SSLC ಪರೀಕ್ಷೆ: ವೀಕ್ಷಣಾ ಜಾಗೃತಾ ದಳ ನೇಮಕ – ಪಾರದರ್ಶಕತೆಗೆ ಕ್ರಮ

ಮಾ. 21 ರಿಂದ ಏ. 04 ರವರೆಗೆ ಬಳ್ಳಾರಿ ಜಿಲ್ಲೆಯ 64 ಪರೀಕ್ಷಾ ಕೇಂದ್ರಗಳಲ್ಲಿ ಎಸ್‌ಎಸ್‌ಎಲ್‌ಸಿ ಮುಖ್ಯ ಪರೀಕ್ಷೆ-1 ನಡೆಯಲಿದ್ದು, ಆಯಾ ಕೇಂದ್ರಗಳಿಗೆ ವಿವಿಧ ಇಲಾಖಾ ಅಧಿಕಾರಿಗಳನ್ನೊಳಗೊಂಡ ವೀಕ್ಷಣಾ ಜಾಗೃತಾ ದಳ ರಚಿಸಿ ವೀಕ್ಷಕರನ್ನಾಗಿ ನೇಮಿಸಲಾಗಿದೆ ಎಂದು ಜಿಲ್ಲಾಧಿಕಾರಿ ಪ್ರಶಾಂತ್ ಕುಮಾರ್ ಮಿಶ್ರಾ ಅವರು ತಿಳಿಸಿದ್ದಾರೆ.

ಜಿಲ್ಲೆಯ ಆಯಾ ತಾಲ್ಲೂಕುಗಳಲ್ಲಿನ ಪರೀಕ್ಷಾ ಕೇಂದ್ರಗಳಿಗೆ ನೇಮಿಸಿರುವ ಅಧಿಕಾರಿಗಳು ಮಾ. 21 ರಿಂದ ಏ. 04 ರವರೆಗೆ ನಡೆಯುವ ಎಸ್‌ಎಸ್‌ಎಲ್‌ಸಿ ಪರೀಕ್ಷೆ-1ರ ದಿನಗಳಂದು ಪರೀಕ್ಷೆ ಪ್ರಾರಂಭವಾಗುವ ಸಮಯದಿಂದ ಮುಕ್ತಾಯದ ವರೆಗೆ ಕಡ್ಡಾಯವಾಗಿ 4-5 ಪರೀಕ್ಷಾ ಕೇಂದ್ರಗಳಿಗೆ ಪಾಳಿ ಪದ್ಧತಿಯಲ್ಲಿ ಭೇಟಿ ನೀಡಿ ಪರೀಕ್ಷೆಯು ಪಾರದರ್ಶಕವಾಗಿ ನಡೆಯುತ್ತಿರುವ ಕುರಿತು ಪರಿಶೀಲಿಸುವರು.

ವೇಳಾ ಪಟ್ಟಿಯ ಅನುಸಾರ ಪರಿಶೀಲಿಸಿದ ಕಾರ್ಯದ ಕುರಿತು ವರದಿಯನ್ನು ಶಾಲಾ ಶಿಕ್ಷಣ ಇಲಾಖೆಯ ಉಪನಿರ್ದೇಶಕರಿಗೆ ಸಲ್ಲಿಸುವಂತೆ ಜಿಲ್ಲಾಧಿಕಾರಿ ಪ್ರಶಾಂತ್ ಕುಮಾರ್ ಮಿಶ್ರಾ ಅವರು ತಿಳಿಸಿದ್ದಾರೆ.

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read