ಬೆಂಗಳೂರು: ರಾಜ್ಯದಲ್ಲಿ ಎಸ್ಎಸ್ಎಲ್ಸಿ ಪರೀಕ್ಷಾ ಶುಲ್ಕವನ್ನು ಶಿಕ್ಷಣ ಇಲಾಖೆ ಶೇಕಡ 5ರಷ್ಟು ಹೆಚ್ಚಳ ಮಾಡಿದೆ. ಇದಕ್ಕೆ ಪೋಷಕರಿಂದ ವಿರೋಧ ವ್ಯಕ್ತವಾಗಿದೆ.
ಹೌದು, ಎಸ್ಎಸ್‌ಎಲ್‌ಸಿ ವಿದ್ಯಾರ್ಥಿಗಳ ಪರೀಕ್ಷಾ ಶುಲ್ಕ ಹೆಚ್ಚಳಕ್ಕೆ ವಿರೋಧ ವ್ಯಕ್ತವಾಗಿದೆ. ಪ್ರಸ್ತುತ ಎಸ್ಎಸ್‌ಎಲ್‌ಸಿ ವಿದ್ಯಾರ್ಥಿಗಳ ಪರೀಕ್ಷಾ ಶುಲ್ಕ 676 ರೂಪಾಯಿ ಇದೆ. 2025 -26ನೇ ಸಾಲಿನ ವಿದ್ಯಾರ್ಥಿಗಳ ಪರೀಕ್ಷಾ ಶುಲ್ಕ 710 ರೂಪಾಯಿಗೆ ಏರಿಕೆ ಮಾಡಲಾಗಿದೆ. ಪರೀಕ್ಷಾ ಶುಲ್ಕ ಹೆಚ್ಚಳಕ್ಕೆ ವಿದ್ಯಾರ್ಥಿಗಳ ಪೋಷಕರು ವಿರೋಧ ವ್ಯಕ್ತಪಡಿಸಿದ್ದಾರೆ.
ಮೂರು ಪರೀಕ್ಷೆಗಳನ್ನು ನಡೆಸಿ ಇದೀಗ ಪರೀಕ್ಷಾ ಶುಲ್ಕವನ್ನು ಇಲಾಖೆ ಹೆಚ್ಚಳ ಮಾಡಿದೆ. ಪರೀಕ್ಷಾ ಶುಲ್ಕ ಹೆಚ್ಚಳದಿಂದ ಬಡ ವಿದ್ಯಾರ್ಥಿಗಳಿಗೆ ತೊಂದರೆಯಾಗುತ್ತದೆ ಎಂದು ಎಸ್ಎಸ್‌ಎಲ್‌ಸಿ ಪರೀಕ್ಷಾ ಶುಲ್ಕ ಏರಿಕೆಗೆ ಪೋಷಕರು ತೀವ್ರ ಅಸಮಾಧಾನ ವ್ಯಕ್ತಪಡಿಸಿದ್ದಾರೆ.