೊಳ್ಳಲು ಬಯಸುವವರು, ಖಾಸಗಿಯಾಗಿ ಪರೀಕ್ಷೆ ತೆಗೆದುಕೊಳ್ಳುವವರು ಮೇ 10ರ ಒಳಗೆ ನೋಂದಣಿ ಮಾಡಿಕೊಳ್ಳಬೇಕು.
— DIPR Karnataka (@KarnatakaVarthe) May 3, 2025
ಪರೀಕ್ಷೆ – 1ರಲ್ಲಿ ಅನುತ್ತೀರ್ಣರಾದ ವಿದ್ಯಾರ್ಥಿಗಳಿಗೆ ಪರೀಕ್ಷಾ ಶುಲ್ಕ ಇರುವುದಿಲ್ಲ. ಫಲಿತಾಂಶ… pic.twitter.com/T2EywFVzki